ಪ್ರಯಾಣಿಕರ ಪ್ರಾಣ ಉಳಿಸಲೆಂದೇ ಇರುವ ಏರ್ಬ್ಯಾಗ್ ಮಗುವಿನ ಜೀವ ತೆಗೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಲಪ್ಪುರಂ ಜಿಲ್ಲೆಗಳಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿ ಏರ್ಬ್ಯಾಗ್ ತೆರೆದ ಕಾರಣ ಉಸಿರುಗಟ್ಟಿ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶುಕ್ರವಾರ ಸಂಜೆ ಮಗು ತನ್ನ ಕುಟುಂಬ ಸದಸ್ಯರೊಂದಿಗೆ ಕೊಟ್ಟಕ್ಕಲ್-ಪಡಪರಂಬು ಪ್ರದೇಶದ ಮೂಲಕ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಕಾರು ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ ಮತ್ತು ಡಿಕ್ಕಿಯ ಪರಿಣಾಮದ ಏರ್ ಬ್ಯಾಗ್ ತಕ್ಷಣವೇ ಓಪನ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಭಾಗದ ಸೀಟಿನಲ್ಲಿ ತನ್ನ ತಾಯಿಯ ಮಡಿಲಲ್ಲಿ ಕುಳಿತಿದ್ದ ಮಗು ಏರ್‌ಬ್ಯಾಗ್‌ಗೆ ಮುಖ ಒತ್ತಿದ ಕಾರಣ ಉಸಿರುಗಟ್ಟಿ ಸಾವನ್ನಪ್ಪಿದೆ. ತಾಯಿ ಸೇರಿದಂತೆ ಇತರ ನಾಲ್ವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್ಗೆ ಕಾರು ಡಿಕ್ಕಿ, 7 ಮಂದಿ ಸಾವು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಶಾಲಾ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದರು. ಕಲಾಪಿಪಾಲ್‌ನ ಆಗ್ಖೇಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಶಾಲೆಯ ಬಸ್ ಮಕ್ಕಳೊಂದಿಗೆ ಶಾಲೆಗೆ ಬರುತ್ತಿತ್ತು. ಇದೇ ವೇಳೆ ಆಗ್ಖೇಡಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ