ದೆಹಲಿ: ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿರುವ ಕೇರಳದ (Kerala) ಜನರಿಗೆ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭರವಸೆ ನೀಡಿದರು. ಶನಿವಾರ ರಾಜ್ಯದ ದಕ್ಷಿಣ ಮತ್ತು ಮಧ್ಯ ಭೂಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ, ಕನಿಷ್ಠ 18 ಜನರು ಪ್ರಾಣ ಕಳೆದುಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಟ್ವೀಟ್ ಮಾಡಿದ ಶಾ, ಕೇಂದ್ರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು. ಭಾರೀ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಕೇರಳದ ಕೆಲವು ಭಾಗಗಳ ಪರಿಸ್ಥಿತಿಯನ್ನು ನಾವು ನಿರಂತರವಾಗಿ ಗಮನಿಸುತ್ತಿದ್ದೇವೆ. ಅಗತ್ಯವಿರುವ ಜನರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (NDRF) ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಸುತ್ತೇನೆ ”ಎಂದು ಗೃಹ ಸಚಿವರು ಟ್ವೀಟ್ ಮಾಡಿದ್ದಾರೆ.
We are continuously monitoring the situation in parts of Kerala in the wake of heavy rainfall and flooding. The central govt will provide all possible support to help people in need. NDRF teams have already been sent to assist the rescue operations. Praying for everyone’s safety.
— Amit Shah (@AmitShah) October 17, 2021
ಏತನ್ಮಧ್ಯೆ, ಮಧ್ಯ ಕೇರಳದಲ್ಲಿ ಭಾನುವಾರ ಬೆಳಿಗ್ಗೆ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ” ಕಡಿಮೆಯಿಂದ ಸಾಧಾರಣ” ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಬುಲೆಟಿನ್ ನಲ್ಲಿ ತಿಳಿಸಿದೆ. ಈ ಅವಧಿಯಲ್ಲಿ ಕೇರಳ ಕೆಲವು
ಕೇರಳದಲ್ಲಿ ತೀವ್ರವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದಿದ್ದಾರೆ. ಅದೇ ವೇಳೆ ಕಂದಾಯ ಸಚಿವ ಕೆ ರಾಜನ್, ಪರಿಸ್ಥಿತಿ “ನಿಯಂತ್ರಣದಲ್ಲಿದೆ” ಎಂದು ಹೇಳಿದರು. ಎನ್‌ಡಿಆರ್‌ಎಫ್ ಜೊತೆಗೆ, ಸಶಸ್ತ್ರ ಪಡೆಗಳ ಮೂರು ವಿಭಾಗಗಳಾದ ಸೇನೆ, ನೌಕಾಪಡೆ ಮತ್ತು ವಾಯುಪಡೆಯನ್ನೂ ಸಹ ಸಹಕಾರಕ್ಕೆ ಒತ್ತಾಯಿಸಲಾಗಿದೆ.
#WATCH Kanjirappally in Kottayam district inundated due to incessant rainfall; IMD issues Red alert for the district #Kerala pic.twitter.com/hzwBq4alx2
— ANI (@ANI) October 16, 2021
ಕೇರಳದಲ್ಲಿ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 8ಕ್ಕೆ ಏರಿಕೆ
ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದ ಸಾವಿನ ಸಂಖ್ಯೆ ಭಾನುವಾರ ಎಂಟಕ್ಕೆ ಏರಿಕೆಯಾಗಿದ್ದು, ಕೋಟ್ಟಯಂ ಮತ್ತು ಇಡುಕ್ಕಿ ಜಿಲ್ಲೆ ಅತೀ ಹೆಚ್ಚು ಹಾನಿಗೊಳಗಾಗಿದೆ. ಸೇನೆ, ಎನ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳ ಸ್ಥಳೀಯರೊಂದಿಗೆ ಭಾನುವಾರ ಬೆಳಿಗ್ಗೆ ರಕ್ಷಣಾ ಕಾರ್ಯಗಳನ್ನು ಆರಂಭಿಸಿದ್ದು, ಶನಿವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.
ಭಾನುವಾರ ಬೆಳಿಗ್ಗೆ ರಕ್ಷಣ ಸಿಬ್ಬಂದಿಗಳು ಇನ್ನೂ ನಾಲ್ಕು ಮೃತದೇಹಗಳನ್ನು ಕೂಟ್ಟಿಕ್ಕಲ್ ಪಂಚಾಯತ್‌ನಿಂದ ಪತ್ತೆ ಹಚ್ಚಿದ್ದಾರೆ. ಅವರನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಬ್ಬರು ಮಹಿಳೆಯರು ಮತ್ತು ಒಂದು ಮಗುವಿನ ಮೃತದೇಹಗಳನ್ನು ಶನಿವಾರ ಕೂಟ್ಟಿಕ್ಕಲ್ನಲ್ಲಿ ಪತ್ತೆ ಮಾಡಲಾಗಿದೆ.
ಇದನ್ನೂ ಓದಿ: Kerala Rain Updates: ಕೇರಳದಲ್ಲಿ ಧಾರಾಕಾರ ಮಳೆ; ಇದುವರೆಗೆ 18 ಮಂದಿ ಸಾವು, ಸೇನೆಯಿಂದ ಸಹಾಯಬೇಕೆಂದ ಪಿಣರಾಯಿ ವಿಜಯನ್