AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Govt Employees: ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 11,801 ಸರ್ಕಾರಿ ನೌಕರರ ನಿವೃತ್ತಿ!

ದಾಖಲೆಯ 11,801 ಕೇರಳ ಸರ್ಕಾರಿ ಅಧಿಕಾರಿಗಳು (ನೌಕರರೂ ಒಳಗೊಂಡಂತೆ) (Kerala Govt Employees) ಬುಧವಾರ ನಿವೃತ್ತರಾಗುತ್ತಿದ್ದಾರೆ.

Kerala Govt Employees: ಕೇರಳದಲ್ಲಿ ಒಂದೇ ದಿನ ಬರೋಬ್ಬರಿ 11,801 ಸರ್ಕಾರಿ ನೌಕರರ ನಿವೃತ್ತಿ!
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 31, 2023 | 3:33 PM

Share

ತಿರುವನಂತಪುರ: ದಾಖಲೆಯ 11,801 ಕೇರಳ ಸರ್ಕಾರಿ ಅಧಿಕಾರಿಗಳು (ನೌಕರರೂ ಒಳಗೊಂಡಂತೆ) (Kerala Govt Employees) ಬುಧವಾರ ನಿವೃತ್ತರಾಗುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರು 56 ವರ್ಷಕ್ಕೆ ನಿವೃತ್ತರಾಗುತ್ತಾರೆ. ರಾಜ್ಯ ಸರ್ಕಾರಿ ಅಧಿಕಾರಿಗಳ ಒಟ್ಟು ಸಂಖ್ಯೆ ಸುಮಾರು 5 ಲಕ್ಷದಷ್ಟಿದೆ. ಜೂನ್​ನಲ್ಲಿ ಪ್ರಾರಂಭವಾಗುವ ಶೈಕ್ಷಣಿಕೆ ವರ್ಷದಲ್ಲಿ ಶಾಲಾ ದಾಖಲಾತಿ ಸಂದರ್ಭದಲ್ಲಿ ಪ್ರವೇಶ ಪಡೆಯಲು ಅನುವು ಮಾಡಿಕೊಡುವುದಕ್ಕಾಗಿ ಜನ್ಮ ದಿನಾಂಕವನ್ನು ಸರಿಹೊಂದಿಸಲಾಗಿದ್ದೇ ಇಷ್ಟೊಂದು ಸಂಖ್ಯೆಯಲ್ಲಿ ಅಧಿಕಾರಿಗಳು, ನೌಕರರು ಒಂದೇ ದಿನ ನಿವೃತ್ತರಾಗಲು ಮುಖ್ಯ ಕಾರಣ ಎನ್ನಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ನಿವೃತ್ತಿ ವಯಸ್ಸಿನ ವ್ಯಾಪ್ತಿಗೆ ಬರುವ ಸರ್ಕಾರಿ ಅಧಿಕಾರಿಗಳ ಒಟ್ಟು ಸಂಖ್ಯೆ 21,537 ಆಗಿದ್ದು, ಅವರಲ್ಲಿ 11,801 ಮಂದಿ ಇಂದು ಸಂಜೆ ನಿವೃತ್ತರಾಗುತ್ತಿದ್ದಾರೆ.

ನಿವೃತ್ತಿಯಾಗಲಿರುವವರಲ್ಲಿ ರಾಜ್ಯದ ಎರಡನೇ ಮಹಿಳಾ ಐಪಿಎಸ್ ಅಧಿಕಾರಿ ಡಿಜಿಪಿ ಬಿಎಸ್‌ ಸಂಧ್ಯಾ ಅವರೂ ಸೇರಿದ್ದಾರೆ. ಇವರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮುಖ್ಯಸ್ಥರ ಹುದ್ದೆಯಿಂದ ನಿವೃತ್ತರಾಗುತ್ತಿದ್ದಾರೆ.

ಇದನ್ನೂ ಓದಿ: Kerala Crime: ಕೇರಳದಲ್ಲಿ ಆಘಾತಕಾರಿ ಘಟನೆ: ಟ್ರಾಲಿ ಬ್ಯಾಗ್​ನಲ್ಲಿತ್ತು ಖ್ಯಾತ ಹೋಟೆಲ್​ ಮಾಲೀಕನ ಶವ

ನಟ ಮತ್ತು ಮಿಮಿಕ್ರಿ ಕಲಾವಿದರೂ ಆಗಿರುವ ಜೋಬಿ ಅವರು ಸರ್ಕಾರಿ ಸ್ವಾಮ್ಯದ ಸಂಸ್ಥೆ ಕೇರಳ ಸ್ಟೇಟ್ ಫೈನಾನ್ಶಿಯಲ್ ಎಂಟರ್​ಪ್ರೈಸಸ್​ನ ಹಿರಿಯ ವ್ಯವಸ್ಥಾಪಕ ಹುದ್ದೆಯಿಂದ ನಿವೃತ್ತರಾಗುತ್ತಿದ್ದಾರೆ.

ರಾಜ್ಯದ ಹಣಕಾಸಿನ ಸ್ಥಿತಿ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಇಷ್ಟೊಂದು ಜನ ಒಟ್ಟಿಗೆ ನಿವೃತ್ತರಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಸೇವಾ ನಿವೃತ್ತಿ ಪ್ರಯೋಜನಗಳನ್ನು ಪಾವತಿಸಲು 1,500 ಕೋಟಿ ರೂ.ಗಳ ಮೊತ್ತ ಅಗತ್ಯವಿದೆ ಎನ್ನಲಾಗಿದೆ. ಆದಾಗ್ಯೂ, ಹಣಕಾಸಿನ ಕೊರತೆ ಕಾರಣ ಮುಂದೊಡ್ಡಿ ಯಾವುದೇ ಪಾವತಿಯನ್ನು ತಡೆಹಿಡಿಯಲಾಗುವುದಿಲ್ಲ ಎಂದು ಸರ್ಕಾರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ