ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ

ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು ಎಂದು ಆರೋಪಿಸಿದೆ.

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ
ಪಿಣರಾಯಿ ವಿಜಯನ್
Follow us
TV9 Web
| Updated By: Lakshmi Hegde

Updated on:Dec 19, 2021 | 3:10 PM

ಕೇರಳದಲ್ಲಿ 24 ಗಂಟೆಯಲ್ಲಿ ಇಬ್ಬರು ರಾಜಕೀಯ ಮುಖಂಡರ ಹತ್ಯೆ ನಡೆದಿದ್ದನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ( Kerala Chief Minister Pinarayi Vijayan)​ ಖಂಡಿಸಿದ್ದಾರೆ. ಶನಿವಾರ ಸೋಷಿಯಲ್​ ಡೆಮಾಕ್ರಟಿಕ್​ ಪಕ್ಷ (SDPI)ದ ನಾಯಕ ಕೆ.ಎಸ್​.ಶಾನ್​ ಅವರನ್ನು ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಅಲಪ್ಪುಳದ ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆಗೀಡಾಗಿದ್ದಾರೆ. ಈ ಎರಡೂ ನಾಯಕರ ಹತ್ಯೆಯ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ. ಕೃತ್ಯದ ಹಿಂದೆ ಯಾರಿದ್ದಾರೆ ಎಂದು ಪತ್ತೆಹಚ್ಚಿ, ರಾಜ್ಯಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪಿಣರಾಯಿ ವಿಜಯನ್​ ಹೇಳಿದ್ದಾರೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂಥ ಸಂಕುಚಿತ ಮನೋಭಾವ ಮತ್ತು ಅಮಾನವೀಯ ಕೃತ್ಯ ಎಸಗುವ ಜನರು ರಾಜ್ಯಕ್ಕೆ ಮಾರಕ. ಕೊಲೆ ಮಾಡುವವರ ಗುಂಪು, ದ್ವೇಷ ಸಾಧಿಸುವವರ ಗುಂಪುಗಳನ್ನೆಲ್ಲ ನಾಗರಿಕ ಸಮಾಜದಿಂದ ಬಹಿಷ್ಕರಿಸಿ, ದೂರವೇ ಇಡಬೇಕು ಎಂದಿದ್ದಾರೆ.  

ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್ ಅವರು ಆ ಪಕ್ಷದ ರಾಜ್ಯಕಾರ್ಯದರ್ಶಿಯಾಗಿದ್ದರು. ಇವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್​ ಹಲ್ಲೆ ಮಾಡಿತ್ತು. ಅದಾದ ಬೆನ್ನಲ್ಲೇ ಬಿಜೆಪಿಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ರಂಜಿತ್​ ಶ್ರೀನಿವಾಸ್​ರನ್ನು ಆಲಪ್ಪುಳಂನ ಅವರ ಮನೆಯ ಸಮೀಪವೇ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಸದ್ಯ ಆಲಪ್ಪುಳ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್​ 144 ಹೇರಲಾಗಿದೆ.

ಈಗ ಪರಸ್ಪರರ ಮೇಲೆ ಆರೋಪ ಇಬ್ಬರು ನಾಯಕರ ಹತ್ಯೆ ಬೆನ್ನಲ್ಲೇ ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಗಳ ನಾಯಕರು ಪರಸ್ಪರರ ಮೇಲೆ ಆರೋಪ ಹೊರೆಸುತ್ತಿದ್ದಾರೆ.  ಎಸ್​ಡಿಪಿಐ ನಾಯಕ ಕೆ.ಎಸ್​.ಶಾನ್​ರನ್ನು ಹತ್ಯೆ ಮಾಡಿದ್ದು, ರಾಷ್ಟ್ರೀಯ ಸ್ವಯಂ ಸೇವಕ (RSS)ದ ಕಾರ್ಯಕರ್ತರು. ಈ ಆರ್​ಎಸ್​ಎಸ್​ ಎಂಬುದು ಬಿಜೆಪಿ ಪೋಷಕ ಸಂಸ್ಥೆ ಎಂದು ಹೇಳಿದ್ದಾರೆ.  ಇನ್ನು ಬಿಜೆಪಿ ನಾಯಕ ರಂಜಿತ್​ ಶ್ರೀನಿವಾಸ್​ ಹತ್ಯೆ ಮಾಡಿದ್ದು, ನಿಷೇಧಿತ ಪಿಎಫ್​ಐ ಸಂಘಟನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್​ ಆರೋಪಿಸಿದ್ದಾರೆ. ಅಂದಹಾಗೆ ಈ ಪಿಎಫ್​ಐ ಎಂಬುದು ಎಸ್​ಡಿಪಿಐನ ಮೂಲ ಸಂಘಟನೆಯಾಗಿದೆ.

ಇದನ್ನೂ ಓದಿ: Smartphone Tips: ನಿಮಗೆ ಸ್ಮಾರ್ಟ್​ಫೋನ್​ನಲ್ಲಿ ಸ್ಕ್ರೀನ್ ರೆಕಾರ್ಡ್ ಮಾಡುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

Published On - 3:08 pm, Sun, 19 December 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ