Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದಲ್ಲಿ ವರದಕ್ಷಿಣೆ ಪಿಡುಗಿನ ವಿರುದ್ಧ ರಾಜ್ಯಪಾಲರಿಂದಲೇ ಉಪವಾಸ ಸತ್ಯಾಗ್ರಹ

Governor Arif Mohammed Khan | ಸಾಮಾಜಿಕ ಜಾಗೃತಿ ಮೂಡಿಸಲು ಕೇರಳದ ರಾಜ್ಯಪಾಲರು ನಡೆಸಿದ ಉಪವಾಸ ಸತ್ಯಾಗ್ರಹ ರಾಜಕೀಯವಾಗಿಯೂ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

Kerala: ಕೇರಳದಲ್ಲಿ ವರದಕ್ಷಿಣೆ ಪಿಡುಗಿನ ವಿರುದ್ಧ ರಾಜ್ಯಪಾಲರಿಂದಲೇ ಉಪವಾಸ ಸತ್ಯಾಗ್ರಹ
ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 15, 2021 | 11:42 AM

ತಿರುವನಂತಪುರಂ: ಕೇರಳ ಸರ್ಕಾರದ ವಿರುದ್ಧ ಅಲ್ಲಿನ ರಾಜ್ಯಪಾಲರೇ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಕಳೆದೆರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ ಮಹಿಳೆಯ ಮನೆಗೆ ಭೇಟಿ ನೀಡಿದ್ದ ಕೇರಳದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ (Arif Mohammed Khan) ಕೇರಳದಲ್ಲಿ ಹೆಚ್ಚುತ್ತಿರುವ ವರದಕ್ಷಿಣೆ ಪಿಡುಗು (Dowry Harassment), ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ನಿನ್ನೆ ಉಪವಾಸ ಸತ್ಯಾಗ್ರಹ (Hunger Strike) ನಡೆಸಿದ್ದಾರೆ. ರಾಜ್ಯಪಾಲರ ಈ ನಡೆಯಿಂದ ಕೇರಳ ಸರ್ಕಾರಕ್ಕೆ (Kerela Government) ತೀವ್ರ ಮುಜುಗರ ಉಂಟಾಗಿದೆ.

ಬುಧವಾರ ಬೆಳಗ್ಗೆ 8 ಗಂಟೆಯಿಂದ ಒಟ್ಟು 10 ಗಂಟೆಗಳ ಕಾಲ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ವರದಕ್ಷಿಣೆ, ಮಹಿಳಾ ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಕೇರಳದಲ್ಲಿ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ, ವರದಕ್ಷಿಣೆಗಾಗಿ ಕಿರುಕುಳ ನೀಡಿ ಮಹಿಳೆಯ ಕೊಲೆ ಮಾಡಿದ ಹಲವು ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ಕೇರಳದಲ್ಲಿ ವರದಕ್ಷಿಣೆ, ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಕೇರಳ ಸರ್ಕಾರವೇ ವರದಿ ನೀಡಿತ್ತು. ಹೀಗಾಗಿ, ಈ ಬಗ್ಗೆ ಅರಿವು ಮೂಡಿಸಲು ರಾಜ್ಯಪಾಲರು ಉಪವಾಸ ಕೈಗೊಂಡಿದ್ದಾರೆ.

ಕೇರಳದಲ್ಲಿ ಗಾಂಧಿ ಸ್ಮಾರಕ ನಿಧಿ ಸೇರಿದಂತೆ ಹಲವು ಸಂಘಟನೆಗಳು ವರದಕ್ಷಿಣೆ, ಮಹಿಳಾ ಮತ್ತು ಮಕ್ಕಳ ದೌರ್ಜನ್ಯದ ವಿರುದ್ಧ ಅರಿವು ಮೂಡಿಸಲು ಉಪವಾಸ ಸತ್ಯಾಗ್ರಹ ನಡೆಸಿದ್ದವು. ಆ ಅಭಿಯಾನಕ್ಕೆ ಬೆಂಬಲ ಸೂಚಿಸಲು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕೂಡ ಉಪವಾಸ ಮಾಡಿದ್ದಾರೆ. ನಿನ್ನೆ ನಡೆದ ರಾಜ್ಯಪಾಲರ ಉಪವಾಸ ಸತ್ಯಾಗ್ರಹಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ಸೂಚಿಸಿತ್ತು.

ಕೇರಳದಲ್ಲಿನ ನಡೆಯುತ್ತಿರುವ ಘಟನೆಗಳಿಂದ ರಾಜ್ಯಪಾಲರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಕೇರಳ ಬಿಜೆಪಿ ಹೇಳಿತ್ತು. ಕಾಂಗ್ರೆಸ್ ನಾಯಕರು ಕೂಡ ಕೇರಳ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಒಟ್ಟಾರೆ, ಸಾಮಾಜಿಕ ಜಾಗೃತಿ ಮೂಡಿಸಲು ಕೇರಳದ ರಾಜ್ಯಪಾಲರು ನಡೆಸಿದ ಉಪವಾಸ ಸತ್ಯಾಗ್ರಹ ರಾಜಕೀಯವಾಗಿಯೂ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಕೇರಳದ ರಾಜಭವನದಲ್ಲಿ ಆರಿಫ್ ಮೊಹಮ್ಮದ್ ಖಾನ್ ನಿನ್ನೆ ಬೆಳಿಗ್ಗೆಯಿಂದ ಸಂಜೆಯವರೆಗೂ ಉಪವಾಸ ನಡೆಸಿದರು. ಕೆಲವು ದಿನಗಳ ಹಿಂದೆ ಕೇರಳದಲ್ಲಿ 24 ವರ್ಷದ ವಿಸ್ಮಯಾ ನಾಯರ್ ಎಂಬ ಆಯುರ್ವೇದ ವಿದ್ಯಾರ್ಥಿನಿ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಗಂಡನ ಮನೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಮನೆಗೆ ಖುದ್ದಾಗಿ ರಾಜ್ಯಪಾಲರೇ ಹೋಗಿ ಆಕೆಯ ಪೋಷಕರಿಗೆ ಸಾಂತ್ವನ ಹೇಳಿದ್ದು ಭಾರೀ ಸುದ್ದಿಯಾಗಿತ್ತು. ರಾಜ್ಯಪಾಲರ ನಡೆಗೆ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಅದರ ಮಾರನೇ ದಿನವೇ ಉಪವಾಸ ಕೈಗೊಳ್ಳುವ ಮೂಲಕ ರಾಜ್ಯಪಾಲರು ಕೇರಳ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳದ ಕಾಂಗ್ರೆಸ್‌ ಅಧ್ಯಕ್ಷ ಕೆ. ಸುಧಾಕರ್, ‘ರಾಜ್ಯಪಾಲರೇ ಸಾಮಾಜಿಕ ಪಿಡುಗಿನ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿರುವ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. ಈ ಮೂಲಕ ರಾಜ್ಯಪಾಲರು ವರದಕ್ಷಿಣೆ ಪಿಡುಗಿನ ವಿರುದ್ಧ ಕೇರಳ ಸರ್ಕಾರ ಕ್ರಮ ಕೈಗೊಳ್ಳಲೇಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲರ ಈ ನಡೆಗೆ ಸರ್ಕಾರವೇ ಜವಾಬ್ದಾರಿಯಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ವಿ. ಮುರಳೀಧರನ್ ಟ್ವೀಟ್ ಮಾಡಿದ್ದು, ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅವರ ಈ ವರ್ತನೆ ಎಲ್ಲರಿಗೂ ಮಾದರಿಯಾಗಿದೆ. ಗಾಂಧಿ ತತ್ವಗಳಿಂದ ಪ್ರಭಾವಿತರಾಗಿರುವ ಅವರು ಶಾಂತರೀತಿಯಲ್ಲೇ ಸಾಮಾಜಿಕ ಪಿಡುಗಿನ ವಿರುದ್ಧ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Thawarchand Gehlot Oath Taking; ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣ ವಚನ ಸ್ವೀಕಾರ

(Kerala Governor Arif Mohammed Khan Observes Day long Fast Against Dowry on Wednesday)

Published On - 11:40 am, Thu, 15 July 21

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ