AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ 9 ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಅಂತಿಮ ಆದೇಶದವರೆಗೆ ಮುಂದುವರಿಯಬಹುದು: ಕೇರಳ ಹೈಕೋರ್ಟ್

ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಒಂಬತ್ತು ವಿಶ್ವವಿದ್ಯಾಲಯಗಳ ಕುಲಪತಿಯಾಗಿರುವ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದಿಸಿದ್ದಾರೆ.

ಕೇರಳದ 9 ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ಅಂತಿಮ ಆದೇಶದವರೆಗೆ ಮುಂದುವರಿಯಬಹುದು: ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 24, 2022 | 8:58 PM

ತಿರುವನಂತಪುರಂ: ಕೇರಳದಲ್ಲಿ (Kerala) ಒಂಬತ್ತು ವಿಶ್ವವಿದ್ಯಾನಿಲಯಗಳಲ್ಲಿ ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಪಿಣರಾಯಿ ವಿಜಯನ್ (Pinarayi Vijayan) ಸರ್ಕಾರ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವೆ ಹೊಸ ವಾಗ್ವಾದ ನಡೆದಿದೆ. ಈ ಸಂಬಂಧ ಇಂದು (ಸೋಮವಾರ) ಸಂಜೆ ಹೈಕೋರ್ಟ್ ವಿಚಾರಣೆ ನಡೆಸಿದೆ. ದೀಪಾವಳಿ ಸಂಜೆ ವಿಶೇಷ ಅಧಿವೇಶನದಲ್ಲಿ ಕೇರಳ ಹೈಕೋರ್ಟ್ ಭಾನುವಾರ ಸಂಜೆ ಹೊರಡಿಸಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿವಾದಾತ್ಮಕ ಆದೇಶವನ್ನು ಪ್ರಶ್ನಿಸಿ ಅರ್ಜಿಗಳನ್ನು ಆಲಿಸಿತು. ರಾಜ್ಯಪಾಲರ ಶೋಕಾಸ್ ನೋಟಿಸ್ ಅಡಿಯಲ್ಲಿ ಉಪಕುಲಪತಿಗಳು ಅಂತಿಮ ಆದೇಶ ನೀಡುವವರೆಗೆ ಮುಂದುವರಿಯಬಹುದು ಎಂದು ನ್ಯಾಯಾಲಯ ಹೇಳಿದೆ. ಕೇರಳ ಸರ್ಕಾರದಿಂದ ಸ್ವತಂತ್ರವಾಗಿ ನೇಮಕಗೊಂಡ ಉಪಕುಲಪತಿಗಳು ಇಂದು ಬೆಳಿಗ್ಗೆ 11.30 ರೊಳಗೆ ರಾಜೀನಾಮೆ ನೀಡುವಂತೆ ಗವರ್ನರ್ ಹೇಳಿದ್ದರು. ಆದರೆ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ಗವರ್ನರ್ ಅವರಿಗೆ ನೋಟಿಸ್ ನೀಡಿದರು.

ಉಪಕುಲಪತಿಗಳು ನವೆಂಬರ್ 3 ರಂದು ಅಥವಾ ಅದಕ್ಕೂ ಮೊದಲು ಸಂಜೆ 5 ಗಂಟೆಯೊಳಗೆ ಅಧಿಕಾರದಲ್ಲಿ ಮುಂದುವರಿಯಲು ಅವರ ಕಾನೂನುಬದ್ಧ ಹಕ್ಕು ಬಗ್ಗೆ ಕಾರಣವನ್ನು ತೋರಿಸಬೇಕು ಎಂದು ರಾಜ್ಯಪಾಲರು ಹೇಳಿದ್ದಾರೆ. ಪ್ರತಿಕ್ರಿಯೆ ನೀಡದೇ ಇದ್ದರೆ ಅವರ ನೇಮಕಾತಿಯನ್ನು “ಅಕ್ರಮ ಮತ್ತು ಅನೂರ್ಜಿತ” ಎಂದು ಪರಿಗಣಿಸಲಾಗುವುದು ಎಂದು ರಾಜಭವನ ತಿಳಿಸಿದೆ.

ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಒಂಬತ್ತು ವಿಶ್ವವಿದ್ಯಾಲಯಗಳ ಕುಲಪತಿಯಾಗಿರುವ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದಿಸಿದ್ದಾರೆ. ನೇಮಕಾತಿಗಳು ವಿಶ್ವವಿದ್ಯಾನಿಲಯ ಅನುದಾನ ಆಯೋಗದ ನಿಯಮಗಳಿಗೆ ವಿರುದ್ಧವಾಗಿವೆ ಮತ್ತು “ಕಾನೂನಲ್ಲಿ ಕೆಟ್ಟವು” ಎಂದು ಅವರು ಹೇಳಿದ್ದಾರೆ.

ಅಕ್ರಮವನ್ನು ತೆಗೆದುಹಾಕಲು ಮತ್ತು ಸರಿಯಾದ ನೇಮಕಾತಿಗಳನ್ನು ಮಾಡಲು ಕ್ರಮಗಳನ್ನು ಪ್ರಾರಂಭಿಸಲು ಉಪಕುಲಪತಿಗಳನ್ನು ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಎಂದು ರಾಜಭವನ ತಿಳಿಸಿದೆ.

ನಿಮ್ಮ ರಾಜೀನಾಮೆಯನ್ನು ನೀಡಲು ನೀವು ನಿರಾಕರಿಸಿರುವುದರಿಂದ ನಿಮ್ಮ ನೇಮಕಾತಿಯನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಘೋಷಿಸುವುದನ್ನು ಬಿಟ್ಟು ಬೇರೆ ಯಾವುದೇ ಆಯ್ಕೆಗಳಿಲ್ಲ ಎಂದು ರಾಜಭವನದ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್ ಮಾಡಲಾದ ಪತ್ರದಲ್ಲಿದೆ.  ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳನ್ನು “ನಾಶ” ಮಾಡುವ ಉದ್ದೇಶದಿಂದ ರಾಜ್ಯಪಾಲರು”ಯುದ್ಧ” ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ರಾಜ್ಯಪಾಲರು ಸಂಘಪರಿವಾರದ ಮೇಧಾವಿಯಂತೆ ವರ್ತಿಸುತ್ತಿದ್ದಾರೆ ಎಂದು ಪಿಣರಾಯಿ ಹೇಳಿದ್ದಾರೆ. ಗವರ್ನರ್ ಆದೇಶ ಖಂಡಿಸಿ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗದ ಕಾರ್ಯಕರ್ತರು ಇಂದು ಮುಂಜಾನೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ಆದೇಶವನ್ನು ನಿರಂಕುಶ, ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಕರೆದ ಸಿಪಿಎಂನ ಸೀತಾರಾಮ್ ಯೆಚೂರಿ, “ಅವರು ಅಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಿಸಲು ಬಯಸುತ್ತಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಸಾಧ್ಯವಾಗುವಂತೆ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಬಯಸುತ್ತಾರೆ ಎಂದಿದ್ದಾರೆ.

ಕೇರಳ ವಿಶ್ವವಿದ್ಯಾಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಜತ್ತ್ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ರಾಜ್ಯಪಾಲರ ಆದೇಶ ಬಂದಿದೆ.

ಪಿಣರಾಯಿ ವಿಜಯನ್ ಅವರ ಎಡ ನೇತೃತ್ವದ ಸರ್ಕಾರವು 2019 ರಲ್ಲಿ ರಾಜ್ಯಪಾಲರನ್ನು ನೇಮಿಸಿದಾಗಿನಿಂದಲೂ ಅವರ ಜೊತೆ ಜಗಳವಾಡುತ್ತಿದೆ. ಈ ಘರ್ಷಣೆಗಳು ಪೌರತ್ವ ತಿದ್ದುಪಡಿ ಕಾನೂನಿನಿಂದ ಹಿಡಿದು ಕೃಷಿ ಕಾನೂನುಗಳವರೆಗೆ ಹಲವಾರು ಸಮಸ್ಯೆಗಳನ್ನು ಒಳಗೊಂಡಿವೆ.

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ