
ತ್ರಿಶೂರ್, ಅಕ್ಟೋಬರ್ 05: ಮಗನೊಬ್ಬ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ(Attack) ನಡೆಸಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ವಾಗ್ವಾದ ನಡೆಯುತ್ತಲೇ ಇತ್ತು. ತಂದೆಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ, ಮನೆಯ ಬಾಗಿಲು ಹಾಕಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಮೂರು ಗಂಟೆಯ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.
ವರದಿಗಳ ಪ್ರಕಾರ, ಶನಿವಾರ ಆಸ್ತಿ ಪತ್ರಗಳ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ವಾಗ್ವಾದ ನಡೆದಿದೆ. ಮಾತು ಉಲ್ಬಣವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಸ್ಥಳೀಯ ವರದಿಗಳ ಪ್ರಕಾರ, ಬಾಡಿಗೆ ಮನೆಯಲ್ಲಿ ಈ ಘಟನೆ 1.30 ರ ಸುಮಾರಿಗೆ ನಡೆದಿದೆ. ತಂದೆ ಶಿವನ್, ಆಟೋ ಚಾಲಕನಾಗಿದ್ದು, ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ತನ್ನ ಹೆಂಡತಿಯೊಂದಿಗೆ ಮಗನ ಮನೆಗೆ ಬಂದಿದ್ದರು.
ಮತ್ತಷ್ಟು ಓದಿ: ಭಾವಿ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ವ್ಯಕ್ತಿ ಆತ್ಮಹತ್ಯೆ
ವಿಷ್ಣು ತಾನು ಕಾಗದಗಳನ್ನು ಬಾವಿಗೆ ಎಸೆದಿದ್ದೇನೆ ಎಂದು ಹೇಳಿದ್ದರಿಂದ ಈ ಗಲಾಟೆ ಶುರುವಾಗಿತ್ತು. ಈ ಮಾತಿನ ಚಕಮಕಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು ಮತ್ತು ವಿಷ್ಣು ತನ್ನ ತಂದೆಯ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.
ವರದಿಯ ಪ್ರಕಾರ, ಆರೋಪಿ ಮೊದಲು ಅಡುಗೆಮನೆಯಲ್ಲಿ ತಂದೆ ಮೇಲೆ ಹಲ್ಲೆ ನಡೆಸಿ, ನಂತರ ಮನೆಯ ಹೊರಗೆ ಓಡಿಸಿ ಮತ್ತೆ ಹಲ್ಲೆ ನಡೆಸಿದ್ದಾನೆ. ತಂದೆಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಕೋಮಾದಲ್ಲಿದ್ದಾರೆ.
ಆರೋಪಿಯ ತಾಯಿ ಹಾಗೂ ಇತರ ಸಂಬಂಧಿಕರು ಅವರನ್ನು ಮಗನಿಂದ ರಕ್ಷಿಸಿ ಪೊಲೀಸರಿಗೆ ವಿಷಯ ತಲುಪಿಸಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದರು, ಆರೋಪಿ ಮಗ ಮನೆಯ ಮೊದಲ ಮಹಡಿಯಲ್ಲಿ ಬೀಗ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಹಾಕಿದ್ದ. 5.30 ರ ಸುಮಾರಿಗೆ ಅವನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.
ವರದಿಗಳ ಪ್ರಕಾರ, ವಿಷ್ಣು ವಿಚಿತ್ರ ಆಚರಣೆಗಳು ಅಂದರೆ ಮಾಟ ಮಂತ್ರಗಳನ್ನು ಮಾಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವನು ತನ್ನ ಹೆತ್ತವರಿಂದ ದೂರವಾಗಿ ವಾಸಿಸುತ್ತಿದ್ದ. ಪೊಲೀಸರು ಆತನನ್ನು ಪರೀಕ್ಷೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Sun, 5 October 25