Kerala Boat Tragedy: ಕೇರಳದಲ್ಲಿ ಬೋಟ್ ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ

ಕೇರಳದ ಮಲಪ್ಪುರಂನಲ್ಲಿ ಬೋಟ್ ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಜೆ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿತ್ತು

Kerala Boat Tragedy: ಕೇರಳದಲ್ಲಿ ಬೋಟ್ ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ
ಕೇರಳ ಬೋಟ್ ದುರಂತ
Follow us
ನಯನಾ ರಾಜೀವ್
|

Updated on: May 08, 2023 | 9:49 AM

ಕೇರಳದ ಮಲಪ್ಪುರಂನಲ್ಲಿ ಬೋಟ್ (Boat) ಮುಳುಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಜೆ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿತ್ತು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ ಇಲ್ಲಿಯವರೆಗೆ 22 ಮಂದಿ ಶವ ಪತ್ತೆಯಾಗಿದೆ. ಭಾನುವಾರ ರಜಾದಿನವಾಗಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೋಟಿನಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ಬೋಟ್ ದುರಂತದಿಂದ ಪ್ರಾಣಹಾನಿಯಾಗಿದೆ, ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ ಅಷ್ಟೇ ಅಲ್ಲದೆ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಂತಾಪ ಸೂಚಿಸಿದ್ದಾರೆ, ಕೇರಳದಲ್ಲಿ ಇಂದು ಅಧಿಕೃತ ಶೋಕಾಚರಣೆಯನ್ನು ಘೋಷಿಸಲಾಗಿದೆ.

ವರದಿಗಳ ಪ್ರಕಾರ, ಪೊಲೀಸ್ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ ಮತ್ತು ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: Malappuram: ಪ್ರವಾಸಿಗರಿದ್ದ ಬೋಟ್ ಪಲ್ಟಿ: ಆರು ಮಕ್ಕಳು, ಮಹಿಳೆಯರು ಸೇರಿದಂತೆ 15 ಜನರು ದುರ್ಮರಣ

ಇದಕ್ಕೂ ಮೊದಲು, ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾ ಅವರು ಕನಿಷ್ಠ 4 ಜನರ ಸ್ಥಿತಿ ಗಂಭೀರವಾಗಿದ್ದು, ಕೊಟ್ಟಕ್ಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಹೇಳಿದರು. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ