Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರ್ಯಾವೆಲರ್​ಗೆ ಆಟೋ ಡಿಕ್ಕಿ, ಐವರು ಸಾವು

ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೇರಳ: ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರ್ಯಾವೆಲರ್​ಗೆ ಆಟೋ ಡಿಕ್ಕಿ, ಐವರು ಸಾವು
Image Credit source: India Today
Follow us
ನಯನಾ ರಾಜೀವ್
|

Updated on: Dec 16, 2023 | 8:53 AM

ಕೇರಳದ ಮಂಚೇರಿಯಲ್ಲಿ ಶಬರಿಮಲೆ(Sabarimala) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾದಯಾತ್ರೆ ವೇಳೆ ಬಾಲಕಿ ಸಾವು ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4 ರಿಂದ 5 ಗಂಟೆಯ ನಡುವೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ. ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ