Rahul Gandhi: ರಾಹುಲ್ ಗಾಂಧಿಗೆ ನೀಡಿದ್ದ ವೈಯಕ್ತಿಕ ಸಿಬ್ಬಂದಿಯನ್ನು ಹಿಂಪಡೆದ ಕೇರಳ ಸರ್ಕಾರ

ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಮತ್ತು ಚಾಲಕರಾದ ರತೀಶ್ ಕುಮಾರ್ ಕೆಆರ್ ಹಾಗೂ ಮುಹಮ್ಮದ್ ರಫಿ ಅವರು ಗೃಹ ಇಲಾಖೆಗೆ ಮರಳಿದ್ದಾರೆ ಎಂದು ‘ನ್ಯೂ ​​ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ.

Rahul Gandhi: ರಾಹುಲ್ ಗಾಂಧಿಗೆ ನೀಡಿದ್ದ ವೈಯಕ್ತಿಕ ಸಿಬ್ಬಂದಿಯನ್ನು ಹಿಂಪಡೆದ ಕೇರಳ ಸರ್ಕಾರ
ರಾಹುಲ್ ಗಾಂಧಿ
Follow us
Ganapathi Sharma
|

Updated on: Jun 06, 2023 | 9:17 PM

ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬೆನ್ನಲ್ಲೇ, ಅವರಿಗೆ ನೀಡಲಾಗಿದ್ದ ವೈಯಕ್ತಿಕ ಸಿಬ್ಬಂದಿಯನ್ನು ಕೇರಳ ಸರ್ಕಾರ (Kerala Government) ಹಿಂಪಡೆದಿದೆ. ವಯನಾಡ್ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಮತ್ತು ಚಾಲಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಸಾಮಾನ್ಯ ಆಡಳಿತ ಇಲಾಖೆಯ ಜಂಟಿ ಕಾರ್ಯದರ್ಶಿಯವರ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಮತ್ತು ಚಾಲಕರಾದ ರತೀಶ್ ಕುಮಾರ್ ಕೆಆರ್ ಹಾಗೂ ಮುಹಮ್ಮದ್ ರಫಿ ಅವರು ಗೃಹ ಇಲಾಖೆಗೆ ಮರಳಿದ್ದಾರೆ ಎಂದು ‘ನ್ಯೂ ​​ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ವಯನಾಡ್ ಸಂಸದರಾಗಿದ್ದ ರಾಹುಲ್ ಗಾಂಧಿ, ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಶಿಕ್ಷೆಗೆ ಗುರಿಯಾದ ನಂತರ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಸದ್ಯ ಅವರು ಜಾಮೀನಿನ ಮೇಲೆ ಇದ್ದಾರೆ. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಶಿಕ್ಷೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಸದ್ಯ ವಿಚಾರಣೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ ನೀಡಿದ ದೆಹಲಿ ಕೋರ್ಟ್

ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಮಾರ್ಚ್​ನಲ್ಲಿ ತೀರ್ಪು ನೀಡಿತ್ತು. ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದ ಸೂರತ್ ನ್ಯಾಯಾಲಯ ನಂತರ 30 ದಿನಗಳಿಗೆ ಜಾಮೀನು ಮಂಜೂರು ಮಾಡಿತ್ತು. ನಂತರ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆ ನಂತರ ಅವರು ದೆಹಲಿಯ ಸರ್ಕಾರಿ ಬಂಗಲೆಯನ್ನೂ ತೊರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ