Kerala: ನೆಹರು ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್

ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ.

Kerala: ನೆಹರು ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್
ಉಮಾ ಥಾಮಸ್
Follow us
ನಯನಾ ರಾಜೀವ್
|

Updated on: Dec 30, 2024 | 11:46 AM

ಕೊಚ್ಚಿಯಲ್ಲಿರುವ ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ.

ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನಡೆಯುತ್ತಿತ್ತು. ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ಅವರನ್ನು ಸ್ವಾಗತಿಸಿದ ನಂತರ, ಶಾಸಕಿ ಥಾಮಸ್ ವಿಐಪಿ ಪೆವಿಲಿಯನ್‌ನಲ್ಲಿ ತಮ್ಮ ಆಸನದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸ್ಥಳದಲ್ಲಿದ್ದ ವೈದ್ಯಕೀಯ ತಂಡ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ. ಉಮಾ ತಲೆಗೆ ಗಾಯವಾಗಿದ್ದು, ಹಲವು ಕಡೆ ಮೂಳೆ ಮುರಿತಗಳಾಗಿವೆ. ಮುಂದಿನ 24 ಗಂಟೆಗಳ ಕಾಲ ಅವರನ್ನು ನಿಗಾ ಇಡಬೇಕಾಗಿದೆ. ನಾವು ಎಲ್ಲಾ ವೈದ್ಯಕೀಯ ನೆರವು ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ವಿಡಿ ಸತೀಶನ್ ತಿಳಿಸಿದ್ದಾರೆ.

ಉಮಾ ಅವರು ದಿ. ಕಾಂಗ್ರೆಸ್ ಶಾಸಕ ಪಿಟಿ ಥಾಮಸ್ ಅವರ ಪತ್ನಿಯಾಗಿದ್ದಾರೆ. ಪಿಟಿ ಥಾಮಸ್ ಅವರು 2021 ರಲ್ಲಿ ನಿಧನರಾದರು, ಮತ್ತು ನಂತರ ಉಮಾ ಅವರು ಉಪಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದರು, ಕಾಂಗ್ರೆಸ್ ಪಕ್ಷದ ಮೊದಲ ಮಹಿಳಾ ಶಾಸಕರಾದರು.

ಪಿಟಿ ಥಾಮಸ್ ಅವರು 2016 ರಿಂದ ತೃಕ್ಕಾಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು 2021 ರ ಚುನಾವಣೆಯಲ್ಲಿ ಗೆದ್ದಿದ್ದರು ಆದರೆ ಡಿಸೆಂಬರ್ 2021 ರಲ್ಲಿ ನಿಧನರಾದರು. ಅವರು 2009 ರಿಂದ 2014 ರವರೆಗೆ ಇಡುಕ್ಕಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಅದಕ್ಕೂ ಮೊದಲು ಎರಡು ಬಾರಿ ತೊಡುಪುಳ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು.

ಉಮಾ ತಮ್ಮ ವಿನಮ್ರ ಸ್ವಭಾವದಿಂದ ವಿಧಾನಸಭೆಯಲ್ಲಿ ತಮ್ಮ ಉಪಸ್ಥಿತಿಯನ್ನು ದಾಖಲಿಸಿದರು. ಉಮಾ ಅವರು ತಮ್ಮ ಪರಿಣಾಮಕಾರಿ ಭಾಷಣಗಳಿಂದ ಎಲ್ಲರ ಗಮನ ಸೆಳೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ