AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಗ್ರಾಹಕರಿಗೆ ಮತ್ತೊಂದು ಶಾಕ್

ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಸಾರ್ವಜನಿಕರಿಗೆ ಮತ್ತೊಂದು ಆರ್ಥಿಕ ಹೊರೆಯಾಗಿ ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ಬೆಲೆಯೂ ಏರಿಕೆಯಾಗಿದ್ದು, ಬೆಂಗಳೂರಿನೂರಿನಲ್ಲಿ ಪ್ರತಿ ಕೆಜಿಗೆ 10 ರೂ. ಹೆಚ್ಚಳ ನಿರೀಕ್ಷೆಯಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್‌ ಚೀನಾ ಭೇಟಿ ವೇಳೆ ಜಾಗತಿಕ ಸಹಭಾಗಿತ್ವಕ್ಕೆ ಕ್ಸಿ ಜಿನ್‌ಪಿಂಗ್ ಕರೆ ನೀಡಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿಗೆ 74 ಮಂದಿ ಬಲಿಯಾಗಿದ್ದಾರೆ.

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಗ್ರಾಹಕರಿಗೆ ಮತ್ತೊಂದು ಶಾಕ್
ಕೇರಳ ಸಿಎಂ ವಿ.ಡಿ.ಸತೀಶನ್
ಅಕ್ಷಯ್​ ಪಲ್ಲಮಜಲು​​
|

Updated on:May 14, 2026 | 2:31 PM

Share

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 10 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

ಕೇರಳಂ ಸಿಎಂ ಆಯ್ಕೆ:

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸಿದ ಹತ್ತು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಖ್ಯಮಂತ್ರಿ ಅಭ್ಯರ್ಥಿಯ ಗೊಂದಲಕ್ಕೆ ತೆರೆ ಎಳೆದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ವಿ.ಡಿ.ಸತೀಶನ್ (V.D. Satheesan) ಅವರನ್ನು ಎಐಸಿಸಿ ಇಂದು (ಮೇ 14) ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿಗಳು ನಡೆದಿತ್ತು. ವೇಣುಗೋಪಾಲ್​​​ ಕೂಡ ಈ ಮುಂಚೂಣಿಯಲ್ಲಿ ಇದ್ದರು.

ಅಡುಗೆ ಎಣ್ಣೆ ಬೆನ್ನಲ್ಲೇ ಈಗ ಅಕ್ಕಿ ದರವೂ ಏರಿಕೆ:

ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯು ಸಾರ್ವಜನಿಕರ ಬಜೆಟ್‌ ಅನ್ನು ಅಸ್ತವ್ಯಸ್ತಗೊಳಿಸುತ್ತಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಯ ಬೆಲೆ ಗಗನಕ್ಕೇರಿತ್ತು, ಇದರ ಬೆನ್ನಲ್ಲೇ ಈಗ ದೈನಂದಿನ ಆಹಾರವಾದ ಅಕ್ಕಿಯ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 5 ರಿಂದ 10 ರೂಪಾಯಿವರೆಗೆ ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.

ಇದನ್ನೂ ಓದಿ: ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕರೆ!

ಜಗತ್ತಿನ ಎರಡು ಬಲಿಷ್ಠ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾ ಪರಸ್ಪರ ಪ್ರತಿಸ್ಪರ್ಧಿಗಳಾಗುವ ಬದಲು ಪಾಲುದಾರರಾಗಬೇಕು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರತಿಪಾದಿಸಿದ್ದಾರೆ. ಬೀಜಿಂಗ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಸಿದ ದ್ವಿಪಕ್ಷೀಯ ಸಭೆಯಲ್ಲಿ ಅವರು ಈ ಮಹತ್ವದ ಸಂದೇಶ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 14 May 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ