ಪ್ರಧಾನಿ ಮೋದಿಯವರನ್ನು ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್
Pinarayi Vijayan meets Narendra Modi ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚಿಸಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಇಂದು (ಮಂಗಳವಾರ) ದೆಹಲಿಯಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಕೇರಳದ ಅರಣ್ಯ ಪ್ರದೇಶಗಳಿಗೆ ಸಮೀಪವಿರುವ ಪ್ರದೇಶಗಳ ರೈತರು ಮತ್ತು ನಿವಾಸಿಗಳು ಆ ಸ್ಥಳಗಳಲ್ಲಿ ಒಂದು ಕಿಲೋಮೀಟರ್ ಪರಿಸರ ಸೂಕ್ಷ್ಮ ವಲಯಗಳನ್ನು (ESZ) ಜಾರಿಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಿಣರಾಯಿ ಮತ್ತು ಮೋದಿ ನಡುವಿನ ಈ ಭೇಟಿ ನಡೆದಿದೆ. ಕೇರಳ ಮುಖ್ಯಮಂತ್ರಿ ಕಚೇರಿಯು ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದು, ಇತರ ಯಾವುದೇ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಭೆಯಲ್ಲಿ ಇಎಸ್‌ಜೆಡ್ ಸಮಸ್ಯೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಸೋಮವಾರ ಅಧಿಕೃತ ಮೂಲವೊಂದು ತಿಳಿಸಿತ್ತು.
Kerala CM Pinarayi Vijayan meets Prime Minister Narendra Modi at PM’s official residence in New Delhi
(Pics source: CMO Kerala) pic.twitter.com/t6Tz28VsHB
— ANI (@ANI) December 27, 2022
ಅದಲ್ಲದೆ, ಉತ್ತರದ ಕಾಸರಗೋಡಿನಿಂದ ದಕ್ಷಿಣದ ತಿರುವನಂತಪುರಕ್ಕೆ ಸಂಪರ್ಕ ಕಲ್ಪಿಸುವ ಸಿಲ್ವರ್‌ಲೈನ್, ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ವಿಳಂಬ ಮತ್ತು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲ್ಲಿನ ಆರ್ಥಿಕ ಬಿಕ್ಕಟ್ಟು ಬಗ್ಗೆಯೂ ಇಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇಂದು ದೆಹಲಿಯಲ್ಲಿ ನಡೆಯುತ್ತಿರುವ ಸಿಪಿಎಂ ಪಾಲಿಟ್ ಬ್ಯೂರೋ ಸಭೆಯಲ್ಲಿ ಪಾಲ್ಗೊಳ್ಳಲು ಕೇರಳ ಮುಖ್ಯಮಂತ್ರಿ ರಾಜಧಾನಿಗೆ ಬಂದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:05 pm, Tue, 27 December 22