AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿ.4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೊ | ಬಲೆಗೆ ಬಿದ್ದ ಶಾರ್ಕ್ ಮೀನನ್ನು ಮತ್ತೆ ಸಮುದ್ರಕ್ಕೆ ಸೇರಿಸಿದ ಮೀನುಗಾರರು
shruti hegde
| Edited By: |

Updated on:Dec 06, 2020 | 2:24 PM

Share

ಕೊಚ್ಚಿ: ಹವಾಮಾನ ವೈಪರೀತ್ಯದಿಂದಾಗಿ ದಿನೇದಿನೇ ತಾಪಮಾನ ವ್ಯತ್ಯಾಸ ಉಂಟಾಗುತ್ತಿದೆ. ಇದರಿಂದ ಸಮುದ್ರಗಳಲ್ಲಿ ಕಂಡುಬರುತ್ತಿದ್ದ ಶಾರ್ಕ್ ಮೀನಿನ ಪ್ರಭೇದಗಳು ಅಲ್ಲೋ ಇಲ್ಲೋ ಎಂಬಂತಾಗಿದೆ. ಮೀನುಗಾರರ ಬಲೆಗೆ ಸಿಕ್ಕಿ ಅನೇಕ ಶಾರ್ಕ್ ಮೀನು ಬಲಿಯಾಗಿವೆ.

ಕೇರಳದ ಶಂಖುಮುಖಂ ಕಡಲ ಕಿನಾರೆಯಲ್ಲಿ ಮೀನುಗಾರರ ಬಲೆಗೆ ಸಿಕ್ಕಿ ಬಿದ್ದಿದ್ದ ಶಾರ್ಕ್​ವೊಂದನ್ನು ರಕ್ಷಿಸಿ ಪ್ರಾಣ ಉಳಿಸಿದ ಘಟನೆ ಡಿಸೆಂಬರ್ 4ರಂದು ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋ ಒಂದೂವರೆ ನಿಮಿಷದಷ್ಟಿದೆ. ಬಲೆಯಿಂದ ಶಾರ್ಕ್ ಮೀನನ್ನು ಹೊರತೆಗೆದು ಸಮುದ್ರಕ್ಕೆ ಮರಳಿಸಿದ ಘಟನೆಯನ್ನು ವಿಡಿಯೋದಲ್ಲಿ ನೋಡಬಹುದು.

ಮೀನುಗಾರರ ಗುಂಪಿನಲ್ಲಿ ಸುಮಾರು 60 ಜನರು ಸೇರಿದ್ದಾರೆ. ಬಲೆಯಿಂದ ಶಾರ್ಕ್ ಮೀನು ಹೊರತೆಗೆದು ಹಗ್ಗದ ಸಹಾಯದಿಂದ ಮರಳಿ ತನ್ನ ವಾಸಸ್ಥಾನಕ್ಕೆ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು ಮೀನುಗಾರರು ಪ್ರಶಂಸೆಗಿಟ್ಟಿಸಿಕೊಂಡಿದ್ದಾರೆ.

ಮೀನುಗಾರರ ಪರಿಶ್ರಮವನ್ನು ಅಭಿನಂದಿಸಿರುವ ವನ್ಯಜೀವಿ ಸಂರಕ್ಷಣೆಗಾಗಿ ದುಡಿಯುತ್ತಿರುವ ವೈಲ್ಡ್​ಲೈಫ್​ ಟ್ರಸ್ಟ್​ ಇಂಡಿಯಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿವೇಕ್ ಮೆನನ್​ ಈ ಮೀನುಗಾರರಿಗೆ ವಿಶೇಷ ಪ್ರಶಸ್ತಿ ಘೋಷಿಸಿದ್ದಾರೆ.

ಕೇರಳದ ವನ್ಯಜೀವಿ ಸಂರಕ್ಷಣಾ ಅಧಿಕಾರಿಗಳು ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.

Published On - 2:23 pm, Sun, 6 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು