Kerala Gold Smuggling Case: ಕೇರಳ ಚಿನ್ನದ ಸ್ಮಗ್ಲಿಂಗ್ ಪ್ರಕರಣ; ಹಿರಿಯ ಐಪಿಎಸ್ ಅಧಿಕಾರಿ ವರ್ಗಾವಣೆ
ನಿನ್ನೆ ತಡರಾತ್ರಿ ಕೇರಳ ಸರ್ಕಾರ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ನಿರ್ದೇಶಕ ಎಂಆರ್ ಅಜಿತ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ತಿರುವನಂತಪುರಂ: ಭಾರೀ ಚರ್ಚೆಗೆ ಒಳಗಾಗಿದ್ದ ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಮತ್ತು ಆಕೆಯ ಪರಿಚಯಸ್ಥರ ನಡುವಿನ ಸಂಭಾಷಣೆಯಲ್ಲಿ ಹೆಸರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇರಳದ ಹಿರಿಯ ಐಪಿಎಸ್ ಅಧಿಕಾರಿಯನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ನಿನ್ನೆ ತಡರಾತ್ರಿ ಕೇರಳ ಸರ್ಕಾರ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ನಿರ್ದೇಶಕ ಎಂಆರ್ ಅಜಿತ್ ಕುಮಾರ್ (MR Ajith Kumar) ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸ್ವಪ್ನಾ ಸುರೇಶ್ (Swapna Suresh) ಅವರ ವಿವಾದಾತ್ಮಕ ಆಡಿಯೋ ಕ್ಲಿಪ್ ಬಿಡುಗಡೆಯಾದ ಕೆಲವೇ ಗಂಟೆಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಹಗರಣದಲ್ಲಿ ಹೊಸ ಬಹಿರಂಗವಾದ ತಕ್ಷಣ ಸ್ವಪ್ನಾ ಸುರೇಶ್ ಅವರ ಜೊತೆಗಿದ್ದ ಆರೋಪಿ ಪಿ.ಎಸ್ ಸರಿತ್ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಕ್ಕಾಗಿ ವಿಜಿಲೆನ್ಸ್ ಇಲಾಖೆಯನ್ನು ವಿರೋಧ ಪಕ್ಷಗಳು ಟೀಕಿಸಿದ್ದವು. ಪಾಲಕ್ಕಾಡ್ ವಿಜಿಲೆನ್ಸ್ ಘಟಕವು ನೋಟಿಸ್ ನೀಡದೆ ಬಲವಂತವಾಗಿ ಕರೆದೊಯ್ದು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಆರೋಪಿಗಳನ್ನು ಬೆದರಿಸಿ ಬಾಯಿ ಮುಚ್ಚಿಸಲು ಎಲ್‌ಡಿಎಫ್ ಸರ್ಕಾರ ನಡೆಸಿದ ಪ್ರಯತ್ನ ಇದಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಇದನ್ನೂ ಓದಿ: Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆ
“ಎಂ.ಆರ್ ಅಜಿತ್ ಕುಮಾರ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ವಿಜಿಲೆನ್ಸ್ ನಿರ್ದೇಶಕರು, ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದ ಸಂಪೂರ್ಣ ಹೆಚ್ಚುವರಿ ಉಸ್ತುವಾರಿ ಹೊಂದಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ” ಎಂದು ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೆ ಐಪಿಎಸ್ ಅಧಿಕಾರಿ ಪೊಲೀಸ್ ಮಹಾನಿರೀಕ್ಷಕರು, ವಿಜಿಲೆನ್ಸ್ (ಹೆಡ್ ಕ್ವಾರ್ಟರ್ಸ್) ಎಚ್ ವೆಂಕಟೇಶ್ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಸಂಪೂರ್ಣ ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿರುತ್ತಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:29 am, Sat, 11 June 22