ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ, ಕ್ರಿಶ್ಚಿಯನ್ನರ ಕ್ಷಮೆ ಕೋರಿದ ಕಾಂಗ್ರೆಸ್

ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಪೋಪ್ ಫ್ರಾನ್ಸಿಸ್ ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯನ್ನು ಅಪಹಾಸ್ಯ ಮಾಡುವ ಮೂಲಕ ಕಾಂಗ್ರೆಸ್‌ನ ಕೇರಳ ಘಟಕ ವ್ಯಾಪಕ ಖಂಡನೆಗೆ ಗುರಿಯಾಗಿದೆ. ಇದಾದ ನಂತರ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣದಿಂದ ಪೋಸ್ಟ್ ಅನ್ನು ಡಿಲೀಟ್ ಮಾಡಿ ಕ್ಷಮೆ ಯಾಚಿಸಿದೆ.

ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ, ಕ್ರಿಶ್ಚಿಯನ್ನರ ಕ್ಷಮೆ ಕೋರಿದ ಕಾಂಗ್ರೆಸ್
ಪೋಪ್ ಜೊತೆ ಮೋದಿಯ ಭೇಟಿ
Follow us
ಸುಷ್ಮಾ ಚಕ್ರೆ
|

Updated on: Jun 17, 2024 | 5:40 PM

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ (Pope Francis) ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿತ್ತು. ಅದಕ್ಕೆ ಬಿಜೆಪಿಯಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಘಟಕ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿತ್ತು. ಕಾಂಗ್ರೆಸ್ ಮಾಡಿದ ಪೋಸ್ಟ್‌ನಲ್ಲಿ ಪೋಪ್ ಜೊತೆಗಿನ ಪಿಎಂ ಮೋದಿಯ ಫೋಟೋವನ್ನು ಹಾಕಿ “ಅಂತಿಮವಾಗಿ ಪೋಪ್‌ಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು!” ಎಂಬ ಕಾಮೆಂಟ್ ಹಾಕಲಾಗಿತ್ತು. ಈ ಹಿಂದೆ ಪ್ರಧಾನಿ ಮೋದಿ (PM Narendra Modi) ಟ್ವೀಟ್​ ಒಂದರಲ್ಲಿ ಯಾವುದೋ ಒಂದು ಕಾರ್ಯಕ್ಕಾಗಿ ದೇವರೇ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಲೇವಡಿ ಮಾಡಿ ಪೋಸ್ಟ್ ಮಾಡಿತ್ತು.

ಈ ಪೋಸ್ಟ್ ಅನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಇಬ್ಬರನ್ನೂ ಅವಮಾನಿಸಿದೆ ಎಂದು ಆರೋಪಿಸಿತ್ತು. ಇದಕ್ಕೆ ಕೇರಳದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಟ್ವೀಟ್ ಮಾಡಿ, “ಇಸ್ಲಾಮಿಸ್ಟ್ ಅಥವಾ ಅರ್ಬನ್ ನಕ್ಸಲರು ನಡೆಸುತ್ತಿರುವ ಕಾಂಗ್ರೆಸ್ ಕೇರಳ ಘಟಕದ ಎಕ್ಸ್​ ಹ್ಯಾಂಡಲ್ ರಾಷ್ಟ್ರೀಯವಾದಿ ನಾಯಕರ ವಿರುದ್ಧ ಅವಹೇಳನಕಾರಿ ಮತ್ತು ಅವಮಾನಕರ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರೆಸಿದೆ. ಈಗ, ಇದು ಗೌರವಾನ್ವಿತ ಪೋಪ್ ಮತ್ತು ಕ್ರಿಶ್ಚಿಯನ್ ಸಮುದಾಯದವರನ್ನು ಅಪಹಾಸ್ಯ ಮಾಡುವ ಮಟ್ಟಕ್ಕೆ ಇಳಿದಿದೆ.” ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡು ಸಂಸದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಂತಹ ಕಾಂಗ್ರೆಸ್ ಪ್ರಮುಖರು ಈ ರೀತಿಯ ವ್ಯಂಗ್ಯವನ್ನು ಸಮರ್ಥಿಸಿಕೊಳ್ಳುತ್ತಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉಸ್ತುವಾರಿಯಾಗಿ ಮಹಾರಾಷ್ಟ್ರ ಚುನಾವಣೆಗೆ ಭೂಪೇಂದರ್ ಯಾದವ್, ಜಾರ್ಖಂಡ್‌ಗೆ ಶಿವರಾಜ್ ಸಿಂಗ್ ಚೌಹಾಣ್ ನೇಮಕ

ಕೇರಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಅವರು ಈ ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಆಕ್ಷೇಪಾರ್ಹ ಮತ್ತು ನೋವುಂಟುಮಾಡುತ್ತದೆ. ವಿಶೇಷವಾಗಿ ಕೇರಳದಲ್ಲಿ ಕ್ರಿಶ್ಚಿಯನ್ ಧರ್ಮವು ಮೂರನೇ ಅತಿದೊಡ್ಡ ಆಚರಣೆಯ ಧರ್ಮವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಅವರು ಇತರ ಧರ್ಮಗಳನ್ನು ಅವಹೇಳನ ಮಾಡುವ ಇತಿಹಾಸವನ್ನು ಕಾಂಗ್ರೆಸ್ ಹೊಂದಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕ್ಯಾಥೋಲಿಕ್ ಧರ್ಮದವರ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದೇವರ ಬಗ್ಗೆ ತಮಾಷೆ ಮಾಡುವುದು ಧರ್ಮದ್ರೋಹಿ ಅಲ್ಲ ಎಂಬ ಪೋಪ್ ಫ್ರಾನ್ಸಿಸ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಉಲ್ಲೇಖಿಸಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಿ.ಟಿ ಬಲರಾಮ್ ಅವರು ಕೂಡ ಈ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಇದು ವಿಡಂಬನಾತ್ಮಕವಾಗಿದೆ. “ತಾನು ಸಾಮಾನ್ಯ ಮನುಷ್ಯನಲ್ಲ, ತಾನು ದೇವರೇ ಕಳುಹಿಸಿರುವ ಎಂದು ಸ್ವತಃ ಮೋದಿಯೇ ಹೇಳಿಕೊಂಡಿದ್ದಾರೆ. ಈ ಟ್ವೀಟ್ ವಿಡಂಬನಾತ್ಮಕವಾಗಿದೆ ಎಂಬುದನ್ನು ಅರ್ಥ ಮಾಡಿಕೊಂಡರೆ ಯಾರಿಗೂ ಅವಮಾನ ಆಗುವುದಿಲ್ಲ.” ಎಂದಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ಆದರೂ ತಾವು ಮಾಡಿದ ಟ್ವೀಟ್​ಗೆ ತೀವ್ರ ಟೀಕೆ ವ್ಯಕ್ತವಾಗಿದ್ದರಿಂದ ಕಾಂಗ್ರೆಸ್‌ನ ಕೇರಳ ಘಟಕವು ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. “ಕ್ರೈಸ್ತರಿಗೆ ಯಾವುದೇ ಭಾವನಾತ್ಮಕ ಅಥವಾ ಮಾನಸಿಕ ತೊಂದರೆಯನ್ನು” ಉಂಟುಮಾಡಿದ್ದರೆ ಕ್ಷಮೆ ಯಾಚಿಸುವುದಾಗಿಯೂ ತಿಳಿಸಿದೆ. ನಮಗೆ ಯಾವುದೇ ಧರ್ಮ ಅಥವಾ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವ ಉದ್ದೇಶವಿಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಪ್ರಪಂಚದಾದ್ಯಂತ ಕ್ರೈಸ್ತರು ದೇವರಂತೆ ಕಾಣುವ ಪೋಪ್ ಅವರನ್ನು ಅವಮಾನಿಸುವ ಆಲೋಚನೆಯನ್ನು ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ಮಾಡುವುದಿಲ್ಲ. ಆದರೆ, ನರೇಂದ್ರ ಮೋದಿ ಅವರನ್ನು ಅಣಕಿಸಲು ಕಾಂಗ್ರೆಸ್‌ಗೆ ಯಾವುದೇ ಮುಜುಗರವಿಲ್ಲ ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ