Big News: ಶೋಪಿಯಾನ್​ನಲ್ಲಿ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಬಲಿ; ಇನ್ನೋರ್ವನಿಗೆ ಗಂಭೀರ ಗಾಯ

| Updated By: ಸುಷ್ಮಾ ಚಕ್ರೆ

Updated on: Aug 16, 2022 | 1:19 PM

ಸೇಬಿನ ತೋಟದಲ್ಲಿ ಅಣ್ಣ-ತಮ್ಮ ಕೆಲಸ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಅಣ್ಣ ಸಾವನ್ನಪ್ಪಿದ್ದು, ತಮ್ಮ ಗಂಭೀರವಾಗಿ ಗಾಯಗೊಂಡಿದ್ದಾನೆ.

Big News: ಶೋಪಿಯಾನ್​ನಲ್ಲಿ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಬಲಿ; ಇನ್ನೋರ್ವನಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದಕರು ಮತ್ತೋರ್ವ ಕಾಶ್ಮೀರಿ ಪಂಡಿತ್​​ನನ್ನು ಗುಂಡಿಕ್ಕಿ ಕೊಂದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ (Shopian) ಚೋಟಿಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೇಬಿನ ತೋಟದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಗಾಯಗೊಂಡಿದ್ದು, ಇನ್ನೊಬ್ಬರು ಸಾವನ್ನಪ್ಪಿದ್ದಾರೆ.

ತೋಟದಲ್ಲಿ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ದಾಳಿಗೊಳಗಾದ ಇಬ್ಬರೂ ನಾಗರಿಕರು ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರಿ ಪಂಡಿತ್ ರಾಹುಲ್ ಭಟ್​ನನ್ನು ಕೊಂದಿದ್ದ ಇಬ್ಬರು ಉಗ್ರರು ಸೇರಿ ಮೂವರು ಭಯೋತ್ಪಾದಕರ ಎನ್​ಕೌಂಟರ್

ಸೇಬಿನ ತೋಟದಲ್ಲಿ ಅಣ್ಣ-ತಮ್ಮ ಕೆಲಸ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಅಣ್ಣ ಸಾವನ್ನಪ್ಪಿದ್ದು, ತಮ್ಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ. ಹೆಚ್ಚಿನ ವಿವರಗಳನ್ನು ನಂತರ ನೀಡಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ