ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಮತ್ತು ವಿಧಾನಸಭಾ ಚುನಾವಣೆಗೆ ಮುನ್ನ ಓಲೈಕೆ ರಾಜಕೀಯದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ವಿಧಾನವು ಬಿಜೆಪಿಗೆ ಪದೇ ಪದೇ ಪ್ರಯೋಜನವನ್ನು ನೀಡಿದೆ. ಹೀಗಾಗಿ, ಕಾಂಗ್ರೆಸ್ ಬಿಜೆಪಿಯ ಬಿ-ಟೀಂ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ
Pinarayi Vijayan
Image Credit source: PTI

Updated on: Mar 21, 2026 | 10:24 PM

ತಿರುವನಂತಪುರಂ, ಮಾರ್ಚ್ 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಹುಲ್ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿಯ ‘ಬಿ-ಟೀಮ್’ ಎಂದು ಟೀಕಿಸಿದ್ದಾರೆ. ಓಲೈಕೆ ರಾಜಕೀಯ ಮಾಡುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಒಂದೇ ರೀತಿಯಲ್ಲಿ ವಿರೋಧಿಸಿವೆ. ಅವೆರಡೂ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇರಳದ ಸಿಎಂ ಆರೋಪಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅನುಭವಗಳಿಂದ ಕಲಿಯಲು ಇಷ್ಟಪಡದ ವ್ಯಕ್ತಿಗಳಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ರಾಷ್ಟ್ರೀಯ ಮಟ್ಟದ ವ್ಯವಹಾರಗಳನ್ನು ಪರಿಶೀಲಿಸಿದರೆ ನಮಗೆ ಕಾಣುವುದೇನೆಂದರೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಬಿಜೆಪಿಯ ನಿಜವಾದ ಬಿ-ಟೀಂ ಆಗಿದೆ. ಆ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ಕಾಂಗ್ರೆಸ್ ಓಲೈಕೆಯ ರಾಜಕೀಯ ಮಾಡುತ್ತಿದೆ. ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜಯನ್ ಆರೋಪಿಸಿದರು. ನಾವು ಯಾವುದೇ ಕೋಮುವಾದಿ ಶಕ್ತಿಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಎಲ್ಲಾ ಕೋಮುವಾದವನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.


ಕೇರಳದಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶಗಳು ಹೊರಬೀಳಲಿವೆ. ಈಗಾಗಲೇ ಕೇರಳದಲ್ಲಿ ಬಿಜೆಪಿ, ಕಾಂಗ್ರೆಸ್ ಚುನಾವಣಾ ಪ್ರಚಾರವನ್ನು ಆರಂಭಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us