AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು

ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಸಚಿವರಿಂದ ನಿಂದನೆಗೊಳಗಾಗಿ, ವರ್ಗಾವಣೆ ಶಿಕ್ಷೆ ಪಡೆದಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಾವು
ಬಸ್ ಚಾಲಕ
ನಯನಾ ರಾಜೀವ್
|

Updated on:Oct 07, 2025 | 12:18 PM

Share

ಕಾಂಜೀರಪಳ್ಳಿ, ಅಕ್ಟೋಬರ್ 07: ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು. ಬಸ್ ಚಲಾಯಿಸುತ್ತಿರುವಾಗಲೇ ಪೊನ್ಕುನ್ನಂ ಡಿಪೋದ ಚಾಲಕ ಜೈಮನ್ ಜೋಸೆಫ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಕಾಂಜೀರಪಳ್ಳಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಬಳಿಕ ಜೈಮನ್ ಅವರನ್ನು ವಿಶೇಷ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಜೈಮನ್ ಸೇರಿದಂತೆ ನೌಕರರನ್ನು ತ್ರಿಶೂರ್‌ಗೆ ವರ್ಗಾಯಿಸುವ ಬಗ್ಗೆ ವಿವಾದ ಉಂಟಾದ ನಂತರ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಮುಂಡಕ್ಕಯಂ-ಪಾಲಾ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕಾಂಜೀರಪ್ಪಳ್ಳಿಯ ಪೂತಕುಳಿಯಲ್ಲಿ ಈ ಘಟನೆ ನಡೆದಿದೆ. 1ನೇ ತಾರೀಖಿನಂದು ಬೆಳಗ್ಗೆ, ಮುಂಡಕ್ಕಯಂನಿಂದ ತಿರುವನಂತಪುರಕ್ಕೆ ಬರುತ್ತಿದ್ದ ಬಸ್ಸಿನ ಮುಂಭಾಗದ ಕಿಟಕಿಯ ಮುಂದೆ ಬಾಟಲಿಗಳು ಸಾಲುಗಟ್ಟಿ ನಿಂತಿರುವುದನ್ನು ನೋಡಿದ ಸಚಿವ ಕೆ.ಬಿ. ಗಣೇಶ್ ಕುಮಾರ್ ಬಸ್ ನಿಲ್ಲಿಸಿ ಚಾಲಕನನ್ನು ಗದರಿಸಿದ್ದರು.

ಮತ್ತಷ್ಟು ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಚಾಲಕ: ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ರಕ್ಷಣೆ!

ನಂತರ ಸಚಿವರು ಜೈಮನ್ ಸೇರಿದಂತೆ ಮೂವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ನಂತರ ವರ್ಗಾವಣೆ ಆದೇಶ ಹೊರಡಿಸಲಾಯಿತು. ಜೈಮನ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡಕ್ಕೆ ಔಷಧಿ ತೆಗೆದುಕೊಳ್ಳುತ್ತಿರುವುದಾಗಿ ಮತ್ತು ಘಟನೆಯ ದಿನ ಬಸ್ ಮುಂದೆ ಇಡಲಾಗಿದ್ದ ಬಾಟಲಿಗಳನ್ನು ಕುಡಿಯುವ ನೀರನ್ನು ಹಿಡಿದಿಡಲು ಬಳಸಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಆದರೂ ವರ್ಗಾವಣೆಯನ್ನು ಹಿಂತೆಗೆದುಕೊಂಡಿರಲಿಲ್ಲ. ಇದೀಗ ಪ್ರಾಣವನ್ನೇ ಬಿಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Tue, 7 October 25

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು