Gold Smuggling Case ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮತ್ತು ಇತರರಿಗೆ ಕೇರಳ ಹೈಕೋರ್ಟ್ ಜಾಮೀನು

ಕುಖ್ಯಾತ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸರಿತ್ ಪಿ.ಎಸ್ ಅವರಿಗೆ ₹25 ಲಕ್ಷ ಜಾಮೀನು ಬಾಂಡ್ ಮತ್ತು  2 ಶ್ಯೂರಿಟಿಗಳೊಂದಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿದೆ .

Gold Smuggling Case ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮತ್ತು ಇತರರಿಗೆ ಕೇರಳ ಹೈಕೋರ್ಟ್ ಜಾಮೀನು
ಸ್ವಪ್ನಾ ಸುರೇಶ್
Follow us
| Updated By: ರಶ್ಮಿ ಕಲ್ಲಕಟ್ಟ

Updated on:Nov 02, 2021 | 2:45 PM

ತಿರುವನಂತಪುರಂ: ಕೇರಳದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಕುಖ್ಯಾತ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ (Gold smuggling case)  ಕೇರಳ ಹೈಕೋರ್ಟ್  ( Kerala High Court) ಮಂಗಳವಾರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ (Swapna Suresh) ಮತ್ತು ಸರಿತ್ ಪಿ.ಎಸ್ ಅವರಿಗೆ ₹25 ಲಕ್ಷ ಜಾಮೀನು ಬಾಂಡ್ ಮತ್ತು  2 ಶ್ಯೂರಿಟಿಗಳೊಂದಿಗೆ ಹೈಕೋರ್ಟ್ ಜಾಮೀನು ನೀಡಿದೆ .ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಮತ್ತು ಸಿ.ಜಯಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಕಳೆದ ವಿಚಾರಣೆಯ ದಿನದಂದು ತೀರ್ಪನ್ನು ಕಾಯ್ದಿರಿಸುವ ಮೊದಲು ಭಾಗಿಯಾಗಿರುವ ಎಲ್ಲರ  ಅರ್ಜಿಗಳನ್ನು ಆಲಿಸಿದ ನಂತರ ಇಂದು ತೀರ್ಪು ಪ್ರಕಟಿಸಿತು. ಅರ್ಜಿದಾರರು ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಮತ್ತು ವಿದೇಶಗಳಿಂದ ಹೆಚ್ಚಿನ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸುವುದಕ್ಕಾಗಿ ಬಂಧನದಲ್ಲಿದ್ದರು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ಗೆ ರವಾನಿಸಲಾದ ರಾಜತಾಂತ್ರಿಕ ಸರಕುಗಳ ಮೂಲಕ 30 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪ ಅವರ ಮೇಲಿತ್ತು.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಆಪಾದಿತ ಅಪರಾಧಗಳಿಗಾಗಿ ಸಿಆರ್​​ಪಿಸಿ (CrPC) ಸೆಕ್ಷನ್ 439 ರ ಅಡಿಯಲ್ಲಿ ಜಾಮೀನಿಗೆ ಅರ್ಜಿಗಳನ್ನು ಆದ್ಯತೆ ನೀಡಲಾಗಿದೆ.

ಮೇಲ್ಮನವಿಗಳನ್ನು ಮೊದಲು 21 ಮೇ 2021 ರಂದು ಸಲ್ಲಿಸಿದ್ದು ಹಲವು ಬಾರಿ ಮುಂದೂಡಲಾಗಿದೆ. ಕಳೆದ ವಿಚಾರಣೆ ವೇಳೆ ಪದೇ ಪದೇ ಮುಂದೂಡುವಂತೆ ಮನವಿ ಮಾಡಿದ್ದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ದೇಶದ ಆರ್ಥಿಕ ಭದ್ರತೆಗೆ ಧಕ್ಕೆ ತರಬಹುದು ಎಂಬ ಉದ್ದೇಶದಿಂದ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ವಕೀಲ ಸೂರಜ್ ಟಿ ಎಲೆಂಜಿಕಲ್ ಮೂಲಕ ಸಲ್ಲಿಸಿದ ಮೇಲ್ಮನವಿಯಲ್ಲಿ, ಚಾರ್ಜ್ ಶೀಟ್‌ನಲ್ಲಿರುವ ವಿಷಯವು ಯುಎಪಿಎ ಅಡಿಯಲ್ಲಿ ಯಾವುದೇ ಅಪರಾಧವನ್ನು ತೋರಿಸುತ್ತಿಲ್ಲ ಎಂದು ಹೇಳಿದ್ದಾರೆ.

ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (COFEPOSA) ಅಡಿಯಲ್ಲಿ ಆರೋಪಿಗಳ ನಿರಂತರ ತ ಬಂಧನವನ್ನು ನ್ಯಾಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ. ಆದರೆ, ಎನ್‌ಐಎ ಪ್ರಕರಣದಲ್ಲಿ ಬಂಧನದಲ್ಲಿರುವ ಕಾರಣ ಸ್ವಪ್ನಾ ಜೈಲಿನಲ್ಲೇ ಉಳಿದಿದ್ದಾರೆ.

ಕಳೆದ ವಾರ ಪೀಠವು ಎನ್‌ಐಎ ಪ್ರಕರಣದಲ್ಲಿ ಆರೋಪಿಗಳು ತಮ್ಮ ವಕೀಲರ ಮೂಲಕ ಸಲ್ಲಿಸಿದ ಸಲ್ಲಿಕೆಗಳನ್ನು ವಿವರವಾಗಿ ದಾಖಲಿಸಿತ್ತು. ಅರ್ಜಿದಾರರ ಪರ ಹಿರಿಯ ವಕೀಲರಾದ ಎಸ್.ಶ್ರೀಕುಮಾರ್, ಸಿ.ಸಿ. ಥಾಮಸ್ ಮತ್ತು ಗೋಪಕುಮಾರನ್ ನಾಯರ್,  ವಕೀಲರಾದ ನಿರೀಶ್ ಮ್ಯಾಥ್ಯೂ, ಮಾರ್ಟಿನ್ ಜೋಸ್, ಮನು ಟಾಮ್, ಸೂರಜ್ ಟಿ ಎಲೆಂಜಿಕಲ್ ಮತ್ತು ಅಶ್ವಿನ್ ಕುಮಾರ್ ಕೂಡ ಈ ಪ್ರಕರಣದಲ್ಲಿ ವಾದ ಮಂಡಿಸಿದರು.

ಇದನ್ನೂ ಓದಿ: Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ

Published On - 2:31 pm, Tue, 2 November 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ