ದಿನಕ್ಕೆ 5 ಸಾವಿರ ಅಯ್ಯಪ್ಪ ಭಕ್ತರ ಭೇಟಿಗೆ ಹೈಕೋರ್ಟ್ ಅವಕಾಶ: ಕಷ್ಟ ಕಷ್ಟ ಎಂದ ಕೇರಳ ಸರ್ಕಾರ

ದಿನಕ್ಕೆ 5,000 ಜನರ ಭೇಟಿಗೆ ಅವಕಾಶ ನೀಡಲು ಕೇರಳ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ, ಕೊವಿಡ್​ 19 ಪರಿಸ್ಥಿತಿಯಲ್ಲಿ ಇಂತಹ ನಿಲುವು ತಳೆಯುವುದು ಸೂಕ್ತವಲ್ಲ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದೆ.

ದಿನಕ್ಕೆ 5 ಸಾವಿರ ಅಯ್ಯಪ್ಪ ಭಕ್ತರ ಭೇಟಿಗೆ ಹೈಕೋರ್ಟ್ ಅವಕಾಶ: ಕಷ್ಟ ಕಷ್ಟ ಎಂದ ಕೇರಳ ಸರ್ಕಾರ
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 24, 2020 | 2:59 PM

ಕೊಚ್ಚಿ: ಸಂಕ್ರಾಂತಿ ಪೊಂಗಲ್ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಯ್ಯಪ್ಪನ ದರ್ಶನಕ್ಕೆ ಶಬರಿಮಲೆಗೆ ಆಗಮಿಸುವ ಭಕ್ತರನ್ನು ಗಮನದಲ್ಲಿರಿಸಿಕೊಂಡು ದಿನಕ್ಕೆ 5,000 ಜನರ ಭೇಟಿಗೆ ಅವಕಾಶ ನೀಡಿ, ಕೇರಳ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ, ಉಚ್ಛ ನ್ಯಾಯಾಲಯದ ಸದರಿ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

ಶಬರಿಮಲೆ ಭೇಟಿಗೆ ಭಕ್ತಾದಿಗಳಿಗೆ ಅವಕಾಶ ನೀಡುವ ಕುರಿತು ರಾಜ್ಯ ಸರ್ಕಾರ ಈಗಾಗಲೇ ಉನ್ನತ ಮಟ್ಟದ ಸಮಿತಿ ರಚಿಸಿದೆ. ಸಮಿತಿಯ ನಿರ್ಧಾರದ ಪ್ರಕಾರ ವಾರದ ದಿನಗಳಲ್ಲಿ 2,000 ಜನರಿಗೆ ಮತ್ತು ವಾರಾಂತ್ಯದಲ್ಲಿ 3,000 ಜನರಿಗೆ ದೇಗುಲ ಪ್ರವೇಶಿಸಲು ಅನುಮತಿ ನೀಡುವುದು ಸೂಕ್ತ. ಆದರೆ, ಹೈಕೋರ್ಟ್​ 5,000 ಜನರಿಗೆ ಅನುಮತಿ ನೀಡಿದೆ. ಕೊವಿಡ್​ 19 ಪರಿಸ್ಥಿತಿಯಲ್ಲಿ ಇಂತಹ ನಿಲುವು ತಳೆಯುವುದು ಸೂಕ್ತವಲ್ಲ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಒಮ್ಮೆಲೆ 5 ಸಾವಿರ ಜನರಿಗೆ ಅವಕಾಶ ನೀಡಿದರೆ ಅದು ಪೊಲೀಸ್​ ಅಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚುವರಿ ಒತ್ತಡ ಉಂಟು ಮಾಡುತ್ತದೆ. ಈ ದೃಷ್ಟಿಯಿಂದಲೇ ಡಿಸೆಂಬರ್​ 20ರಿಂದ ಜನವರಿ 14ರ ಅವಧಿಯಲ್ಲಿ ಭಕ್ತಾದಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿ ಸೂಕ್ತ ನಿರ್ಧಾರ ಪ್ರಕಟಿಸಿತ್ತು. ಆದರೆ, ಈಗ ಹೈಕೋರ್ಟ್​ ಆದೇಶ ಇದಕ್ಕೆ ವ್ಯತಿರಿಕ್ತವಾಗಿದೆ ಎಂದು ತಿಳಿಸಿದೆ.

ಭಕ್ತಾದಿಗಳ ಪ್ರವೇಶಕ್ಕೆ ಅವಕಾಶ ನೀಡುವ ಮುನ್ನ ಪ್ರತಿಯೊಬ್ಬರ ತಪಾಸಣೆ ನಡೆಸಬೇಕು. ಸಾವಿರಾರು ಜನರು ಆಗಮಿಸಿದರೆ ತಪಾಸಣಾ ಪ್ರಕ್ರಿಯೆ ಒತ್ತಡವನ್ನು ಉಂಟು ಮಾಡುತ್ತದೆ. ಇನ್ನೊಂದೆಡೆ ಬ್ರಿಟನ್​ನಲ್ಲಿ ಕೊರೊನಾ ವೈರಸ್​ ರೂಪಾಂತರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತ-ಬ್ರಿಟನ್​ ನಡುವಿನ ವಿಮಾನಯಾನಕ್ಕೆ ನಿರ್ಬಂಧ ಹೇರಿದೆ.

ಇಂತಹ ವಿಷಮ ಪರಿಸ್ಥಿತಿಯಲ್ಲಿ ಅಪಾಯ ಮೈಮೇಲೆ ಎಳೆದುಕೊಳ್ಳುವುದು ಸರಿಯಲ್ಲ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯ ಈ ಕೂಡಲೇ ಮಧ್ಯ ಪ್ರವೇಶಿಸಿ ಕೇರಳ ಸರ್ಕಾರದ ಮನವಿಯನ್ನು ಪುರಸ್ಕರಿಸಬೇಕು ಎಂದು ವಿನಂತಿಸಿಕೊಂಡಿದೆ.

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ