Kejriwal Calls Emergency Meet: ಯಮುನಾ ನದಿಯ ನೀರಿನ ಮಟ್ಟ ಹೆಚ್ಚಳ, ದೆಹಲಿಯಲ್ಲಿ ಪ್ರವಾಹ ಸಾಧ್ಯತೆ, ಸಿಎಂ ಕೇಜ್ರಿವಾಲ್ ತುರ್ತು ಸಭೆ
Yamuna river: ಯಮುನಾ ನದಿಯ ನೀರಿನ ಮಟ್ಟ 207.55 ಮೀಟರ್‌ಗೆ ಉಬ್ಬಿಕೊಂಡಿದೆ ಎಂದು ಹೇಳಲಾಗಿದೆ. ಈ ಕಾರಣದಿಂದ ದೆಹಲಿಯಲ್ಲಿ ದೊಡ್ಡ ಪ್ರವಾಹ ಬರುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತುರ್ತು ಸಭೆ ಕರೆದಿದ್ದಾರೆ.
ದೆಹಲಿ; ದೇಶದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಇನ್ನೂ ಉತ್ತರ ಭಾರತದ ಅನೇಕ ಕಡೆ ಪ್ರವಾಹದ ಅಲೆ ಎದ್ದಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹದ ಭೀತಿ ಶುರುವಾಗಿದೆ, ಯಮುನಾ ನದಿಯ (yamuna river ) ನೀರಿನ ಮಟ್ಟ ಹೆಚ್ಚಾಗಿದ್ದು, 1978ರ ಇತಿಹಾಸವನ್ನು ಮುರಿದೆ ಎಂದು ಹೇಳಲಾಗಿದೆ, ಈ ಪರಿಸ್ಥಿತಿಯನ್ನು ಅವಲೋಕನ ಮಾಡಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇದೀಗ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. 1978ರಲ್ಲಿ ಯಮುನಾ ನದಿ ನೀರಿನ ಮಟ್ಟ 207.49 ಮೀಟರ್‌ಗಳನ್ನು ತಲುಪಿತ್ತು, ಇದೀಗ ಈ ಸಾರ್ವಕಾಲಿಕ ದಾಖಲೆಯನ್ನು ಮುರಿದು, ನದಿಯ ನೀರಿನ ಮಟ್ಟ 207.55 ಮೀಟರ್‌ಗೆ ಉಬ್ಬಿಕೊಂಡಿದೆ ಎಂದು ಹೇಳಲಾಗಿದೆ. ಈ ಕಾರಣದಿಂದ ದೆಹಲಿಯಲ್ಲಿ ದೊಡ್ಡ ಪ್ರವಾಹ ಬರುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಜು.12) ತುರ್ತು ಸಭೆ ಕರೆದಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ದಾಖಲೆಯ ಮಳೆ ಸುರಿದಿದ್ದರಿಂದ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಸಚಿವಾಲಯದಲ್ಲಿ ಸಭೆ ನಡೆಯಲಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಾಗುವಂತೆ ತಿಳಿಸಲಾಗಿದೆ ಎಂದು ಸರ್ಕಾರದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಪರಿಸ್ಥಿತಿ ಬಗ್ಗೆ ಮಾತನಾಡಿದ ಸಚಿವ ಅತಿಶಿ, ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಈಗಾಗಲೇ ಯಮುನಾ ನದಿಯ ಬಳಿ ವಾಸವಾಗಿರುವ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಯಮುನಾ ನದಿಯ ನೀರಿನ ಮಟ್ಟವನ್ನು ಕಡಿಮೆ ಮಾಡಲು ಎಲ್ಲ ರೀತಿಯ ತಾಂತ್ರಿಕ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಭಾರೀ ಮಳೆಗೆ ಉತ್ತರ ಭಾರತದಲ್ಲಿ ಭೂಕುಸಿತ, ಪ್ರವಾಹ ಪರಿಸ್ಥಿತಿ; ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದ ಐಎಂಡಿ
ಯಮುನಾ ನದಿಯ ನೀರಿನ ಮಟ್ಟ ಮಂಗಳವಾರವೇ 205.33 ಮೀಟರ್‌ನಷ್ಟು ತಲುಪಿತ್ತು, ಇದೀಗ ತೆರವು ಮತ್ತು ರಕ್ಷಣಾ ಕಾರ್ಯಕ್ಕಾಗಿ 45 ದೋಣಿಗಳನ್ನು ನಿಯೋಜಿಸಲಾಗಿದೆ ಮತ್ತು ಸ್ಥಳಾಂತರಿಸಲ್ಪಟ್ಟ ಜನರಿಗೆ ಪರಿಹಾರ ಒದಗಿಸಲು ಎನ್‌ಜಿಒಗಳನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ರಾಜ್ಯ ಪೊಲೀಸರು ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ. ನದಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಇದು ಅಪಾಯವನ್ನು ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:55 pm, Wed, 12 July 23