Kathua: ಕಥುವಾದ ಮನೆಗೆ ಬೆಂಕಿ, ಒಂದೇ ಕುಟುಂಬದ 6 ಮಂದಿ ಸಾವು, ನಾಲ್ವರಿಗೆ ಗಾಯ
ಜಮ್ಮು ಕಾಶ್ಮೀರದ ಕಥುವಾದ ಮನೆಯೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಬ್ಬರು ಮಕ್ಕಳು ಮನೆಗೆ ಬೆಂಕಿ ಹೊತ್ತಿಕೊಂಡಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಕಥುವಾದ ಮನೆಯೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಬ್ಬರು ಮಕ್ಕಳು ಮನೆಗೆ ಬೆಂಕಿ ಹೊತ್ತಿಕೊಂಡಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯಲ್ಲಿದ್ದವರು ಮಲಗಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ. ಬೆಳಗಿನ ಜಾವ 2.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಮನೆಗೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತರನ್ನು ಕಥುವಾದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹತ್ತು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ತಮಿಳುನಾಡಿನ ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 7 ಮಂದಿ ಸಾವು
ಪ್ರಾಥಮಿಕ ತನಿಖೆ ಪ್ರಕಾರ ಹೊಗೆಯನ್ನು ಸೇವಿಸಿದ ನಂತರ ಉಸಿರುಗಟ್ಟುವಿಕೆಯಿಂದ ಸಂತ್ರಸ್ತರು ಸಾವನ್ನಪ್ಪಿದ್ದಾರೆ ಎಂದು ಸೂಚಿಸುತ್ತದೆ, ಯಾವುದೇ ಸುಟ್ಟ ಗಾಯಗಳು ವರದಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
#WATCH | Kathua, J&K | Six died and four injured as a fire broke out at a house in Shiva Nagar.
Kathua GMC Principal, SK Atri says, “A fire broke out in a rented house of a retired assistant matron. Out of 10 people, 6 were brought dead and 4 of them were injured… Prima… pic.twitter.com/hUGiBzVDF5
— ANI (@ANI) December 18, 2024
ಮೇಲ್ನೋಟಕ್ಕೆ ಸಾವಿಗೆ ಉಸಿರುಗಟ್ಟುವಿಕೆ ಕಾರಣ ಎಂದು ತೋರುತ್ತದೆ ಎಂದು ಅವರು ಹೇಳಿದರು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅತ್ರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ