AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ, ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಆತ್ಮಹತ್ಯೆ ಬೆದರಿಕೆ ಹಾಕಿದ ಮಗ

ಮಗನೊಬ್ಬ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ(Attack) ನಡೆಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ವಾಗ್ವಾದ ನಡೆಯುತ್ತಲೇ ಇತ್ತು. ತಂದೆಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ, ಮನೆಯ ಬಾಗಿಲು ಹಾಕಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಮೂರು ಗಂಟೆಯ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.

ಆಸ್ತಿ ವಿವಾದ, ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಆತ್ಮಹತ್ಯೆ ಬೆದರಿಕೆ ಹಾಕಿದ ಮಗ
ಪೊಲೀಸ್
ನಯನಾ ರಾಜೀವ್
|

Updated on:Oct 05, 2025 | 12:30 PM

Share

ತ್ರಿಶೂರ್, ಅಕ್ಟೋಬರ್ 05: ಮಗನೊಬ್ಬ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ(Attack) ನಡೆಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಕೇರಳದ ತ್ರಿಶೂರ್​ನಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ವಾಗ್ವಾದ ನಡೆಯುತ್ತಲೇ ಇತ್ತು. ತಂದೆಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ, ಮನೆಯ ಬಾಗಿಲು ಹಾಕಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಮೂರು ಗಂಟೆಯ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.

ವರದಿಗಳ ಪ್ರಕಾರ, ಶನಿವಾರ ಆಸ್ತಿ ಪತ್ರಗಳ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ವಾಗ್ವಾದ ನಡೆದಿದೆ. ಮಾತು ಉಲ್ಬಣವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಸ್ಥಳೀಯ ವರದಿಗಳ ಪ್ರಕಾರ, ಬಾಡಿಗೆ ಮನೆಯಲ್ಲಿ ಈ ಘಟನೆ 1.30 ರ ಸುಮಾರಿಗೆ ನಡೆದಿದೆ. ತಂದೆ ಶಿವನ್, ಆಟೋ ಚಾಲಕನಾಗಿದ್ದು, ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ತನ್ನ ಹೆಂಡತಿಯೊಂದಿಗೆ ಮಗನ ಮನೆಗೆ ಬಂದಿದ್ದರು.

ಮತ್ತಷ್ಟು ಓದಿ: ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್​ನಲ್ಲಿರುವಾಗಲೇ ವ್ಯಕ್ತಿ ಆತ್ಮಹತ್ಯೆ

ವಿಷ್ಣು ತಾನು ಕಾಗದಗಳನ್ನು ಬಾವಿಗೆ ಎಸೆದಿದ್ದೇನೆ ಎಂದು ಹೇಳಿದ್ದರಿಂದ ಈ ಗಲಾಟೆ ಶುರುವಾಗಿತ್ತು. ಈ ಮಾತಿನ ಚಕಮಕಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು ಮತ್ತು ವಿಷ್ಣು ತನ್ನ ತಂದೆಯ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ವರದಿಯ ಪ್ರಕಾರ, ಆರೋಪಿ ಮೊದಲು ಅಡುಗೆಮನೆಯಲ್ಲಿ ತಂದೆ ಮೇಲೆ ಹಲ್ಲೆ ನಡೆಸಿ, ನಂತರ ಮನೆಯ ಹೊರಗೆ ಓಡಿಸಿ ಮತ್ತೆ ಹಲ್ಲೆ ನಡೆಸಿದ್ದಾನೆ. ತಂದೆಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಕೋಮಾದಲ್ಲಿದ್ದಾರೆ. ಆರೋಪಿಯ ತಾಯಿ ಹಾಗೂ ಇತರ ಸಂಬಂಧಿಕರು ಅವರನ್ನು ಮಗನಿಂದ ರಕ್ಷಿಸಿ ಪೊಲೀಸರಿಗೆ ವಿಷಯ ತಲುಪಿಸಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದರು, ಆರೋಪಿ ಮಗ ಮನೆಯ ಮೊದಲ ಮಹಡಿಯಲ್ಲಿ ಬೀಗ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಹಾಕಿದ್ದ. 5.30 ರ ಸುಮಾರಿಗೆ ಅವನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ವರದಿಗಳ ಪ್ರಕಾರ, ವಿಷ್ಣು ವಿಚಿತ್ರ ಆಚರಣೆಗಳು ಅಂದರೆ ಮಾಟ ಮಂತ್ರಗಳನ್ನು ಮಾಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವನು ತನ್ನ ಹೆತ್ತವರಿಂದ ದೂರವಾಗಿ ವಾಸಿಸುತ್ತಿದ್ದ. ಪೊಲೀಸರು ಆತನನ್ನು ಪರೀಕ್ಷೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:29 pm, Sun, 5 October 25

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ