ಕೊಚ್ಚಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ನಾಲ್ವರು ವಲಸೆ ಕಾರ್ಮಿಕರು ಸಾವು; ಓರ್ವ ನಾಪತ್ತೆ
ಈ ಘಟನೆಯಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಇನ್ನೂ ಒಬ್ಬ ವ್ಯಕ್ತಿ ಅವಶೇಷಗಡಿ ಸಿಲುಕಿದ್ದಾನೆ.
ಕೊಚ್ಚಿ: ಕೇರಳದ ಕೊಚ್ಚಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ (Construction Site) ಸಂಭವಿಸಿದ ಮಣ್ಣು ಕುಸಿತದಿಂದ ನಾಲ್ವರು ವಲಸೆ ಕಾರ್ಮಿಕರು (Migrant Workers) ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಭೂಮಿ ಕುಸಿದು ಮೃತಪಟ್ಟ ನಾಲ್ವರು ಕಾರ್ಮಿಕರು ಪಶ್ಚಿಮ ಬಂಗಾಳದವರಾಗಿದ್ದಾರೆ. ಹಾಗೇ, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಒಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಜಾಫರ್ ಮಲಿಕ್ ತಿಳಿಸಿದ್ದಾರೆ. ಮಣ್ಣಿನ ಅಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ರಕ್ಷಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಲಿಕ್ ಹೇಳಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಕೊಚ್ಚಿ ಸಮೀಪದ ಕಲಮಶ್ಶೇರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇನ್ನೂ ಒಬ್ಬ ವ್ಯಕ್ತಿಯನ್ನು ಅವಶೇಷಗಳಿಂದ ರಕ್ಷಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಾಫರ್ ಮಲಿಕ್ ಇಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Kerala | Four migrant labourers died and two got injured in a mudslide that took place at a construction site at Electronics City in Kalamassery, Kochi. One more person is still trapped under the debris. Search operation is underway: Jafar Malik, District Collector, Ernakulam pic.twitter.com/LadQqlIIxO
— ANI (@ANI) March 18, 2022
ನಾಪತ್ತೆಯಾದವರ ಪತ್ತೆಗೆ ಸ್ನಿಫರ್ ಡಾಗ್‌ಗಳನ್ನು ತರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್. ನಾಗರಾಜು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಎಲ್ಲ ಕಾರ್ಮಿಕರು ಪಶ್ಚಿಮ ಬಂಗಾಳದವರಾಗಿದ್ದು, ಅವರ ಗುರುತುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕೈಗಾರಿಕಾ ಪ್ರದೇಶದ ಒಳಗೆ ಉತ್ಖನನ ಮಾಡುವಾಗ ಇಂದು ಮಧ್ಯಾಹ್ನ ಈ ದುರಂತ ಸಂಭವಿಸಿದೆ.
ಸ್ಥಳೀಯ ಸಂಸ್ಥೆಯ ಅನುಮತಿಯಿಲ್ಲದೆ ಮತ್ತು ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ, ಈ ಪ್ರದೇಶವು ವಿಶೇಷ ಆರ್ಥಿಕ ವಲಯ (SEZ) ಅಡಿಯಲ್ಲಿ ಬರುತ್ತದೆ ಮತ್ತು ಎಲ್ಲಾ ಅನುಮತಿಗಳನ್ನು ಸಿಂಗಲ್-ವಿಂಡೋ ಕ್ಲಿಯರೆನ್ಸ್ ಸಿಸ್ಟಮ್ ಮೂಲಕ ನೀಡಲಾಗಿದೆ ಎಂದು ಡಿಸಿ ಜಾಫರ್ ಮಲಿಕ್ ಹೇಳಿದ್ದಾರೆ. ಆದರೂ ಜಿಲ್ಲಾಡಳಿತವು ಎರ್ನಾಕುಲಂ ಎಡಿಎಂನಿಂದ ತನಿಖೆಯನ್ನು ಘೋಷಿಸಿದೆ.
ಇದನ್ನೂ ಓದಿ: ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ; 8 ಜನರ ರಕ್ಷಣೆ, ಇನ್ನೂ ಹಲವರು ಸಿಲುಕಿರುವ ಶಂಕೆ
Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ