ಕೆಇಎ ಆದೇಶದ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ: ಒಮರ್ ಅಬ್ದುಲ್ಲಾ

|

Updated on: Nov 14, 2023 | 7:40 PM

ಇದು ಬೇಸರದ ಸಂಗತಿ, ಯಾವುದನ್ನು ಧರಿಸಬೇಕು ಯಾವುದನ್ನು ಧರಿಸಬಾರದು ಎಂಬುದಕ್ಕೆ ಸರ್ಕಾರವು ಮಧ್ಯಪ್ರವೇಶಿಸುತ್ತಿರುವುದೇಕೆ? ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಆದೇಶಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇದು ಸಂಭವಿಸಿದಾಗ, ಇದು ಬಿಜೆಪಿ ಸರ್ಕಾರವಾಗಿರುವುದರಿಂದ ನಮಗೆ ಆಶ್ಚರ್ಯವಾಗಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಆದೇಶಗಳು ಬಿಡುಗಡೆಯಾಗುತ್ತಿರುವುದು ಬೇಸರ ತಂದಿದೆ.

ಕೆಇಎ ಆದೇಶದ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ: ಒಮರ್ ಅಬ್ದುಲ್ಲಾ
ಓಮರ್ ಅಬ್ದುಲ್ಲಾ
Follow us on

ಬಾರಾಮುಲ್ಲಾ ನವೆಂಬರ್ 14 : ಮುಂಬರುವ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಹಾಲ್‌ನೊಳಗೆ ತಲೆ ಮುಚ್ಚುವ ವಸ್ತ್ರನಿಷೇಧಿಸುವ ರಾಜ್ಯದ ಪರೀಕ್ಷಾ ಪ್ರಾಧಿಕಾರದ ನಿರ್ಧಾರಕ್ಕೆ ಕರ್ನಾಟಕದ(Karnataka) ಕಾಂಗ್ರೆಸ್ (Congress) ಸರ್ಕಾರವನ್ನು ಟೀಕಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ (Omar Abdullah), ನಿರ್ದಿಷ್ಟವಾಗಿ ಮುಸ್ಲಿಮರನ್ನು ಗುರಿಯಾಗಿಸಲು ಆದೇಶವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇಂತಹ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂಬುದು ಬೇಸರದ ಸಂಗತಿ ಎಂದರು.

“ಇದು  ಬೇಸರದ ಸಂಗತಿ ಆಗಿದೆ, ಯಾವುದನ್ನು ಧರಿಸಬೇಕು ಯಾವುದನ್ನು ಧರಿಸಬಾರದು ಎಂಬುದಕ್ಕೆ ಸರ್ಕಾರವು ಮಧ್ಯಪ್ರವೇಶಿಸುತ್ತಿರುವುದೇಕೆ? ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಆದೇಶಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇದು ಸಂಭವಿಸಿದಾಗ, ಇದು ಬಿಜೆಪಿ ಸರ್ಕಾರವಾಗಿರುವುದರಿಂದ ನಮಗೆ ಆಶ್ಚರ್ಯವಾಗಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಆದೇಶಗಳು ಬಿಡುಗಡೆಯಾಗುತ್ತಿರುವುದು ಬೇಸರ ತಂದಿದೆ.ಕರ್ನಾಟಕದಲ್ಲಿ ಬಿಡುಗಡೆ ಮಾಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತೇನೆ ಎಂದು ಒಮರ್ ಅಬ್ದುಲ್ಲಾ ಹೇಳಿರುವುದಾಗಿ ಎಎನ್‌ಐಗೆ ತಿಳಿಸಿದರು.


ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ ರಾಜ್ಯದ ವಿವಿಧ ಮಂಡಳಿಗಳು ಮತ್ತು ನಿಗಮಗಳ ಮುಂಬರುವ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಪರೀಕ್ಷಾ ಹಾಲ್‌ಗಳ ಒಳಗೆ ತಲೆ ಮೇಲೆ ಯಾವುದೇ ವಸ್ತ್ರವನ್ನು ನಿಷೇಧಿಸಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಸಹ ನಿಷೇಧಿಸಿದೆ. ಒಮರ್ ಅಬ್ದುಲ್ಲಾ ಅವರ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

ಇದನ್ನೂ ಓದಿ:ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವಾಗ ಮುಖ, ತಲೆ ಮುಚ್ಚುವ ವಸ್ತ್ರ ನಿಷಿದ್ಧ; ಕೆಇಎ ಕಟ್ಟುನಿಟ್ಟಿನ ಆದೇಶ

ನವೆಂಬರ್ 6 ರಂದು, ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳೆಯೊಬ್ಬರು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಮಂಗಳಸೂತ್ರವನ್ನು ತೆಗೆಯುವಂತೆ ಹೇಳಲಾಗಿತ್ತು. ಈ ಘಟನೆ ನಂತರ, ಹಿಂದುತ್ವ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಾರಂಭಿಸಿದರು, ಪ್ರಾಧಿಕಾರವು ಪರೀಕ್ಷಾ ಹಾಲ್‌ನೊಳಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟಿತು.

ನವೆಂಬರ್ 18 ಮತ್ತು 19 ರಂದು ರಾಜ್ಯಾದ್ಯಂತ ನೇಮಕಾತಿ ಪರೀಕ್ಷೆಗಳು ನಡೆಯಲಿವೆ.

ವಿದ್ಯಾರ್ಥಿಗಳು ಬ್ಲೂಟೂತ್ ಸಾಧನಗಳನ್ನು ಬಳಸುತ್ತಾರೆ ಎಂಬ ದೂರುಗಳ ನಡುವೆ ರಾಜ್ಯ ಸರ್ಕಾರವು ಎಲ್ಲಾ ತಲೆ ಮೇಲಿನ ವಸ್ತ್ರ ನಿಷೇಧಿಸಿದೆ ಎಂದು ವರದಿಯಾಗಿದೆ. 2022ರ ಜನವರಿಯಲ್ಲಿ ಉಡುಪಿಯ ಸರಕಾರಿ ಪಿಯು ಕಾಲೇಜಿನ ಆಡಳಿತ ಮಂಡಳಿಯು ಹಿಜಾಬ್ ಧರಿಸಿದ ಆರು ಹುಡುಗಿಯರನ್ನು ಆವರಣಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದಾಗಿನಿಂದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಕರ್ನಾಟಕದಲ್ಲಿ ದೊಡ್ಡ ರಾಜಕೀಯ ವಿಷಯವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 pm, Tue, 14 November 23