Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಪಿಎಫ್ಐ ಕಾರ್ಯಕರ್ತರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ನೀಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಸಾಧ್ಯತೆ

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿಗಳು ವಿಪತ್ತಿನ ಸಂದರ್ಭದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ತರಬೇತಿಯನ್ನು ಬಿಜೆಪಿಯು ಘೋರ ಅಪರಾಧವೆಂದು ಪರಿಗಣಿಸುತ್ತಿದೆ ಎಂದು ಪಿಎಫ್‌ಐ ಪದಾಧಿಕಾರಿಗಳು ಹೇಳಿದರು.

ಕೇರಳ: ಪಿಎಫ್ಐ ಕಾರ್ಯಕರ್ತರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ನೀಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಸಾಧ್ಯತೆ
ಪಿಎಫ್ಐಗೆ ತರಬೇತಿ ನೀಡುತ್ತಿರುವ ಅಧಿಕಾರಿಗಳು Image Credit source: ಪಿಎಫ್ಐ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 03, 2022 | 7:14 PM

ತಿರುವನಂತಪುರಂ: ಎರ್ನಾಕುಲಂನ (Ernakulam) ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಸೇರಿದಂತೆ ಐವರು ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರಿಗೆ ತರಬೇತಿ ನೀಡಿರುವ ಕುರಿತು ಇಲಾಖೆಯ ಮುಖ್ಯಸ್ಥರ ವರದಿಯನ್ನು ಆಧರಿಸಿ ಕ್ರಮ ಎದುರಿಸುವ ಸಾಧ್ಯತೆಯಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ಡಿಜಿಪಿ ಮತ್ತು ಕಮಾಂಡೆಂಟ್ ಜನರಲ್ ಬಿ ಸಂಧ್ಯಾ ಅವರು ಘಟನೆಯ ಬಗ್ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ವ್ಯವಹಾರಗಳು) ಟಿ ಕೆ ಜೋಸ್ (T K Jose) ಅವರಿಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಧ್ಯಾ ಅವರು ಐವರು ಅಧಿಕಾರಿಗಳ ಗಂಭೀರ ಲೋಪವನ್ನು ಎತ್ತಿ ತೋರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.  ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಯ ಲಿಖಿತ ಆದೇಶದ ಆಧಾರದ ಮೇಲೆ ಜೀವ ಉಳಿಸುವ ಕೌಶಲ್ಯಗಳ ಕುರಿತು ಪಿಎಫ್ಐ ಕಾರ್ಯಕರ್ತರಿಗೆ ತರಬೇತಿ ನೀಡಲಾಯಿತು. ಪಿಎಫ್ಐ ತನ್ನ ಹೊಸದಾಗಿ ಸ್ಥಾಪಿಸಲಾದ ರಕ್ಷಣಾ ಮತ್ತು ಪರಿಹಾರ ಪಾಪ್ಯುಲರ್ ಫ್ರಂಟ್‌ನ ಸದಸ್ಯರಿಗೆ ಜೀವ ಉಳಿಸುವ ಕೌಶಲ್ಯಗಳ ತರಬೇತಿಯನ್ನು ಕೋರಿ ಲಿಖಿತ ವಿನಂತಿಯನ್ನು ನೀಡಿತ್ತು.

ಮಾರ್ಚ್ 30 ರಂದು ನಡೆದ ಕಾರ್ಯಕ್ರಮದ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ . ಗುಪ್ತಚರ ಸಂಸ್ಥೆಗಳಿಂದ ತೀವ್ರ  ಕೋಮುವಾದಿ ಎಂದು ಕರೆಯಲ್ಪಟ್ಟ ಸಂಘಟನೆಯ ಸದಸ್ಯರಿಗೆ ತರಬೇತಿಯನ್ನು ನೀಡಿದ್ದಕ್ಕಾಗಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಇಲಾಖೆ ಟೀಕೆಗೆ ಗುರಿಯಾಗಿದೆ. ವರದಿಯಲ್ಲಿ ಹೆಸರಿಸಲಾದ ಅಧಿಕಾರಿಗಳನ್ನು ಅಮಾನತುಗೊಳಿಸುವ ಸಾಧ್ಯತೆಯಿದೆ ಮತ್ತು ಅವರ ವಿರುದ್ಧ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಬಲ್ಲಮೂಲಗಳು ಹೇಳಿವೆ.

ಇತ್ತೀಚೆಗಷ್ಟೇ ಪಿಎಫ್‌ಐ ಮುಖ್ಯವಾಹಿನಿ ಸಮಾಜದಲ್ಲಿ ತಮ್ಮನ್ನು ಒಪ್ಪಿಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದೆ ಎಂದು ರಾಜ್ಯ ಪೊಲೀಸ್ ಮೂಲಗಳು ತಿಳಿಸಿವೆ. ತರಬೇತಿಯ ಸುದ್ದಿ ಹೊರಬಿದ್ದ ನಂತರ ಸರ್ಕಾರದ ವಿರುದ್ಧ ಬಿಜೆಪಿ ಕಟು ಟೀಕೆಗಳನ್ನು ಮಾಡಿತ್ತು.  ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವುದರಿಂದ ಜಿಹಾದಿ ಶಕ್ತಿಗಳಿಗೆ ಸರ್ಕಾರ ರೆಡ್ ಕಾರ್ಪೆಟ್ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.

ತನ್ನ ಕೋಮು ಧ್ರುವೀಕರಣ ತಂತ್ರದ ಭಾಗವಾಗಿ ಸಂಘ ಶಕ್ತಿಗಳು ಪಿಎಫ್ಐ ವಿರುದ್ಧ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿವೆ ಎಂದು ಪಿಎಫ್ಐ ಹೇಳಿಕೆ ನೀಡಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿಗಳು ವಿಪತ್ತಿನ ಸಂದರ್ಭದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ತರಬೇತಿಯನ್ನು ಬಿಜೆಪಿಯು ಘೋರ ಅಪರಾಧವೆಂದು ಪರಿಗಣಿಸುತ್ತಿದೆ ಎಂದು ಪಿಎಫ್‌ಐ ಪದಾಧಿಕಾರಿಗಳು ಹೇಳಿದರು. ಪಿಎಫ್ಐ ಯಾವಾಗಲೂ ವಿವಿಧ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ ಮತ್ತು ಅದರ ಪ್ರಯತ್ನಗಳಿಗಾಗಿ ಗುರುತಿಸಲ್ಪಟ್ಟಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಇಂತಹ ವಿಪತ್ತುಗಳ ಸಮಯದಲ್ಲಿ ಸಾರ್ವಜನಿಕರನ್ನು ಸಜ್ಜುಗೊಳಿಸಲು ತರಬೇತಿ ನೀಡಬೇಕಾಗಿದೆ. ಅಂತಹ ಸೇವೆಯನ್ನು ಪಿಎಫ್‌ಐ ಸಹ ಬಳಸಿಕೊಂಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಾಶ್ಮೀರಿ ಪಂಡಿತರು ವಾಪಸ್ ಬಂದರೆ ಅವರನ್ನು ಯಾರೂ ಸ್ಥಳಾಂತರ ಮಾಡುವುದಿಲ್ಲ: ಮೋಹನ್ ಭಾಗವತ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್