AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್!

ಕಾಸರಗೋಡಿನ ಅಡೂರ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮನೆಯ ಡ್ರಾಯರ್‌ನಲ್ಲಿ ಸಿಕ್ಕಿದ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಬಿಗಿಯಾಗಿ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಉಂಗುರವನ್ನು ತೆಗೆದು ಕಾಡಿಗೆ ಬಿಟ್ಟಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಮಕ್ಕಳ ಸಮಯೋಚಿತ ನಿರ್ಧಾರದಿಂದ ದೊಡ್ಡ ಅಪಾಯ ತಪ್ಪಿದೆ.

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್!
ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ
ಅಕ್ಷಯ್​ ಪಲ್ಲಮಜಲು​​
|

Updated on:May 06, 2026 | 6:32 AM

Share

ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ ನೋಡಿ. ರವಿ ಅವರ ಮಕ್ಕಳು ಮನೆಯೊಳಗೆ ಆಟವಾಡುತ್ತಾ ಟೇಬಲ್‌ನ ಡ್ರಾಯರ್ ತೆರೆದಾಗ ಅದರೊಳಗೆ ದೊಡ್ಡ ಕೇರೆ ಹಾವೊಂದು ಸುರುಳಿ ಸುತ್ತಿಕೊಂಡು ಕುಳಿತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಹಾವನ್ನು ಗಮನಿಸಿದಾಗ ಅದರ ದೇಹದ ಮಧ್ಯಭಾಗದಲ್ಲಿ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಬಹುಶಃ ಆಹಾರದ ಹುಡುಕಾಟದಲ್ಲಿ ಡ್ರಾಯರ್‌ನ ಸಣ್ಣ ಸೀಳಿನ ಮೂಲಕ ಒಳಗೆ ಹೋಗುವಾಗ ಡ್ರಾಯರ್‌ನಲ್ಲಿದ್ದ ಉಂಗುರ ಹಾವಿನ ಮೈಗೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ!

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ರಕ್ಷಣಾ ಸಿಬ್ಬಂದಿ ಅತ್ಯಂತ ನಾಜೂಕಿನಿಂದ ಹಾವನ್ನು ಹೊರತೆಗೆದು, ಅದರ ಮೈಗೆ ಯಾವುದೇ ಗಾಯವಾಗದಂತೆ ಚಿನ್ನದ ಉಂಗುರವನ್ನು ಕತ್ತರಿಸಿ ತೆಗೆಯುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಮಕ್ಕಳು ಹಾವನ್ನು ಮುಟ್ಟಲು ಹೋಗದ ಕಾರಣ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Tue, 5 May 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ