AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ ಸಚಿವಾಲಯ, ಉದ್ಯಮಗಳಿಗೆ ಪ್ರೋತ್ಸಾಹ; ಕೇರಳ ಯುಡಿಎಫ್ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ

Kerala Assembly Elections 2021: ಶಬರಿಮಲೆ ಸ್ವಾಮಿ ಅಯ್ಯಪ್ಪನ ಕ್ಷೇತ್ರದ ಸಂಪ್ರದಾಯಗಳನ್ನು ರಕ್ಷಿಸಲು ನೂತನ ಕಾನೂನನ್ನು ಜಾರಿಗೊಳಿಸುವುದಾಗಿ ಮತ್ತು ರಾಜಸ್ಥಾನದ ಮಾದರಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಇಲಾಖೆಯನ್ನು ತರುವುದಾಗಿ ಯುಡಿಎಫ್ ಭರವಸೆ ನೀಡಿದೆ.

ಸಂತೋಷ ಸಚಿವಾಲಯ, ಉದ್ಯಮಗಳಿಗೆ ಪ್ರೋತ್ಸಾಹ; ಕೇರಳ ಯುಡಿಎಫ್ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರಣಾಳಿಕೆ ಬಿಡುಗಡೆ
TV9 Web
| Edited By: |

Updated on:Apr 06, 2022 | 6:57 PM

Share

ತಿರುವನಂತಪುರ: ಏಪ್ರಿಲ್ 6ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್ (UDF) ಇಂದು (ಮಾರ್ಚ್ 20) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ವಿಶೇಷ ಎಂಬಂತೆ, ಪ್ರಣಾಳಿಕೆಯ ಹಲವು ಅಂಶಗಳೊಂದಿಗೆ ಯುಡಿಎಫ್, ‘ಸಂತೋಷದ ಸಚಿವಾಲಯ’ (Ministry of Happiness) ರಚಿಸುವುದಾಗಿ ಹೇಳಿಕೆ ನೀಡಿದೆ.

ಉದ್ಯಮಗಳಿಗೆ ಪ್ರೋತ್ಸಾಹ ನಿಟ್ಟಿನಲ್ಲಿಯೂ ಕಾಂಗ್ರೆಸ್ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಹೂಡಿಕೆದಾರರಿಗೆ ರಕ್ಷಣೆ ನೀಡುವ ಸಲುವಾಗಿ Investor Protection Act ತರುವುದಾಗಿ, ಜೊತೆಗೆ, ಯಾವುದೇ ವಿಧದ ಸ್ಟ್ರೈಕ್​ಗಳು ಹಾಗೂ ಒತ್ತಾಯಪೂರ್ವಕವಾಗಿ ವ್ಯವಹಾರ ಮುಚ್ಚಿಸುವುದನ್ನು ನಿರ್ಬಂಧಿಸುವುದಾಗಿ ತಿಳಿಸಿದೆ.

ಯುಡಿಎಫ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಇದು ಒಂದು ಸಂಯೋಜಿತ ಪ್ರಣಾಳಿಕೆಯಾಗಿದೆ. ವಾಣಿಜ್ಯ ವ್ಯವಹಾರಗಳಿಗೆ ನಾವು ತೆರೆದುಕೊಂಡಿದ್ದೇವೆ. ಹೂಡಿಕೆದಾರರಿಗೆ ರಕ್ಷಣೆಯನ್ನೂ ನೀಡುತ್ತೇವೆ. ಸಂತೋಷದ ಸಚಿವಾಲಯವನ್ನೂ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಕೇರಳದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್, ಜನರ ಪ್ರಣಾಳಿಕೆ ಎಂದು ಕರೆದುಕೊಂಡಿದೆ. ಯುಡಿಎಫ್ ಚುನಾಯಿತವಾದರೆ, ಅರ್ಹ ಗೃಹಿಣಿಯರಿಗೆ ಪ್ರತಿ ತಿಂಗಳು ₹2,000 ಪಿಂಚಣಿ, 5 ಕೆ.ಜಿ. ಉಚಿತ ಅಕ್ಕಿ ಹಾಗೂ ಬಡವರಿಗೆ 5 ಲಕ್ಷ ಮನೆ ನಿರ್ಮಿಸಿ ಕೊಡುವುದಾಗಿ ತಿಳಿಸಿದೆ.

ಶಬರಿಮಲೆ ಸ್ವಾಮಿ ಅಯ್ಯಪ್ಪನ ಕ್ಷೇತ್ರದ ಸಂಪ್ರದಾಯಗಳನ್ನು ರಕ್ಷಿಸಲು ನೂತನ ಕಾನೂನನ್ನು ಜಾರಿಗೊಳಿಸುವುದಾಗಿ ಮತ್ತು ರಾಜಸ್ಥಾನದ ಮಾದರಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಇಲಾಖೆಯನ್ನು ತರುವುದಾಗಿ ಯುಡಿಎಫ್ ಭರವಸೆ ನೀಡಿದೆ.

ಮಹಿಳಾ ಮತದಾರರನ್ನು ಕೇಂದ್ರೀಕರಿಸಿ, ಸರ್ಕಾರಿ ನೌಕರಿ ಪರೀಕ್ಷೆಗಳಿಗೆ ಹಾಜರಾಗುವ ತಾಯಂದಿರಿಗೆ ಎರಡು ವರ್ಷಗಳ ಹೆಚ್ಚುವರಿ ಅವಕಾಶ ನೀಡುವುದಾಗಿ ಹೇಳಿದೆ. Nyay ಯೋಜನೆ ಅಡಿಯಲ್ಲಿ ಒಳಗೊಳ್ಳದ 40ರಿಂದ 60 ವರ್ಷದ ಗೃಹಿಣಿಯರಿಗೆ ಮಾಸಿಕ 2000 ರೂ. ಪಿಂಚಣಿ ನೀಡುವುದಾಗಿ ಘೋಷಿಸಿದೆ. ಕೊವಿಡ್-19ಗೆ ತುತ್ತಾದವರಿಗೆ ಉಚಿತ ಆಹಾರ ಕಿಟ್ ನೀಡುವ ವಿಶ್ವಾಸವನ್ನು ಕೂಡ ಕಾಂಗ್ರೆಸ್ ನೀಡಿದೆ.

140 ವಿಧಾನಸಭಾ ಕ್ಷೇತ್ರಗಳಿಗೆ ಕೇರಳದಲ್ಲಿ ಏಪ್ರಿಲ್ 6ರಂದು ಮತದಾನ ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆಯು ಮೇ 2ರಂದು ನಡೆಯಲಿದೆ.

ಇದನ್ನೂ ಓದಿ: Kerala Assembly Elections 2021: ಕಲ್ಯಾಣ ಪಿಂಚಣಿ 2500 ರೂ, ಗೃಹಿಣಿಯರಿಗೂ ಸಿಗಲಿದೆ ಪಿಂಚಣಿ: ಚುನಾವಣೆ ಪ್ರಣಾಳಿಕೆ ಪ್ರಕಟಿಸಿದ ಎಲ್​ಡಿಎಫ್

Tamil Nadu Assembly Elections 2021: ಮದ್ಯದಂಗಡಿ ಮುಚ್ಚುವ ಭರವಸೆ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ; ಆಕರ್ಷಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್

Published On - 3:35 pm, Sat, 20 March 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!