Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ತರಕಾರಿ ಅಂಗಡಿ ಧ್ವಂಸ

ಕೇರಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕಾಗಿ, ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿಯನ್ನು ಧ್ವಂಸ ಮಾಡಿರುವ ಘಟನೆ ವರದಿಯಾಗಿದೆ.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ತರಕಾರಿ ಅಂಗಡಿ ಧ್ವಂಸ
Bharat Jodo
Follow us
TV9 Web
| Updated By: ನಯನಾ ರಾಜೀವ್

Updated on:Sep 16, 2022 | 12:18 PM

ಕೇರಳದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ದೇಣಿಗೆ ನೀಡದಿದ್ದಕ್ಕಾಗಿ, ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿಯನ್ನು ಧ್ವಂಸ ಮಾಡಿರುವ ಘಟನೆ ವರದಿಯಾಗಿದೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದಕ್ಷಿಣದ ರಾಜ್ಯಗಳ ಮೂಲಕ ಈ ಯಾತ್ರೆ ಉತ್ತರ ರಾಜ್ಯಗಳನ್ನು ತಲುಪಲಿದೆ.

ಅಂದಹಾಗೆ, ಈ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ದಂಡೇ ಕಂಡು ಬರುತ್ತಿದೆ. ಆದರೆ ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಆರೋಪಗಳು ಕೇಳಿ ಬರುತ್ತಿವೆ. ಕೇರಳದಲ್ಲಿಯೇ ಈ ವಿಷಯ ಮುನ್ನೆಲೆಗೆ ಬಂದಿದೆ. ಕೇರಳದ ಕೊಲ್ಲಂನ ತರಕಾರಿ ಮಾರಾಟಗಾರರೊಬ್ಬರು ಭಾರತ ಜೋಡೋ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ 2000 ರೂ. ಕೇಳಿದ್ದರು, ಕೊಡದಿದ್ದಕ್ಕೆ ಅಂಗಡಿ ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕ್ರಮ ಕೈಗೊಂಡಿರುವ ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಅವರು ಪಕ್ಷದ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಿದ್ದಾರೆ. ಎಸ್ ಫವಾಜ್ ಎಂಬ ವ್ಯಕ್ತಿ ಕೇರಳದ ಕೊಲ್ಲಂನಲ್ಲಿ ತರಕಾರಿ ಅಂಗಡಿ ಹೊಂದಿದ್ದಾರೆ. ಎಂದಿನಂತೆ ತನ್ನ ಅಂಗಡಿಯಲ್ಲಿದ್ದೆ . ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಭಾರತ ಜೋಡೋ ಯಾತ್ರೆಯಲ್ಲಿ ಆರ್ಥಿಕ ಸಹಕಾರದ ಹೆಸರಿನಲ್ಲಿ ಬಲವಂತವಾಗಿ ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

2000 ರೂ. ನೀಡಲು ನಿರಾಕರಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ತರಕಾರಿ ಮಾರಾಟಗಾರ ಆರೋಪಿಸಿದ್ದಾರೆ. ಅಂಗಡಿಯಲ್ಲಿ ಇಟ್ಟಿದ್ದ ಎಲ್ಲ ತರಕಾರಿಗಳನ್ನೂ ಬಿಸಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಕೇರಳ ಘಟಕದ ಮುಖ್ಯಸ್ಥ ಕೆ ಸುಧಾಕರನ್ ಅವರು ಪ್ರಕರಣದಲ್ಲಿ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಿದ್ದಾರೆ.

ಪಕ್ಷವು ಸ್ವಯಂಪ್ರೇರಿತವಾಗಿ ಸಣ್ಣ ದೇಣಿಗೆ ತೆಗೆದುಕೊಳ್ಳುತ್ತದೆ ಮತ್ತು ಇತರರಂತೆ ಕಾರ್ಪೊರೇಟ್ ವಲಯದಿಂದ ದೊಡ್ಡ ದೇಣಿಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು. ಭಾರತ್ ಜೋಡೋ ಯಾತ್ರೆ ಕೇರಳದ ಕೊಲ್ಲಂ ಜಿಲ್ಲೆಯ ಪೊಲಯಾತೋಡು ಎಂಬಲ್ಲಿ ಒಂದು ದಿನದ ವಿಶ್ರಾಂತಿಯ ನಂತರ ಶುಕ್ರವಾರ ಪುನರಾರಂಭವಾಗಿದೆ.

ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೇಶನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಹಿರಿಯ ಕಾಂಗ್ರೆಸ್ ನಾಯಕರಾದ ರಮೇಶ್ ಚೆನ್ನಿತ್ತಲ ಮತ್ತು ಕೆ ಮುರಳೀಧರ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ (ಆರ್‌ಎಸ್‌ಪಿ) ನಾಯಕ ಎನ್‌ಕೆ ಪ್ರೇಮಚಂದ್ರನ್ ಅವರು ಪಾದಯಾತ್ರೆಯಲ್ಲಿ ಗಾಂಧಿಯವರ ಜೊತೆಗಿದ್ದರು. ಜಿಲ್ಲೆಯ ಸ್ಲೀಪಕರದಲ್ಲಿ ರಾಹುಲ್ ಗಾಂಧಿ ಕೆಲಕಾಲ ವಾಸ್ತವ್ಯ ಹೂಡಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 16 September 22