AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಹರಿದ ಎಕ್ಸ್​ಪ್ರೆಸ್ ರೈಲು, ನಾಲ್ವರು ಸಾವು

ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಕೇರಳ: ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಹರಿದ ಎಕ್ಸ್​ಪ್ರೆಸ್ ರೈಲು, ನಾಲ್ವರು ಸಾವು
ರೈಲುImage Credit source: Aaj Tak
ನಯನಾ ರಾಜೀವ್
|

Updated on: Nov 03, 2024 | 10:41 AM

Share

ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್‌ ಕಸವನ್ನು ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ. ರೈಲು ಸಮೀಪಿಸುತ್ತಿರುವುದನ್ನು ಕಾರ್ಮಿಕರು ಗಮನಿಸದೇ ಇರಬಹುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ, ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ನಾಲ್ಕನೆಯವರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಮೀಪದ ಭಾರತಪುಳ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಓದಿ: ಮಗುವನ್ನೆತ್ತಿಕೊಂಡು ಫೋನ್​ನಲ್ಲಿ ಮಾತಾಡುತ್ತಾ ರೈಲಿಗೆ ಸಿಲುಕಿದ ತಾಯಿ

ರಾಜಸ್ಥಾನದ ಸಿಕರ್‌ನಲ್ಲಿ ಭೀಕರ ಬಸ್ ಅಪಘಾತ; 12 ಜನ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಇಂದು ಬಸ್ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲಾಸರ್‌ನಿಂದ ಬರುತ್ತಿದ್ದ ಬಸ್ ಸಿಕರ್ ಜಿಲ್ಲೆಯ ಲಕ್ಷ್ಮಣಗಢ್ ತಲುಪಿದ ನಂತರ ಮೋರಿಗೆ ಡಿಕ್ಕಿ ಹೊಡೆದಿದೆ.

ಈ ದುರಂತದಲ್ಲಿ ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಲಕ್ಷ್ಮಣಗಢದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಣಗಢದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಲಾಸರ್ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಹೇಳಿದ್ದಾರೆ. ಗಾಯಾಳುಗಳನ್ನು ಲಕ್ಷ್ಮಣಗಢ ಮತ್ತು ಸಿಕರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ