ಬಿಹಾರದ 7ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಕಾಶ್ಮೀರ ಪ್ರತ್ಯೇಕ ದೇಶವೆಂದು ಪ್ರಸ್ತಾಪ; ಬಿಜೆಪಿ ಆಕ್ರೋಶ

ಬಿಹಾರ ಸರ್ಕಾರವು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವುದಿಲ್ಲ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಬಿಹಾರದ 7ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಕಾಶ್ಮೀರ ಪ್ರತ್ಯೇಕ ದೇಶವೆಂದು ಪ್ರಸ್ತಾಪ; ಬಿಜೆಪಿ ಆಕ್ರೋಶ
ಬಿಹಾರದ 7ನೇ ತರಗತಿಯ ಪ್ರಶ್ನೆಪತ್ರಿಕೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 19, 2022 | 11:21 AM

ಬಿಹಾರ: ಬಿಹಾರದ (Bihar) ಕಿಶನ್‌ಗಂಜ್ ಜಿಲ್ಲೆಯಲ್ಲಿ 7ನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಹಾರ ಎಜುಕೇಶನ್ ಪ್ರಾಜೆಕ್ಟ್ ಕೌನ್ಸಿಲ್ ನಡೆಸಿದ ಸಮೀಕ್ಷೆಯಲ್ಲಿ ಕಾಶ್ಮೀರವನ್ನು ಪ್ರತ್ಯೇಕ ದೇಶ ಎಂದು ಹೇಳುವ ಮೂಲಕ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದ್ದಂತೆ ಬಿಹಾರದ ಸಿಎಂ ನಿತೀಶ್ ಕುಮಾರ್ (CM Nitish Kumar) ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೆಲ್ಲ ನಡೆಯುವುದು ಸೀಮಾಂಚಲ್‌ನಲ್ಲಿ ಮಾತ್ರ ಎಂದು ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಟೀಕಿಸಿದ್ದಾರೆ.

ಬಿಹಾರ ಸರ್ಕಾರವು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸುವುದಿಲ್ಲ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. 7ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾದ ಪ್ರಶ್ನೆ ಪತ್ರಿಕೆಯಲ್ಲಿ ಈ ದೇಶಗಳ ಜನರನ್ನು ಏನೆಂದು ಕರೆಯುತ್ತಾರೆ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದರ ಕೆಳಗೆ ತಲಾ 2 ಅಂಕದಂತೆ 5 ಪ್ರಶ್ನೆಗಳನ್ನು ನೀಡಲಾಗಿತ್ತು. ಅದರಲ್ಲಿ ಚೀನಾ, ನೇಪಾಳ, ಇಂಗ್ಲೆಂಡ್ ಮತ್ತು ಭಾರತದೊಂದಿಗೆ ಕಾಶ್ಮೀರ ದೇಶದ ಜನರನ್ನು ಏನೆಂದು ಕರೆಯುತ್ತಾರೆ? ಎಂಬ ಆಯ್ಕೆಯನ್ನು ಸಹ ನೀಡಲಾಗಿತ್ತು. ಇದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ಇದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಬಿಹಾರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶುಕ್ರವಾರ ಸೀಮಾಂಚಲ್ ಪ್ರದೇಶದಾದ್ಯಂತ ಹಿಂದಿ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈಗ ಈ 7ನೇ ತರಗತಿಯ ಮಕ್ಕಳಿಗೆ ನೇಪಾಳ, ಚೀನಾ, ಇಂಗ್ಲೆಂಡ್, ಹಿಂದೂಸ್ತಾನ್ ಮತ್ತು ಕಾಶ್ಮೀರದಲ್ಲಿ ಜನರನ್ನು ಏನು ಕರೆಯುತ್ತಾರೆ ಎಂದು ಕೇಳಲಾಗಿದೆ. ಬಿಹಾರ ಕಾಶ್ಮೀರವನ್ನು ಭಾರತದ ಭಾಗವೆಂದು ಒಪ್ಪಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

ಬಿಹಾರ ಸರ್ಕಾರ ಮತ್ತು ಬಿಹಾರ ಸರ್ಕಾರದ ಸರ್ಕಾರಿ ಅಧಿಕಾರಿಗಳು ಕಾಶ್ಮೀರವನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಎಂಬುದು ಈ ಪ್ರಶ್ನೆಯಿಂದಲೇ ಸ್ಪಷ್ಟವಾಗಿದೆ ಎಂದು ಜೈಸ್ವಾಲ್ ಮಂಗಳವಾರ ತಮ್ಮ ಫೇಸ್‌ಬುಕ್ ಪೋಸ್ಟ್ ಮೂಲಕ ಹೇಳಿಕೊಂಡಿದ್ದಾರೆ. ಚೀನಾ, ಇಂಗ್ಲೆಂಡ್, ಭಾರತ ಮತ್ತು ನೇಪಾಳ ಒಂದೇ ದೇಶವಾಗಿರುವಂತೆಯೇ ಕಾಶ್ಮೀರವೂ ಒಂದು ರಾಷ್ಟ್ರ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಡುವ 7ನೇ ತರಗತಿಯ ಬಿಹಾರ ಶಿಕ್ಷಣ ಯೋಜನಾ ಮಂಡಳಿಯ ಪ್ರಶ್ನಾವಳಿಯೇ ಇದಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ