Kerala Accident: ನಿಂತಿದ್ದ ಬಸ್​ಗೆ ಖಾಸಗಿ ಬಸ್ ಡಿಕ್ಕಿ​, 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ನಿಂತಿದ್ದ ಬಸ್​ ಒಂದಕ್ಕೆ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್​ಗಳಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Kerala Accident: ನಿಂತಿದ್ದ ಬಸ್​ಗೆ ಖಾಸಗಿ ಬಸ್ ಡಿಕ್ಕಿ​, 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
ಅಪಘಾತ
Follow us
ನಯನಾ ರಾಜೀವ್
|

Updated on: May 30, 2023 | 12:31 PM

ನಿಂತಿದ್ದ ಬಸ್​ ಒಂದಕ್ಕೆ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್​ಗಳಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಬಳಿ ಮಂಗಳವಾರ ಬೆಳಗ್ಗೆ ಎರಡು ಖಾಸಗಿ ಬಸ್​ಗಳ ನಡುವೆ ಅಪಘಾತ ಸಂಭವಿಸಿದೆ. ನಿರ್ಲಕ್ಷ್ಯದ ಚಾಲನೆಯೇ ಅಥವಾ ಅತಿವೇಗವೇ ಅಪಘಾತಕ್ಕೆ ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ 25 ಕ್ಕೂ ಹೆಚ್ಚು ಜನರಲ್ಲಿ ಇಬ್ಬರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ತ್ರಿಶೂರ್‌ಗೆ ಕರೆದೊಯ್ಯಲಾಗಿದೆ ಎಂದು ಇರಿಂಜಲಕುಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ:ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​ ಕಂದಕಕ್ಕೆ ಬಿದ್ದು 10 ಮಂದಿ ದುರ್ಮರಣ

ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂದಕಕ್ಕೆ ಬಿದ್ದ ಬಸ್​ 10 ಮಂದಿ ಸಾವು ಜಮ್ಮು-ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದಾಗ ಆಳವಾದ ಕಮರಿಗೆ ಬಿದ್ದಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಮ್ಮು ಡಿಸಿ ತಿಳಿಸಿದ್ದಾರೆ.

ಸೋಮವಾರ ನಡೆದ ಮತ್ತೊಂದು ಘಟನೆಯಲ್ಲಿ, ಕರ್ನಾಟಕದ ಮೈಸೂರಿನ ಟಿ ನರಸೀಪುರ ತಾಲೂಕಿನಲ್ಲಿ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ