Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ

ಜ್ಞಾನವಾಪಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Gyanvapi Masjid case: ಮುಂದಿನ ಆದೇಶದವರೆಗೆ ಶಿವಲಿಂಗ ಪ್ರದೇಶದ ರಕ್ಷಣೆಯ ಆದೇಶವನ್ನು ಮೇ 17ರವರೆಗೆ ವಿಸ್ತರಿಸಿದ ಸುಪ್ರೀಂ
ಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 11, 2022 | 4:52 PM

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆಯ ವೇಳೆ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಪ್ರದೇಶವನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ಮೇ 17ರವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಸಂಕೀರ್ಣದ ಹೊರಗೋಡೆಯ ಮೇಲಿರುವ ಮಾ ಶೃಂಗಾರ್ ಗೌರಿ ಸ್ಥಲಕ್ಕೆ ಪೂಜೆ ಸಲ್ಲಿಸುವ ಹಕ್ಕು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ವಾರಣಾಸಿ ನ್ಯಾಯಾಲಯವು ಏಪ್ರಿಲ್ 8ರಂದು ಆ ಸ್ಥಳದ ಪರಿಶೀಲನೆಗೆ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಿ, ವೀಡಿಯೋ ಸಮೀಕ್ಷೆಯನ್ನು ಸಿದ್ಧಪಡಿಸಲು ಸೂಚಿಸಿತ್ತು.

ಮಸೀದಿ ಸಮಿತಿಯು ಇದನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು, ಅಲಹಾಬಾದ್ ಹೈಕೋರ್ಟ್‌ ಏಪ್ರಿಲ್ 21 ರಂದು ಮೇಲ್ಮನವಿಯನ್ನು ವಜಾಗೊಳಿಸಿತು. ನಂತರ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಜ್ಞಾನವಾಪಿ ಸಾಲಿನಲ್ಲಿ ಸಲ್ಲಿಸಲಾದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಹಿಂದೂ ಸಮಿತಿಗಳಿಗೆ ಅನುಮತಿ ನೀಡಿದೆ.

ಸರ್ವೆ ಕಮಿಷನರ್ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಆಡಳಿತ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಮೂರು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಹಿಂದೂ ಸಮಿತಿಗಳಿಗೆ ಸೂಚಿಸಿದೆ.

Published On - 4:07 pm, Fri, 11 November 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ