Sign In

By signing in or creating an account, you agree with Associated Broadcasting Company's Terms & Conditions and Privacy Policy.

Niti Aayog ನೀತಿ ಆಯೋಗದ ಆರೋಗ್ಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕೇರಳಕ್ಕೆ ಅಗ್ರಸ್ಥಾನ, ಕೊನೇ ಸ್ಥಾನದಲ್ಲಿ ಉತ್ತರ ಪ್ರದೇಶ

ವರದಿಯ ಪ್ರಕಾರ, ಕೇರಳ ಮತ್ತು ತಮಿಳುನಾಡು ಅತ್ಯಧಿಕ ಉಲ್ಲೇಖ ವರ್ಷ (2019-20) ಸೂಚ್ಯಂಕ ಸ್ಕೋರ್‌ಗಳೊಂದಿಗೆ ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಎರಡು ಪ್ರದರ್ಶನಕಾರರಾಗಿದ್ದು,  ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಕ್ರಮವಾಗಿ ಹನ್ನೆರಡನೇ ಮತ್ತು ಎಂಟನೇ ಸ್ಥಾನದಲ್ಲಿದೆ.

Niti Aayog ನೀತಿ ಆಯೋಗದ ಆರೋಗ್ಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕೇರಳಕ್ಕೆ ಅಗ್ರಸ್ಥಾನ, ಕೊನೇ ಸ್ಥಾನದಲ್ಲಿ ಉತ್ತರ ಪ್ರದೇಶ
ನೀತಿ ಆಯೋಗ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 27, 2021 | 7:28 PM

ದೆಹಲಿ: ನೀತಿ ಆಯೋಗ (Niti Aayog) ಬಿಡುಗಡೆ ಮಾಡಿದ ನಾಲ್ಕನೇ ಆರೋಗ್ಯ ಸೂಚ್ಯಂಕದ ಪ್ರಕಾರ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕೇರಳ (Kerala) ಮತ್ತೆ ಅಗ್ರಸ್ಥಾನದಲ್ಲಿದೆ. ಉತ್ತರ ಪ್ರದೇಶವು (Uttar Pradesh) ಕೊನೇ ಸ್ಥಾನದಲ್ಲಿದೆ. ನಾಲ್ಕನೇ ಆರೋಗ್ಯ ಸೂಚ್ಯಂಕವು 2019-20 (ರೆಫರೆನ್ಸ್ ಇಯರ್) ಅವಧಿಯನ್ನು ಗಣನೆಗೆ ತೆಗೆದುಕೊಂಡಿದೆ. ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದೆ ಎಂದು ಸರ್ಕಾರದ ಚಿಂತಕರ ಚಾವಡಿ ವರದಿ ಹೇಳಿದೆ. ಆರೋಗ್ಯ ನಿಯತಾಂಕಗಳಲ್ಲಿ ಕಳಪೆ ಪ್ರದರ್ಶನ ನೀಡಿದ ರಾಜ್ಯಗಳ ಪೈಕಿ ಬಿಹಾರ ಮತ್ತು ಮಧ್ಯಪ್ರದೇಶಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ, ಮೂಲ ವರ್ಷದಿಂದ (2018-19) ಉಲ್ಲೇಖ ವರ್ಷಕ್ಕೆ (2019-20) ಅತ್ಯಧಿಕ ಹೆಚ್ಚುತ್ತಿರುವ ಬದಲಾವಣೆಯನ್ನು ದಾಖಲಿಸುವ ಮೂಲಕ ಉತ್ತರ ಪ್ರದೇಶವು ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರಸ್ಥಾನದಲ್ಲಿದೆ ಎಂದು ವರದಿಯಲ್ಲಿ ಹೇಳಿದೆ. ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮ ಪ್ರದರ್ಶನಕಾರರಾಗಿ ಹೊರಹೊಮ್ಮಿದೆ. ಆದರೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರವು ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಕೆಳಗಿರುವ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾನ ಪಡೆದಿದೆ.ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಪ್ರಮುಖ ಪ್ರದರ್ಶನಕಾರರಾಗಿ ಹೊರಹೊಮ್ಮಿದೆ.

ವರದಿಯ ಪ್ರಕಾರ, ಕೇರಳ ಮತ್ತು ತಮಿಳುನಾಡು ಅತ್ಯಧಿಕ ಉಲ್ಲೇಖ ವರ್ಷ (2019-20) ಸೂಚ್ಯಂಕ ಸ್ಕೋರ್‌ಗಳೊಂದಿಗೆ ಒಟ್ಟಾರೆ ಕಾರ್ಯಕ್ಷಮತೆಯ ವಿಷಯದಲ್ಲಿ ಅಗ್ರ ಎರಡು ಪ್ರದರ್ಶನಕಾರರಾಗಿದ್ದು,  ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಕ್ರಮವಾಗಿ ಹನ್ನೆರಡನೇ ಮತ್ತು ಎಂಟನೇ ಸ್ಥಾನದಲ್ಲಿದೆ. ತೆಲಂಗಾಣವು ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿತು ಮತ್ತು ಎರಡರಲ್ಲಿಯೂ ಮೂರನೇ ಸ್ಥಾನವನ್ನು ಪಡೆದುಕೊಂಡಿತು. ಒಟ್ಟಾರೆ ಪ್ರದರ್ಶನ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆ ಎರಡರಲ್ಲೂ ರಾಜಸ್ಥಾನದ್ದು ಕಳಪೆ ಪ್ರದರ್ಶನವಾಗಿದೆ.

ಸಣ್ಣ ರಾಜ್ಯಗಳ ವಿಷಯದಲ್ಲಿ ಮಿಜೋರಾಂ ಮತ್ತು ತ್ರಿಪುರಾ ಬಲವಾದ ಒಟ್ಟಾರೆ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ಅದೇ ಸಮಯದಲ್ಲಿ ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಸುಧಾರಣೆಗಳನ್ನು ತೋರಿಸಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕವು ಆರೋಗ್ಯ ಕಾರ್ಯಕ್ಷಮತೆಯ ಪ್ರಮುಖ ಅಂಶಗಳನ್ನು ಒಳಗೊಂಡಿರುವ 24 ಸೂಚಕಗಳನ್ನು ಒಳಗೊಂಡಿರುವ ಸಂಯೋಜಿತ ಸ್ಕೋರ್ ಆಗಿದೆ.  ಆರೋಗ್ಯ ಸೂಚ್ಯಂಕವು ಮೂರು ಡೊಮೇನ್‌ಗಳಲ್ಲಿ ಆಯ್ದ ಸೂಚಕಗಳನ್ನು ಒಳಗೊಂಡಿದೆ – ಆರೋಗ್ಯ ಫಲಿತಾಂಶಗಳು, ಆಡಳಿತ ಮತ್ತು ಮಾಹಿತಿ, ಮತ್ತು ಪ್ರಮುಖ ಸಂಗತಿ ಮತ್ತು ಪ್ರಕ್ರಿಯೆಗಳು.  ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಯೋಗದೊಂದಿಗೆ ವರದಿಯನ್ನು ಸಿದ್ಧಪಡಿಸಲಾಗಿದೆ.

Published On - 7:25 pm, Mon, 27 December 21

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ