ಕೇರಳದ ಮಂಚೇರಿಯಲ್ಲಿ ಶಬರಿಮಲೆ(Sabarimala) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾದಯಾತ್ರೆ ವೇಳೆ ಬಾಲಕಿ ಸಾವು
ಶಬರಿಮಲೆ(Sabarimala)ಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು
ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4 ರಿಂದ 5 ಗಂಟೆಯ ನಡುವೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು ತಿಳಿದುಬಂದಿದೆ. ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ