AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸಿಎಂ ವಿಜಯನ್ ಕಚೇರಿ, ನಿವಾಸ, ಕೊಚ್ಚಿ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಕಚೇರಿ, ನಿವಾಸ ಹಾಗೂ ಕೊಚ್ಚಿ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದೆ. ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇಂದು ಮುಂಜಾನೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅಧಿಕಾರಿಗಳು ಎಲ್ಲಾ ಸಂಪೂರ್ಣ ಆವರಣದಲ್ಲಿ ಶೋಧ ಕಾರ್ಯ ನಡೆಸಲು ಬಾಂಬ್ ಸ್ಕ್ವಾಡ್‌ಗಳನ್ನು ನಿಯೋಜಿಸಿದ್ದರು.

ಕೇರಳ ಸಿಎಂ ವಿಜಯನ್ ಕಚೇರಿ, ನಿವಾಸ, ಕೊಚ್ಚಿ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ
ಪಿಣರಾಯಿ ವಿಜಯನ್ Image Credit source: The Print
ನಯನಾ ರಾಜೀವ್
|

Updated on: Apr 28, 2025 | 12:51 PM

Share

ತಿರುವನಂತಪುರಂ, ಏಪ್ರಿಲ್ 28: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಕಚೇರಿ, ನಿವಾಸ ಹಾಗೂ ಕೊಚ್ಚಿ ಏರ್​ಪೋರ್ಟ್​ಗೆ ಬಾಂಬ್ ಬೆದರಿಕೆ(Bomb Threat) ಕರೆ ಬಂದಿದೆ. ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇಂದು ಮುಂಜಾನೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅಧಿಕಾರಿಗಳು ಎಲ್ಲಾ ಸಂಪೂರ್ಣ ಆವರಣದಲ್ಲಿ ಶೋಧ ಕಾರ್ಯ ನಡೆಸಲು ಬಾಂಬ್ ಸ್ಕ್ವಾಡ್‌ಗಳನ್ನು ನಿಯೋಜಿಸಿದ್ದರು.

ತಿರುವನಂತಪುರಂನಲ್ಲಿರುವ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಬಂದಿದ್ದು, ಕೇರಳ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪೀಡಿತ ಪ್ರದೇಶಗಳನ್ನು ಸುತ್ತುವರೆದಿದ್ದಾರೆ. ಸ್ನಿಫರ್ ನಾಯಿಗಳು ಮತ್ತು ವಿಶೇಷ ತಂಡಗಳೊಂದಿಗೆ, ಸಂಪೂರ್ಣ ತಪಾಸಣೆ ನಡೆಯುತ್ತಿದೆ. ಆದಾಗ್ಯೂ, ಇಲ್ಲಿಯವರೆಗೆ, ಎರಡೂ ಸ್ಥಳಗಳಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ.

ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯನ್ನು pro@cial.aero ಗೆ ಬೆಳಗ್ಗೆ 07.53 ಕ್ಕೆ achimuthu_ahmed_shankar@outlook.com ಇಮೇಲ್ ಐಡಿಯಿಂದ ಕಳುಹಿಸಲಾಗಿತ್ತು, ಅದರಲ್ಲಿ “CIAL ನಲ್ಲಿ RDX ಆಧಾರಿತ ಸ್ಫೋಟಕ ಸಾಧನವನ್ನು ರಹಸ್ಯವಾಗಿ ಇಡಲಾಗಿದೆ. ಮಧ್ಯಾಹ್ನ 2 ಗಂಟೆಯೊಳಗೆ ಎಲ್ಲರೂ ಓಡಿ ಹೋಗಿ ಎಂದು ಅದರಲ್ಲಿ ಬರೆಯಲಾಗಿತ್ತು.

ಇದನ್ನೂ ಓದಿ
Image
ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬರ್ ಸೆಲ್‌ನಲ್ಲಿ ಕೇಸ್ ದಾಖಲು
Image
ದೆಹಲಿಯ ಕೆಂಪು ಕೋಟೆ, ಜಾಮಾ ಮಸೀದಿಗೆ ಹುಸಿ ಬಾಂಬ್ ಬೆದರಿಕೆ
Image
ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
Image
ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

ವಿಮಾನ ನಿಲ್ದಾಣದ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ (BTAC) ಬೆಳಗ್ಗೆ 8.55 ಕ್ಕೆ ಸಭೆ ಸೇರಿ, ತಕ್ಷಣದ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು. ಸಿಐಎಸ್ಎಫ್ ಎಲ್ಲಾ ಟರ್ಮಿನಲ್‌ಗಳಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ತಡೆಯಲು ತಪಾಸಣೆ ನಡೆಸಿತು, ರಾಜ್ಯ ಪೊಲೀಸರು ನಗರಾದ್ಯಂತ ತಪಾಸಣೆ ನಡೆಸಿದ್ದಾರೆ.

ದಕ್ಷಿಣದ ಎಲ್ಲಾ ವಿಮಾನಗಳಿಗೆ ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಯಿತು. ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (CIAL) ರಾಜ್ಯ ಪೊಲೀಸರಿಗೆ ದೂರು ನೀಡಿದೆ ಮತ್ತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ