ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಇಂದು ರಾಜೀನಾಮೆ ನೀಡಲು ರಾಜ್ಯಪಾಲರ ಆದೇಶ
ಕೇರಳದ ರಾಜ್ಯಪಾಲರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಇಂದು ಬೆಳಿಗ್ಗೆ 11.30ರೊಳಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.
ತಿರುವನಂತಪುರಂ: ಸುಪ್ರೀಂ ಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿರುವ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಇಂದು (ಅಕ್ಟೋಬರ್ 24) ಬೆಳಿಗ್ಗೆ 11.30ರೊಳಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುವಂತೆ ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಆದೇಶಿಸಲಾಗಿದೆ.
ಇತ್ತೀಚೆಗಷ್ಟೆ ಯುಜಿಸಿ ನಿಯಮಗಳನ್ನು ಪಾಲಿಸದೆ ನೇಮಕಗೊಳಿಸಿರುವ ಹಿನ್ನೆಲೆಯಲ್ಲಿ ತಿರುವನಂತಪುರದ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಕೇರಳದ ರಾಜ್ಯಪಾಲರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.
ಇದನ್ನೂ ಓದಿ: Bidar: ವಿಶ್ವವಿದ್ಯಾಲಯದಲ್ಲಿ 10 ವರ್ಷ ಸೇವೆ ಸಲ್ಲಿಸಿದ 13 ಸಿಬ್ಬಂದಿಯ ಉದ್ಯೋಗ ಕಾಯಂಗೊಳಿಸಲು ಹೈಕೋರ್ಟ್ ಸೂಚನೆ
ಆ 9 ವಿಶ್ವವಿದ್ಯಾನಿಲಯಗಳೆಂದರೆ ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ ಎಝುತಾಚನ್ ಮಲಯಾಳಂ ವಿಶ್ವವಿದ್ಯಾಲಯ.
Upholding the verdict of Hon’ble SupremeCourt dt 21.10.22 in Civil Appeal Nos.7634-7635 of 2022(@ SLP(c)Nos.21108-21109 of 2021) Hon’ble Governor Shri Arif Mohammed Khan has directed Vice Chancellors of 9 varsities in Kerala(see image) to tender resignation: PRO,KeralaRajBhavan pic.twitter.com/tsT5tQ9NJr
— Kerala Governor (@KeralaGovernor) October 23, 2022
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ (ಕೆಟಿಯು) ಉಪಕುಲಪತಿಯಾಗಿ ಡಾ.ರಾಜಶ್ರೀ ಎಂಎಸ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ಈ ಹಿಂದೆ ರದ್ದುಗೊಳಿಸಿತ್ತು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಪ್ರಕಾರ, ಶೋಧನಾ ಸಮಿತಿಯು ವಿಸಿ ಹುದ್ದೆಗೆ ಮೂವರಿಗೆ ಕಡಿಮೆಯಿಲ್ಲದ ಅರ್ಹ ವ್ಯಕ್ತಿಗಳ ಸಮಿತಿಯನ್ನು ಶಿಫಾರಸು ಮಾಡಬೇಕಾಗಿತ್ತು. ಆದರೆ ರಾಜಶ್ರೀ ಅವರ ಪ್ರಕರಣದಲ್ಲಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ: ಕೇರಳದಲ್ಲಿ ದೀಪಾವಳಿಯನ್ನು ಅಷ್ಟೊಂದು ಸಂಭ್ರಮದಿಂದ ಆಚರಿಸುವುದಿಲ್ಲ, ಕಾರಣ ಇಲ್ಲಿದೆ
ನವೆಂಬರ್‌ನಲ್ಲಿ ರಾಜ್ಯಪಾಲರ ವಿರುದ್ಧ ಆಡಳಿತಾರೂಢ ಎಲ್‌ಡಿಎಫ್ ಸರಣಿ ಪ್ರತಿಭಟನೆಗಳನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಬಂದಿದೆ. “ರಾಜ್ಯಪಾಲರು ತಾವು ಆರ್‌ಎಸ್‌ಎಸ್ ಬೆಂಬಲಿಗ ಎಂದು ಘೋಷಿಸಿಕೊಳ್ಳುತ್ತಿದ್ದಾರೆ. ವಿವಿ ವಿಚಾರದಲ್ಲಿ ರಾಜ್ಯಪಾಲರ ಮಧ್ಯಸ್ಥಿಕೆ ಸರಿಯಲ್ಲ. ಆರ್‌ಎಸ್‌ಎಸ್ ಸದಸ್ಯರನ್ನು ಕರೆತರಲು ಸೆನೆಟ್ ಸದಸ್ಯರನ್ನು ಹಿಂಪಡೆಯಲಾಗಿದೆ. ಉನ್ನತ ಶಿಕ್ಷಣ ಕ್ಷೇತ್ರವನ್ನು ನಿಯಂತ್ರಿಸಲು ರಾಜ್ಯಪಾಲರ ಪ್ರಯತ್ನ. ಪ್ರತಿರೋಧವನ್ನು ನಿರ್ಮಿಸುವುದು ಗುರಿಯಾಗಿದೆ. ಇದರ ವಿರುದ್ಧ ಕೇರಳದ ಶಾಸಕ ಎಂವಿ ಗೋವಿಂದನ್ ಹೇಳಿದ್ದಾರೆ.