ಕೇರಳ: ಕಾರು-ಬಸ್ ನಡುವೆ ಡಿಕ್ಕಿ, ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ಕೇರಳ: ಕಾರು-ಬಸ್ ನಡುವೆ ಡಿಕ್ಕಿ, ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು
ಅಪಘಾತ
Image Credit source: India Today

Updated on: Dec 03, 2024 | 8:55 AM

ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ಕಲರಕೋಡ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಡಿಕ್ಕಿಯ ಪರಿಣಾಮದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಕಾರನ್ನು ಸ್ವಲ್ಪ ಕತ್ತರಿಸಿ ಒಳಗಿದ್ದವರನ್ನು ಹೊರಗೆ ತೆಗೆಯಲಾಯಿತು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ನಂತರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ:  ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿದೆ
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ನವೆಂಬರ್ 26 ರಂದು ವೇಗವಾಗಿ ಬಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಮೃತ ಆರು ಮಂದಿಯಲ್ಲಿ ಐವರು ವೃತ್ತಿಯಲ್ಲಿ ವೈದ್ಯರು. ಸಂತ್ರಸ್ತರು ಸೈಫಾಯಿ ವೈದ್ಯಕೀಯ ಕಾಲೇಜಿನೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಲಕ್ನೋದಿಂದ ಸೈಫೈಗೆ ಹಿಂತಿರುಗುತ್ತಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ