ಟಿ 20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿ, ಪಾಕಿಸ್ತಾನವನ್ನು ಹೊಗಳಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಲಾಗಿದೆ. ಕಾಲೇಜಿನಿಂದ ಕೂಡ ಅವರನ್ನು ಅಮಾನತುಗೊಳಿಸಲಾಗಿದೆ. ಇದೀಗ ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti )ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಂಧಿತರಾದ ಮೂವರೂ ವಿದ್ಯಾರ್ಥಿಗಳು ಮೂಲತಃ ಕಾಶ್ಮೀರದವರೇ ಆಗಿದ್ದು, ಆಗ್ರಾದ ಬಲವಂತ್ ಸಿಂಗ್ ಮ್ಯಾನೇಜ್ಮೆಂಟ್ ಟೆಕ್ನಿಕಲ್ ಕಾಂಪ್ಲೆಂಕ್ಸ್ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾರೆ. ಬುಧವಾರ ಸಂಜೆ ಇವರನ್ನು ಅರೆಸ್ಟ್ ಮಾಡಲಾಗಿದ್ದು, ಜಗದೀಶ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ ಯುಪಿ ಪೊಲೀಸರ ಈ ಕ್ರಮದ ವಿರುದ್ಧ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ ಅಸಮಾಧಾನಹೊರಹಾಕಿದ್ದಾರೆ.
ಜಮ್ಮು-ಕಾಶ್ಮೀರದ ಒಳಗಿರುವ ಮತ್ತು ಹೊರ ರಾಜ್ಯಗಳಲ್ಲಿ ಓದುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಸಲಾಗುತ್ತಿರುವ ದಬ್ಬಾಳಿಕೆ ಖಂಡನೀಯ. ಬಿಜೆಪಿಯ ಹುಸಿಯಾದ ದೇಶಭಕ್ತಿ ಭಾರತದ ಪರಿಕಲ್ಪನೆಯನ್ನೇ ಕಡೆಗಣಿಸುತ್ತಿದೆ. ನಿಜಹೇಳಬೇಕೆಂದರೆ ಕಳೆದ ಎರಡು ವರ್ಷಗಳಿಂದ ಇಲ್ಲಿನ ಜನರನ್ನು ಹತ್ತಿಕ್ಕಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕೇಂದ್ರ ಸರ್ಕಾರದ ಕಣ್ಣು ತೆರೆಸಬೇಕಿತ್ತು..ತಮ್ಮ ತಪ್ಪುಗಳನ್ನು ಅದು ತಿದ್ದುಕೊಳ್ಳಬೇಕಿತ್ತು ಎಂದು ಮುಫ್ತಿ ಕಿಡಿ ಕಾರಿದ್ದಾರೆ. ಬಂಧಿತ ಮಕ್ಕಳನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.
Crackdown on Kashmiri students both within J&K & outside is reprehensible. Situation in J&K after two years of suppression should’ve been an eye opener for GOI & lead to course correction.BJPs pseudo patriotism disregards the idea of India. Release these students immediately https://t.co/3kCVPns36x
— Mehbooba Mufti (@MehboobaMufti) October 28, 2021
ಇನ್ನು ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡುವುದಾಗಿ ಸಿಎಂ ಯೋಗಿ ಹೇಳಿದ್ದಾಗಿ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಅದರ ಬೆನ್ನಲ್ಲೇ ಕಾಶ್ಮೀರದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬಂಧನಕ್ಕೆ ಒಳಗಾಗಿದ್ದಾರೆ. ಇವರನ್ನು ಹೊರತು ಪಡಿಸಿ ಕೂಡ ನಾಲ್ವರು ಅರೆಸ್ಟ್ ಆಗಿದ್ದಾರೆ ಎಂದೂ ವರದಿಯಾಗಿದೆ.
T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?