ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ.
ಭೂಕುಸಿತ ಪೀಡಿತ ವಯನಾಡಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಆಕೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ, ಭಾರೀ ಮಳೆಯಿಂದ ಉಂಟಾದ ತೀವ್ರ ಭೂಕುಸಿತಗಳಿಂದ ಮೃತಪಟ್ಟವರ ಸಂಖ್ಯೆ 150ಕ್ಕೆ ಏರಿದೆ.
ಭಾರತೀಯ ಹವಾಮಾನ ಇಲಾಖೆಯು ಪರ್ವತ ಜಿಲ್ಲೆ ವಯನಾಡು ಮತ್ತು ಕೇರಳದ ಎಲ್ಲಾ ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯೊಂದಿಗೆ ಈ ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಇದು ಸೂಚಿಸುತ್ತದೆ.
ವಯನಾಡು, ಪಾಲಕ್ಕಾಡ್, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು, ಕಾಸರಗೋಡು, ಇಡುಕ್ಕಿ ಮತ್ತು ತ್ರಿಶೂರ್‌ಗಳಿಗೆ ರೆಡ್ ಅಲರ್ಟ್ ಜೊತೆಗೆ ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಅತ್ಯಂತ ಭಾರೀ ಮಳೆಯನ್ನು ಸೂಚಿಸುತ್ತದೆ, ಆದರೆ ಹಳದಿ ಅಲರ್ಟ್, ಭಾರೀ ಮಳೆಯನ್ನು ಸೂಚಿಸುತ್ತದೆ.
ಮತ್ತಷ್ಟು ಓದಿ: Wayanad landslide: ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆ, ಕೋಳಿಕ್ಕೋಡ್ನಲ್ಲಿ 9 ಬಾರಿ ಭೂಕುಸಿತ
ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಪತ್ತನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದಾರೆ. ಉತ್ತರ ಕೇರಳದಲ್ಲಿ ಪ್ರವಾಹ ಮತ್ತು ಮರಗಳು ಧರೆಗುರುಳಿದ್ದರಿಂದ ರೈಲು ಸೇವೆಗಳು ಸ್ಥಗಿತಗೊಂಡಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ