AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷ ಭಾಷಣ: ಪಿಸಿ ಜಾರ್ಜ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ ಕೇರಳ ಪೊಲೀಸ್

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರದಲ್ಲಿದ್ದಾಗ ಮುಖ್ಯ ಸಚೇತಕರಾಗಿದ್ದ ಎಪ್ಪತ್ತರ ಹರೆಯದ ಜಾರ್ಜ್ ಅವರು ಕೇರಳದ ಮುಸ್ಲಿಮೇತರರು, ಮುಸ್ಲಿಂ ಸಮುದಾಯದಿಂದ ನಡೆಸಲ್ಪಡುವ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವಿಸುವುದು ಬೇಡ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು.

ದ್ವೇಷ ಭಾಷಣ: ಪಿಸಿ ಜಾರ್ಜ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ ಕೇರಳ ಪೊಲೀಸ್
ಪಿಸಿ ಜಾರ್ಜ್
TV9 Web
| Edited By: |

Updated on:May 10, 2022 | 9:04 PM

Share

ತಿರುವನಂತಪುರಂ:ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ ಒಂದು ವಾರದ ನಂತರ, ಮಂಗಳವಾರ ಹಿರಿಯ ರಾಜಕಾರಣಿ ಪಿ ಸಿ ಜಾರ್ಜ್ (P C George)  ವಿರುದ್ಧ  ದ್ವೇಷ ಭಾಷಣದ (Hate Speech) ಆರೋಪದ ಮೇಲೆ ಕೇರಳ ಪೊಲೀಸರು (Kerala Police) ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಮೇ 8 ರಂದು ವೆಣ್ಣಲಾದಲ್ಲಿ ನಡೆದ ದೇವಸ್ಥಾನದ ಉತ್ಸವದಲ್ಲಿ ಮಾಡಿದ  ಭಾಷಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಪಾಲಾರಿವಟ್ಟಂ ಪೊಲೀಸರು ಮಾಜಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಐಪಿಸಿ 153 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಿರುವನಂತಪುರಂನಲ್ಲಿ ದಾಖಲಾದ ಹಿಂದಿನ ಪ್ರಕರಣದ ವಿವರಗಳು ಮತ್ತು ಜಾಮೀನು ಷರತ್ತುಗಳನ್ನು ಪರಿಶೀಲಿಸಿದ ನಂತರ ಪ್ರಕರಣದ ಮುಂದಿನ ಪ್ರಕ್ರಿಯೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರದಲ್ಲಿದ್ದಾಗ ಮುಖ್ಯ ಸಚೇತಕರಾಗಿದ್ದ ಎಪ್ಪತ್ತರ ಹರೆಯದ ಜಾರ್ಜ್ ಅವರು ಕೇರಳದ ಮುಸ್ಲಿಮೇತರರು, ಮುಸ್ಲಿಂ ಸಮುದಾಯದಿಂದ ನಡೆಸಲ್ಪಡುವ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವಿಸುವುದು ಬೇಡ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು.

ಕಳೆದ ತಿಂಗಳ ಕೊನೆಯಲ್ಲಿಅನಂತಪುರಿ ಹಿಂದೂ ಮಹಾ ಸಮ್ಮೇಳನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇರಳದ ಮಾಜಿ ಕಾಂಗ್ರೆಸ್ ನಾಯಕ, ದೇಶದಲ್ಲಿ ಹಿಡಿತ ಸಾಧಿಸುವುದಕ್ಕಾಗಿ ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಲ್ಲಿ ಬಂಜೆತನಕ್ಕೆ ಕಾರಣವಾಗುವ ಹನಿಮದ್ದು ಬೆರೆಸಿದ ಚಹಾವನ್ನು ಮಾರಾಟ ಮಾಡಿ ಇತರರಿಗೆ ಬಂಜೆತನವುಂಟು ಮಾಡಲಾಗುತ್ತಿದೆ ಎಂದಿದ್ದರು.

ಈ ಹೇಳಿಕೆಯು ವ್ಯಾಪಕ ರಾಜಕೀಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಪ್ರಕರಣವನ್ನು ದಾಖಲಿಸಿ ಮೇ 1 ರಂದು ಅವರನ್ನು ಬಂಧಿಸಲಾಯಿತು. ಆದಾಗ್ಯೂ, ಬಂಧನವಾದ ಕೆಲವೇ ಗಂಟೆಗಳಲ್ಲಿ ಜಾರ್ಜ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಜಾಮೀನು ಪಡೆದರು. 33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಞಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಯಲ್ಲಿ ಎಲ್​​ಡಿಎಫ್ ಅಭ್ಯರ್ಥಿ ಮುಂದೆ ಪರಾಭವಗೊಂಡಿದ್ದರು.

ಇದನ್ನೂ ಓದಿ
Image
ಭಾಷಣದಲ್ಲಿ ಮುಸ್ಲಿಮರಿಗೆ ಅವಹೇಳನ; ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್​ ಪೊಲೀಸ್ ಕಸ್ಟಡಿಗೆ

ಈ ಸುದ್ದಿಯನ್ನು ಇಂಗ್ಲಿಷ್​​ನಲ್ಲಿ   ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Tue, 10 May 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?