Kerala Boat Tragedy: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್

ತನೂರಿನ ದೋಣಿ ದುರಂತ ಬಗ್ಗೆ ಮೇ 12 ರೊಳಗೆ ವರದಿ ಸಲ್ಲಿಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಅದೇ ವೇಳೆ ದೋಣಿ ದುರಂತ ಘಟನೆಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ನ್ಯಾಯಾಲಯ ಟೀಕಿಸಿದೆ

Kerala Boat Tragedy: ಕೇರಳದ ಬೋಟ್ ದುರಂತ ಕಾಡುತ್ತದೆ, ಅದನ್ನು ಮರೆಯಬಾರದು: ಹೈಕೋರ್ಟ್
ಕೇರಳ ದೋಣಿ ದುರಂತ
Follow us
|

Updated on:May 09, 2023 | 12:57 PM

ತಿರುವನಂತಪುರಂ: ಕೇರಳದ (Kerala) ಮಲಪ್ಪುರಂ (Malappuram) ಜಲ್ಲೆಯ ತಾನೂರಿನಲ್ಲಿ (Tanur Boat Tragedy) ಸಂಭವಿಸಿದ ಹೌಸ್ ಬೋಟ್ ದುರಂತ ಕಾಡುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಈ ದುರಂತದಲ್ಲಿ 15 ಮಕ್ಕಳು ಸೇರಿದಂತೆ 22 ಮಂದಿ ಸಾವಿಗೀಡಾಗಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದ ಹೈಕೋರ್ಟ್,ದುರಂತವನ್ನು ಮರೆಯಬಾರದು ಎಂದು ಹೇಳಿದೆ. ಇದೇ ಮೊದಲಲ್ಲ. ಈ ರೀತಿಯ ಘಟನೆ ನಡೆದಾಗಲೆಲ್ಲಾ ಕೆಲವು ತನಿಖೆ ಅಥವಾ ಶಿಫಾರಸುಗಳು ಇರುತ್ತವೆ. ಎಲ್ಲವೂ ಮರೆತುಹೋಗಿದೆ. (ನಂತರ) ಇದು ಮತ್ತೆ ಸಂಭವಿಸುತ್ತದೆ, ಜನರು ಸಾಯುತ್ತಾರೆ, ಆಪರೇಟರ್ ಹೊರತುಪಡಿಸಿ ಬೇರೆ ಯಾರೂ ಜವಾಬ್ದಾರರಲ್ಲವೇ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ಪ್ರದೇಶದ ಉಸ್ತುವಾರಿ ಬಂದರು ಅಧಿಕಾರಿಯಿಂದ ವಿವರಗಳನ್ನು ಕೇಳಿದೆ. ಇನ್‌ಲ್ಯಾಂಡ್ ನ್ಯಾವಿಗೇಷನ್‌ನ ಉಸ್ತುವಾರಿ ಯಾರು? ನಮಗೆ ವಿವರಗಳು ತಿಳಿದಿಲ್ಲ. ನಾವು ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೀಠ ಹೇಳಿದೆ.

ಹಿಂದಿನ ದುರಂತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಾಲಯ, ಕೆಲವು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲೂ ಇದನ್ನು ಮಾಡಲಾಗಿದೆ. ಆದರೆ ಯಾವುದೇ ನಿರ್ವಾಹಕರು ಇದನ್ನೆಲ್ಲಾ ತಾವಾಗಿಯೇ ಮಾಡಲು ಸಾಧ್ಯವಿಲ್ಲ. ಇದೆಲ್ಲವೂ ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ ಕೆಲವು ಬೆಂಬಲ ಸ್ವೀಕರಿಸಿ ಮಾಡಲಾಗಿದೆ. ಸಮಸ್ಯೆಯ ಮೂಲ ಯಾವುದು ಎಂಬುದನ್ನು ನಾವು ತಿಳಿಯಬೇಕಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: Kerala boat tragedy: ಬೋಟ್​​ನ ಗಾಜು ಕೈಯಿಂದಲೇ ಒಡೆದು 7 ಜನರನ್ನು ರಕ್ಷಿಸಿದ ರಶೀದ್, ತಾನೂರಿನ ಸ್ಥಳೀಯರೇ ರಿಯಲ್ ಹೀರೋಗಳು

ತನೂರಿನ ದೋಣಿ ದುರಂತ ಬಗ್ಗೆ ಮೇ 12 ರೊಳಗೆ ವರದಿ ಸಲ್ಲಿಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಅದೇ ವೇಳೆ ದೋಣಿ ದುರಂತ ಘಟನೆಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ನ್ಯಾಯಾಲಯ ಟೀಕಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Tue, 9 May 23

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ