ಹಣಕಾಸು ಸಚಿವರನ್ನು ವಜಾಗೊಳಿಸಿ; ಕೇರಳದ ಮುಖ್ಯಮಂತ್ರಿ ಪತ್ರ ಬರೆದ ರಾಜ್ಯಪಾಲರು

ಕೇರಳದ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ವಿಶ್ವವಿದ್ಯಾಲಯವೊಂದರ ಸಮಾರಂಭದಲ್ಲಿ ಉತ್ತರ ಪ್ರದೇಶದಂತಹ ಸ್ಥಳಗಳಿಂದ ಬರುವವರಿಗೆ ಕೇರಳದ ವಿಶ್ವವಿದ್ಯಾನಿಲಯಗಳನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗಬಹುದು ಎಂದು ಹೇಳಿದ್ದರು.

ಹಣಕಾಸು ಸಚಿವರನ್ನು ವಜಾಗೊಳಿಸಿ; ಕೇರಳದ ಮುಖ್ಯಮಂತ್ರಿ ಪತ್ರ ಬರೆದ ರಾಜ್ಯಪಾಲರು
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 26, 2022 | 4:18 PM

ತಿರುವನಂತಪುರಂ: ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ದೇಶದ್ರೋಹಿ ಹೇಳಿಕೆ ನೀಡಿರುವ ಕೇರಳದ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ವಾರ ತಿರುವನಂತಪುರಂನ ಕ್ಯಾಂಪಸ್‌ನಲ್ಲಿ ಬಾಲಗೋಪಾಲ್ ಪ್ರಾದೇಶಿಕತೆ ಮತ್ತು ಪ್ರಾಂತೀಯತೆಯ ಬೆಂಕಿಯನ್ನು ಹೊತ್ತಿಸಲು ಮತ್ತು ಭಾರತದ ಏಕತೆಯನ್ನು ಹಾಳುಮಾಡಲು ಉದ್ದೇಶಿಸಿ ಭಾಷಣ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಬರೆದ ಪತ್ರದಲ್ಲಿ ರಾಜ್ಯಪಾಲರು ಆರೋಪಿಸಿದ್ದಾರೆ.

ಕೇರಳದ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ವಿಶ್ವವಿದ್ಯಾಲಯವೊಂದರ ಸಮಾರಂಭದಲ್ಲಿ “ಉತ್ತರ ಪ್ರದೇಶದಂತಹ ಸ್ಥಳಗಳಿಂದ ಬರುವವರಿಗೆ ಕೇರಳದ ವಿಶ್ವವಿದ್ಯಾನಿಲಯಗಳನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗಬಹುದು” ಎಂದು ಹೇಳಿದ್ದರು. ಈ ಬಗ್ಗೆ ಕೇರಳದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ರಾಜ್ಯಪಾಲರು, ವಿತ್ತ ಸಚಿವರಾದ ಕೆಎನ್ ಬಾಲಗೋಪಾಲ್ ಅವರ ಹೇಳಿಕೆಗಳು ಕೇರಳ ಮತ್ತು ಭಾರತೀಯ ಒಕ್ಕೂಟದ ಇತರ ರಾಜ್ಯಗಳ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತವೆ. ಭಾರತದ ವಿವಿಧ ರಾಜ್ಯಗಳು ಉನ್ನತ ಶಿಕ್ಷಣದ ವಿಭಿನ್ನ ವ್ಯವಸ್ಥೆಗಳನ್ನು ಹೊಂದಿವೆ ಎಂಬ ತಪ್ಪು ಅಭಿಪ್ರಾಯವನ್ನು ಮೂಡಿಸಲು ಪ್ರಯತ್ನಿಸುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರು ಆರ್​ಎಸ್​ಎಸ್​ನ ಸಾಧನದಂತೆ ವರ್ತಿಸುತ್ತಿದ್ದಾರೆ; ಕುಲಪತಿಗಳ ರಾಜೀನಾಮೆ ಕೇಳಿದ್ದಕ್ಕೆ ಕೇರಳ ಸಿಎಂ ಆಕ್ರೋಶ

ಆದರೆ, ರಾಜ್ಯಪಾಲರ ಮನವಿಯನ್ನು ತಕ್ಷಣವೇ ತಿರಸ್ಕರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾಜ್ಯಪಾಲರ ಈ ಪತ್ರದ ನಂತರ ರಾಜ್ಯದ ಆಡಳಿತಾರೂಢ ಎಡಪಕ್ಷಗಳ ವಿದ್ಯಾರ್ಥಿ ಘಟಕವು ರಾಜಭವನದ ಹೊರಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಕೇರಳದ 9 ವಿಶ್ವವಿದ್ಯಾನಿಲಯ ಮುಖ್ಯಸ್ಥರ ರಾಜೀನಾಮೆಗೆ ಒತ್ತಾಯಿಸುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಆದೇಶವು ಪ್ರಸ್ತುತ ಕೇರಳ ಹೈಕೋರ್ಟ್‌ನಿಂದ ತಡೆಹಿಡಿಯಲ್ಪಟ್ಟಿದೆ. ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲರ ಆದೇಶದ ನಂತರ ಆ 9 ವಿವಿಗಳ ಕುಲಪತಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಕುಲಪತಿಗಳ ನೇಮಕ ಮಾಡುವಾಗ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಎಪಿಜೆ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶದ ರಾಜ್ಯಪಾಲರ ಈ ಆದೇಶ ಹೊರಬಿದ್ದಿತ್ತು. ಇತ್ತೀಚೆಗಷ್ಟೆ ಯುಜಿಸಿ ನಿಯಮಗಳನ್ನು ಪಾಲಿಸದೆ ನೇಮಕಗೊಳಿಸಿರುವ ಹಿನ್ನೆಲೆಯಲ್ಲಿ ತಿರುವನಂತಪುರದ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯ ನೇಮಕಾತಿಯನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್​ ಆದೇಶವನ್ನು ಎತ್ತಿ ಹಿಡಿದಿರುವ ಕೇರಳದ ರಾಜ್ಯಪಾಲರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದರು.

ಇದನ್ನೂ ಓದಿ: ಕೇರಳದ 9 ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಅಂತಿಮ ಆದೇಶದವರೆಗೆ ಮುಂದುವರಿಯಬಹುದು: ಕೇರಳ ಹೈಕೋರ್ಟ್

ಆ 9 ವಿಶ್ವವಿದ್ಯಾನಿಲಯಗಳೆಂದರೆ ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ ಎಝುತಾಚನ್ ಮಲಯಾಳಂ ವಿಶ್ವವಿದ್ಯಾಲಯ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ