AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ

Kedarnath piligrims dies of landslide near Gaurikund: ಉತ್ತರಾಖಂಡ್​ನ ಗೌರಿಕುಂಡ್​ ಸಮೀಪದ ಚೀರ್ಬಾಸ ಎಂಬಲ್ಲಿ ಭೂಕುಸಿತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಾರಾಷ್ಟ್ರದವರು, ಒಬ್ಬರು ಉತ್ತರಾಖಂಡ್​ನವರು. ಗೌರಿಕುಂಡ್​ನಿಂದ ಭಾನುವಾರ ಬೆಳಗ್ಗೆ ಕೇದಾರನಾಥ ಮಂದಿರಕ್ಕೆ ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ.

ಗೌರಿಕುಂಡ್ ಬಳಿ ಭೂಕುಸಿತ; ಕೇದಾರನಾಥಕ್ಕೆ ಹೋಗುತ್ತಿದ್ದ ಮೂವರು ಯಾತ್ರಿಕರ ಸಾವು; ಎಂಟು ಮಂದಿಗೆ ಗಾಯ
ಭೂಕುಸಿತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 12:44 PM

Share

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ರಕ್ಷಣಾ ತಂಡ ಧಾವಿಸಿ ಹೋಗಿದ್ದು, ಕೆಲವರನ್ನು ರಕ್ಷಿಸಲು ಯಶಸ್ವಿಯಾಗಿದೆ. ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿದ ಮೂವರನ್ನು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರದವರಾದರೆ, ಒಬ್ಬರು ಸ್ಥಳೀಯರೆನ್ನಲಾಗಿದೆ. ಮಹಾರಾಷ್ಟ್ರದ ನಾಗಪುರದ ಅರುಣ್ ಪರಟೆ (31 ವರ್ಷ) ಮತ್ತು ಜಲ್ನಾ ಜಿಲ್ಲೆಯ ಸುನೀಲ್ ಮಹಾದೇವ್ ಕಾಳೆ (24 ವರ್ಷ) ಹಾಗು ಉತ್ತರಾಖಂಡ್​ನ ತಿಲ್ವಾರದ ಅನುರಾಗ್ ಬಿಷ್ತ್ ಅವರು ಮೃತ ವ್ಯಕ್ತಿಗಳಾಗಿದ್ದಾರೆ.

ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

‘ಕೇದಾರನಾಥ ಯಾತ್ರೆಯ ಹಾದಿಯಲ್ಲಿ ಗುಡ್ಡದ ಮೇಲಿನಿಂದ ಕಲ್ಲು, ಮಣ್ಣು ಕುಸಿತು ಬಿದ್ದು, ಕೆಲ ಯಾತ್ರಿಕರಿಗೆ ಗಾಯವಾಗಿರುವ ಸುದ್ದಿ ಬಂದಿರುವುದು ವಿಷಾದನೀಯ. ಮೃತರ ಕುಟುಂಬಗಳಿಗೆ ಈ ನೋವು ಸಹಿಸಿಕೊಳ್ಳಲು ಆ ದೇವರು ಶಕ್ತಿ ಕೊಡಲಿ,’ ಎಂದು ಮುಖ್ಯಮಂತ್ರಿಗಳು ಎಕ್ಸ್ ಪೋಸ್ಟ್ ಹಾಕಿದ್ದಾರೆ.

ಇದನ್ನೂ ಓದಿ: ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಅಮರನಾಥ ಯಾತ್ರೆಗೆ ಜಮ್ಮು ಬಿಟ್ಟ ಹೊಸ ತಂಡ

ಭಾನುವಾರ ಬೆಳಗ್ಗೆ ಮೂರು ಸಾವಿರಕ್ಕೂ ಹೆಚ್ಚು ಯಾತ್ರಿಕರು ಜಮ್ಮುವಿನಿಂದ ಅಮರನಾಥಕ್ಕೆ ಹೊರಟಿದ್ದಾರೆ. ಅನಂತನಾಗ್ ಜಿಲ್ಲೆಯ ಪಹಲ್​ಗಮ್ ಬಳಿಯ ಹಿಮಾಲಯದ 12,756 ಅಡಿ ಎತ್ತರದಲ್ಲಿ ಗುಹೆಯೊಂದರಲ್ಲಿ ಅಮರನಾಥ ಮಂದಿರ ಇದೆ. ಪ್ರತೀ ವರ್ಷ ಲಕ್ಷಾಂತರ ಜನರು ದುರ್ಗಮ ವಾತಾವರಣದಲ್ಲಿ ಪಾದಯಾತ್ರೆ ಮೂಲಕ ಅಮರನಾಥಕ್ಕೆ ಹೋಗುತ್ತಾರೆ. ಈ ವರ್ಷ ಹೆಚ್ಚೂಕಡಿಮೆ ನಾಲ್ಕು ಲಕ್ಷ ಜನರು ಈ ಮಂದಿರಕ್ಕೆ ಹೋಗಿ ಶಿವಲಿಂಗ ದರ್ಶನ ಮಾಡಿ ಬಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ