ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ತಗುಲಿದ ಬೆಂಕಿ

|

Updated on: Oct 01, 2024 | 4:14 PM

ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯ ವೈರಲ್ ಫೋಟೋಗಳು ಪಲಕ್ಕಾಡ್‌ನ ಶಬರಿ ಆಶ್ರಮದ 'ಶತಾಬ್ದಿ' ಸಮಾರೋಪ ಸಮಾರಂಭದಲ್ಲಿ ನಡೆದ ಸಮಾರಂಭದ್ದಾಗಿವೆ ಎನ್ನಲಾಗಿದೆ.

ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಶಾಲಿಗೆ ತಗುಲಿದ ಬೆಂಕಿ
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
Follow us on

ಪಲಕ್ಕಾಡ್: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು (ಮಂಗಳವಾರ) ಪಲಕ್ಕಾಡ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ಅವರ ಶಾಲಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಅವರು ಈ ಬೆಂಕಿ ಅವಘಡದಿಂದ ಪಾರಾಗಿದ್ದಾರೆ. ತಕ್ಷಣ ಆ ಬೆಂಕಿಯನ್ನು ಆರಿಸಲಾಯಿತು. ಅಧಿಕೃತ ಮೂಲಗಳ ಪ್ರಕಾರ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ರಾಜ್ಯಪಾಲರು ಧರಿಸಿದ್ದ ಶಾಲಿಗೆ ಬೆಂಕಿ ಹೊತ್ತಿಕೊಂಡಿದೆ.

ಶಬರಿ ಆಶ್ರಮದ ‘ಶತಾಬ್ದಿ’ ಸಮಾರೋಪ ಸಮಾರಂಭದಲ್ಲಿ ದೀಪ ಬೆಳಗಿಸಲು ರಾಜ್ಯಪಾಲರು ಬಾಗುತ್ತಿದ್ದಂತೆ ಅವರ ಶಾಲಿನ ತುದಿಗೆ ಬೆಂಕಿ ಹೊತ್ತಿಕೊಂಡಿತು ಎಂದು ಮೂಲಗಳು ತಿಳಿಸಿವೆ. “ಸ್ಥಳದಲ್ಲೇ ಅದನ್ನು ಕೂಡಲೇ ನಂದಿಸಲಾಯಿತು. ಆದರೆ, ಯಾರಿಗೂ ಗಾಯಗಳಾಗಿಲ್ಲ” ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಥೈಲ್ಯಾಂಡ್​ನಲ್ಲಿ ಶಾಲಾ ಬಸ್​ಗೆ ಬೆಂಕಿ, 25 ವಿದ್ಯಾರ್ಥಿಗಳು ಸಾವು

ಮತ್ತೊಂದು ಅಗ್ನಿ ದುರಂತದಲ್ಲಿ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಚಲಿಸುತ್ತಿದ್ದ ಬೆಸ್ಟ್ ಬಸ್ ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂರ್ವ ಮುಂಬೈನ ಗಾಂಧಿ ನಗರ ಜಂಕ್ಷನ್‌ನಲ್ಲಿ ಮಧ್ಯಾಹ್ನ 1.50ಕ್ಕೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ 20 ನಿಮಿಷಗಳಲ್ಲಿ ಬೆಂಕಿಯನ್ನು ಆರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ