AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ; ಮಕ್ಕಳನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ ಮೆಹಬೂಬಾ ಮುಫ್ತಿ

ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡುವುದಾಗಿ ಸಿಎಂ ಯೋಗಿ ಹೇಳಿದ್ದಾಗಿ ಮುಖ್ಯಮಂತ್ರಿ ಕಚೇರಿ ಟ್ವೀಟ್​ ಮಾಡಿದೆ.

ಆಗ್ರಾದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ; ಮಕ್ಕಳನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Edited By: |

Updated on: Oct 28, 2021 | 4:46 PM

Share

ಟಿ 20 ವಿಶ್ವಕಪ್​ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿ, ಪಾಕಿಸ್ತಾನವನ್ನು ಹೊಗಳಿ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ. ಕಾಲೇಜಿನಿಂದ ಕೂಡ ಅವರನ್ನು ಅಮಾನತುಗೊಳಿಸಲಾಗಿದೆ. ಇದೀಗ ಕಾಶ್ಮೀರದ ಪೀಪಲ್ಸ್​ ಡೆಮಾಕ್ರಟಿಕ್​ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti )ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.  

ಬಂಧಿತರಾದ ಮೂವರೂ ವಿದ್ಯಾರ್ಥಿಗಳು ಮೂಲತಃ ಕಾಶ್ಮೀರದವರೇ ಆಗಿದ್ದು, ಆಗ್ರಾದ ಬಲವಂತ್ ಸಿಂಗ್​ ಮ್ಯಾನೇಜ್​ಮೆಂಟ್​ ಟೆಕ್ನಿಕಲ್​ ಕಾಂಪ್ಲೆಂಕ್ಸ್​​ನಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದಾರೆ. ಬುಧವಾರ ಸಂಜೆ ಇವರನ್ನು ಅರೆಸ್ಟ್ ಮಾಡಲಾಗಿದ್ದು, ಜಗದೀಶ್​​ಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಆದರೆ ಯುಪಿ ಪೊಲೀಸರ ಈ ಕ್ರಮದ ವಿರುದ್ಧ ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿ ಅಸಮಾಧಾನಹೊರಹಾಕಿದ್ದಾರೆ.

ಜಮ್ಮು-ಕಾಶ್ಮೀರದ ಒಳಗಿರುವ ಮತ್ತು ಹೊರ ರಾಜ್ಯಗಳಲ್ಲಿ ಓದುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಸಲಾಗುತ್ತಿರುವ ದಬ್ಬಾಳಿಕೆ ಖಂಡನೀಯ. ಬಿಜೆಪಿಯ ಹುಸಿಯಾದ ದೇಶಭಕ್ತಿ ಭಾರತದ ಪರಿಕಲ್ಪನೆಯನ್ನೇ ಕಡೆಗಣಿಸುತ್ತಿದೆ. ನಿಜಹೇಳಬೇಕೆಂದರೆ ಕಳೆದ ಎರಡು ವರ್ಷಗಳಿಂದ ಇಲ್ಲಿನ ಜನರನ್ನು ಹತ್ತಿಕ್ಕಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕೇಂದ್ರ ಸರ್ಕಾರದ ಕಣ್ಣು ತೆರೆಸಬೇಕಿತ್ತು..ತಮ್ಮ ತಪ್ಪುಗಳನ್ನು ಅದು ತಿದ್ದುಕೊಳ್ಳಬೇಕಿತ್ತು ಎಂದು ಮುಫ್ತಿ ಕಿಡಿ ಕಾರಿದ್ದಾರೆ. ಬಂಧಿತ ಮಕ್ಕಳನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಇನ್ನು ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡುವುದಾಗಿ ಸಿಎಂ ಯೋಗಿ ಹೇಳಿದ್ದಾಗಿ ಮುಖ್ಯಮಂತ್ರಿ ಕಚೇರಿ ಟ್ವೀಟ್​ ಮಾಡಿದೆ. ಅದರ ಬೆನ್ನಲ್ಲೇ ಕಾಶ್ಮೀರದ ಮೂವರು ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಇವರನ್ನು ಹೊರತು ಪಡಿಸಿ ಕೂಡ ನಾಲ್ವರು ಅರೆಸ್ಟ್​ ಆಗಿದ್ದಾರೆ ಎಂದೂ ವರದಿಯಾಗಿದೆ.

ಇದನ್ನೂ ಓದಿ: ಟಿ 20 ವಿಶ್ವಕಪ್​ ಪಂದ್ಯದಲ್ಲಿ ಪಾಕ್​ ಗೆಲುವು ಸಂಭ್ರಮಿಸಿದ 3 ವಿದ್ಯಾರ್ಥಿಗಳ ಬಂಧನ; ದೇಶದ್ರೋಹ ಕೇಸ್​ ದಾಖಲಿಸಲು ಯುಪಿ ಸರ್ಕಾರ ನಿರ್ಧಾರ

T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ