ಕೇರಳ: ಟಿಫಿನ್ ಬಾಕ್ಸ್​ನಲ್ಲಿತ್ತು ಸ್ಫೋಟಕಗಳು, ಬೆಳಗ್ಗೆ 9.40ಕ್ಕೆ ಸಂಭವಿಸಿತ್ತು ಮೊದಲ ಸ್ಫೋಟ

ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್​ಷನ್ ಸೆಂಟರ್​ ಒಳಗೆ ಟಿಫಿನ್​ ಬಾಕ್ಸ್​ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಕೇರಳ: ಟಿಫಿನ್ ಬಾಕ್ಸ್​ನಲ್ಲಿತ್ತು ಸ್ಫೋಟಕಗಳು, ಬೆಳಗ್ಗೆ 9.40ಕ್ಕೆ ಸಂಭವಿಸಿತ್ತು ಮೊದಲ ಸ್ಫೋಟ
ಕೇರಳ ಸ್ಫೋಟImage Credit source: NDTV
Follow us
|

Updated on: Oct 29, 2023 | 2:53 PM

ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್​ಷನ್ ಸೆಂಟರ್​ ಒಳಗೆ ಟಿಫಿನ್​ ಬಾಕ್ಸ್​ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇಂದು ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಪ್ರಾರ್ಥನೆ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಕ್ಟೋಬರ್ 27 ರಂದು ಸಭೆ ಆರಂಭವಾಗಿತ್ತು, ಇವತ್ತು ಮೂರನೇ ದಿನದ ಸಭೆ ನಡೆಯುತ್ತಿತ್ತು, ಕ್ರಿಶ್ಚಿಯನ್​ ಸಮುದಾಯಕ್ಕೆ ಸೇರಿದ ಸಭೆ ಇದಾಗಿತ್ತು.

ದಾಳಿಯಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು. ಸ್ಫೋಟಕಗಳನ್ನು ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: Kerala: ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ ಸ್ಪೋಟ, ಓರ್ವ ಸಾವು, 20ಕ್ಕೂ ಅಧಿಕ ಜನರಿಗೆ ಗಾಯ

ಭಯೋತ್ಪಾದನಾ ನಿಗ್ರಹ ಸಂಸ್ಥೆ ಎನ್‌ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ರಾಷ್ಟ್ರೀಯ ಭದ್ರತಾ ಪಡೆಗಳ ತಂಡವೂ ಈ ಮಾರ್ಗದಲ್ಲಿದೆ. ಒಟ್ಟು 3-4 ಸ್ಪೋಟಗಳು ಸಂಭವಿಸಿದೆ ಎನ್ನಲಾಗಿದೆ. ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೂಡಲೇ ಹಿಂತಿರುಗುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚನೆ ನೀಡಿದ್ದಾರೆ.

ಕಲಮಸ್ಸೆರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.

ಸ್ಪೋಟಕ್ಕೆ ಸಂಬಂಧಿಸಿದಂತೆ ಸರ್ಕಾರ ವಿವರಗಳನ್ನು ಸಂಗ್ರಹಿಸುತ್ತಿದೆ, ಇದೊಂದು ದುರದೃಷ್ಟಕರ ಘಟನೆ, ಎಲ್ಲಾ ಉನ್ನತ ಅಧಿಕಾರಿಗಳು ಎರ್ನಾಕುಲಂಗೆ ತಲುಪಿದ್ದಾರೆ, ಡಿಜಿಪಿ ಸ್ಥಳದಲ್ಲಿದ್ದಾರೆ, ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.

ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಎರ್ನಾಕುಲಂನ ಕನ್ವೆನ್​ಷನ್ ಸೆಂಟರ್​ನಲ್ಲಿ 5 ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದಕ ಕೃತ್ಯವಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್