ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಭಾರತೀಯ ಕರೆನ್ಸಿ ನೋಟುಗಳಲ್ಲಿ ಗಾಂಧೀಜಿ ಜತೆಯಲ್ಲಿ ಲಕ್ಷ್ಮೀ ಹಾಗೂ ಗಣೇಶನ ಭಾವಚಿತ್ರವನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಟ್ವೀಟ್ ಮೂಲಕ ಈ ವಿಷಯ ಹಂಚಿಕೊಂಡಿದ್ದು, ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿದೇವಿ, ಗಣೇಶ ದೇವರ ಫೋಟೊಗಳನ್ನು ಸಹ ಮುದ್ರಿಸಬೇಕು ಎನ್ನುವುದು ನನ್ನ ಅಭಿಲಾಷೆ, ಈ ಕುರಿತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಲವು ಪ್ರಯತ್ನಗಳನ್ನು ನಾವು ಮಾಡಬೇಕಿದೆ, ಮೊದಲನೆಯದಾಗಿ ನೋಟುಗಳ ಮೇಲೆ ಲಕ್ಷ್ಮೀಯನ್ನು ಮುದ್ರಿಸಬೇಕಿದೆ ಎಂದರು.
ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದಿಲ್ಲ, ಆಗ ನಮಗೆ ದೇವರ ಅನುಗ್ರಹ ಬೇಕಾಗುತ್ತದೆ.
ಹೀಗಾಗಿ ಹೊಸದಾಗಿ ಮುದ್ರಿಸುವ ನೋಟುಗಳಲ್ಲಿ ಲಕ್ಷ್ಮಿದೇವಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
मैंने प्रधानमंत्री जी को पत्र लिखकर 130 करोड़ भारतवासियों की ओर से निवेदन किया है कि भारतीय करेंसी पर महात्मा गांधी जी के साथ-साथ लक्ष्मी गणेश जी की तस्वीर भी लगाई जाए। pic.twitter.com/OFQPIbNhfu
— Arvind Kejriwal (@ArvindKejriwal) October 28, 2022
ದೇಶದಲ್ಲಿ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ. ದೇಶದ ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ, ಈ ಪೈಕಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಸುಧಾರಿಸುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಇಂಡೋನೇಷ್ಯಾವು ತಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ದೇವರ ಫೋಟೋ ಮುದ್ರಿಸಿದೆ. ಹೀಗಾಗಿ ನಾವೇಕೆ ನಮ್ಮ ಕರೆನ್ಸಿ ನೋಟುಗಳ ಮೇಲೆ ಗಣೇಶನ ಫೋಟೋ ಮುದ್ರಿಸಬಾರದು? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಹೇಳಿಕೆ
ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣಪತಿ ಚಿತ್ರಗಳು ಬೇಕು ಎನ್ನುವ ಕೇಜ್ರೀವಾಲ್ ಹೇಳಿಕೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೆ ಸಿದ್ಧತೆ ತೀವ್ರಗೊಂಡಿರುವ ಈ ಹಂತದಲ್ಲಿ ತನ್ನ ಸಾಂಪ್ರದಾಯಿತ ಹಿಂದೂ ಮತ ಬ್ಯಾಂಕ್ಗೆ ಕೈ ಹಾಕಲು ಕೇಜ್ರಿವಾಲ್ ಈ ಹೇಳಿಕೆ ನೀಡಿರಬಹುದು ಎಂಬ ಮಾತು ಬಿಜೆಪಿಯ ವಲಯದಲ್ಲಿ ಕೇಳಿಬರುತ್ತಿದೆ.
ಮತ್ತೊಂದೆಡೆ ಕಾಂಗ್ರೆಸ್ ನಾಯಕರು ’ಹೀಗೆ ಮಾಡುವುದು ತಪ್ಪು. ನಿರ್ದಿಷ್ಟ ಧರ್ಮದ ಚಿಹ್ನೆಯನ್ನು ನೋಟಿನ ಮೇಲೆ ತರುವುದು ಸರಿಯಾಗಲಾರದು. ಲಕ್ಷ್ಮೀ-ಗಣಪತಿ ಫೋಟೊ ಹಾಕಿದ ತಕ್ಷಣ ದೇಶದ ಸಮಸ್ಯೆಗಳು ಪರಿಹಾರವಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:35 am, Fri, 28 October 22