AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ

VV Prakash: ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ
ವಿವಿ ಪ್ರಕಾಶ್
ರಶ್ಮಿ ಕಲ್ಲಕಟ್ಟ
|

Updated on:Apr 29, 2021 | 4:01 PM

Share

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಗುರುವಾರ ಬೆಳಗ್ಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಲಪ್ಪುರಂ ಜಿಲ್ಲೆಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಪ್ರಕಾಶ್ ಅವರಿಗೆ ಎದೆ ನೋವು ನೋವು ಕಾಣಿಸಿಕೊಂಡ ಕಾರಣ ಮಂಜೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ 3 ಗಂಟೆಗೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ. ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಸುಮಾರು ಒಂದು ಗಂಟೆಗಳ ಕಾಲ ಕಾಂಗ್ರೆಸ್ ಕಚೇರಿಯಲ್ಲಿರಿಸಿ, ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ ಕೊವಿಡ್ ನಿಯಮಾವಳಿಗಳನ್ನು ಪಾಲಿಸಿ ಎಡಕ್ಕರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ನಿಲಂಬೂರ್ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಪ್ರಕಾಶ್ ಅವರು ಇತ್ತೀಚೆಗೆ ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಪ್ರಸ್ತುತ ಈ ಕ್ಷೇತ್ರದಲ್ಲಿಎಲ್​ಡಿಎಫ್ ಬೆಂಬಲಿತ ಪಕ್ಷೇತರ ಪಿ.ವಿ ಅನ್ವರ್ ಶಾಸಕರಾಗಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ನಿಲಂಬೂರ್ ನಲ್ಲಿ 2016 ರಲ್ಲಿ ಎಲ್ ಡಿಎಫ್ ಗೆದ್ದಿತ್ತು. ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನೇನು ಮೂರು ದಿನಗಳು ಬಾಕಿ ಇರುವಾಗ ಪ್ರಕಾಶ್ ವಿಯೋಗ ಕಾಂಗ್ರೆಸ್ ಪಾಲಿಗೆ ಅತೀವ ದುಃಖವನ್ನುಂಟು ಮಾಡಿದೆ.

ಅನುಭವಿ ರಾಜಕಾರಣಿ ಆಗಿದ್ದ ಪ್ರಕಾಶ್ ತಿರುವನಂತಪುರಂನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿದ್ದರು. ಕೆಎಸ್ಯು​ ಮತ್ತು ಯೂತ್ ಕಾಂಗ್ರೆಸ್ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ಇವರು 2011ರಲ್ಲಿ ಚುನಾವಣೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಎಲ್​ಡಿಎಫ್ ಅಭ್ಯರ್ಥಿ ಕೆ.ಟಿ.ಜಲೀಲ್, ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದರು.

ಕಂಬನಿ ಮಿಡಿದ ನಾಯಕರು

ವಿ.ವಿ  ಪ್ರಕಾಶ್ ಅವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಅವರಿಗಾಗಿ ನಾನು ಚುನಾವಣಾ ಪ್ರಚಾರ ಮಾಡಿದ್ದು, ಅವರ ಗೆಲುವಿಗಾಗಿ ಕಾಯುತ್ತಿದ್ದೆವು.  ಉತ್ತಮ  ಸಾಮಾಜಿಕ ಮತ್ತು  ರಾಜಕೀಯ ಕಾರ್ಯಕರ್ತರಾಗಿದ್ದರು ಅವರು . ಡಿಸಿಸಿ  ಅಧ್ಯಕ್ಷರೂ ಆಗಿದ್ದರು. ಓಂ ಶಾಂತಿ  ಎಂದು ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ .

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವಿನ ಸುದ್ದಿ ಕೇಳಿ  ಆಘಾತಗೊಂಡಿದ್ದೇನೆ . ಶಾಲಾ ದಿನಗಳಿಂದಲೇ  ನಾವು ಜತೆಯಾಗಿದ್ದೆವು. ಶ್ರದ್ಧಾಂಜಲಿ  ಎಂದು  ಕೇರಳದ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಟ್ವೀಟ್ ಮಾಡಿದ್ದಾರೆ.

ಮಲಪ್ಪುಂ ಡಿಸಿಸಿ ಅಧ್ಯಕ್ಷ , ನಿಲಂಬೂರ್ ಯುಡಿಎಫ್ ಅಭ್ಯರ್ಥಿ ವಿ.ವಿ. ಪ್ರಕಾಶ್ ಅವರ ಸಾವು ದುರಂತ. ಅವರ ಪ್ರಾಮಾಣಿಕ ಮತ್ತು ಪರಿಶ್ರಮದ ಕಾರ್ಯಕರ್ತರಾಗಿದ್ದರು.  ಇತರರಿಗೆ ಸಹಾಯ ಮಾಡಲು ಅವರು ಸದಾ ಸಿದ್ದರಿರುತ್ತಿದ್ದರು. ನನ್ನ ಸಂತಾಪಗಳು ಎಂದು  ಕಾಂಗ್ರೆಸ್ ನಾಯಕ ರಾಹುಲ್  ಗಾಂಧಿ  ಟ್ವಿಟರ್​ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kerala Assembly Elections 2021: ಬಿಜೆಪಿಯವರು ಸೃಷ್ಟಿಸುವ ಲವ್ ಜಿಹಾದ್ ಭೀತಿ, ಕೋಮುವಾದ ಕೇರಳದಲ್ಲಿ ನಡೆಯಲ್ಲ: ಶಶಿ ತರೂರ್

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್

Published On - 3:52 pm, Thu, 29 April 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ